2028ರ ಚುನಾವಣೆಗೆ ಮಾಜಿ ಸಂಸದೆ ಸುಮಲತಾ ಸ್ಪರ್ಧೆ ಖಚಿತವಾಗಿದೆ. ಇದನ್ನು ಸ್ವತಃ ಸುಮಲತಾ ಅವರೇ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದಲೇ ಸ್ಪರ್ಧೆಗಿಳಿಯುವಂತೆ, ಬಿಜೆಪಿ ನಾಯಕರು ಆಹ್ವಾನ ನೀಡಿದ್ದರು.
ಆದರೆ, ರಾಜ್ಯ ರಾಜಕಾರಣಕ್ಕೆ ಬರುವ ಮನಸ್ಸು ಇಲ್ಲವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದೆ. ಮದ್ದೂರು ನನ್ನ ಪತಿ ಅಂಬರೀಶ್ ಅವರ ಕರ್ಮಭೂಮಿ. ಹೀಗಾಗಿ ನಾನು ಅಥವಾ...
ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ, ದಾಖಲೆಯ ಮತದಾನವಾಗಿದೆ. 121 ಕ್ಷೇತ್ರಗಳಲ್ಲಿ ನಡೆದ ಚುನಾವಣೆಯಲ್ಲಿ, 3.75 ಕೋಟಿ ಮತದಾರರಲ್ಲಿ ಶೇಕಡಾ 65ರಷ್ಟು ಮಂದಿ ಮತ ಚಲಾಯಿಸಿದ್ದಾರೆ. ಇದು ಆಡಳಿತಾರೂಢ ಎನ್ ಡಿಎಯ ಜನಪ್ರಿಯತೆಗೆ, ಅಗ್ನಿ ಪರೀಕ್ಷೆಯಾಗಿದೆ.
ಚುನಾವಣಾ ಆಯೋಗ, ವಿಧಾನಸಭಾ ಚುನಾವಣೆಯ ಮೊದಲ ಹಂತವು, ಬಿಹಾರದ ಇತಿಹಾಸದಲ್ಲಿ ಇದುವರೆಗಿನ ಅಧಿಕ ಎಂದಿದೆ. ಶೇಕಡಾ 64.66ರಷ್ಟು ಮತದಾನದೊಂದಿಗೆ...
ಮೈಸೂರು ಜಿಲ್ಲೆ ಹುಣಸೂರು ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ಚುನಾವಣೆಯಲ್ಲಿ, ಜೆಡಿಎಸ್ ತನ್ನ ದಶಕಗಳ ಏಕಚಕ್ರಾಧಿಪತ್ಯವನ್ನು ಮುಂದುವರೆಸಿದೆ. ಆಡಳಿತ ಮಂಡಳಿಯ 8 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ, ಶಾಸಕ ಜಿ.ಡಿ. ಹರೀಶ್ ಗೌಡ ನೇತೃತ್ವದ ಜೆಡಿಎಸ್ ಬೆಂಬಲಿತ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
1 ವಾರದ ಹಿಂದೆ ನಡೆದ ಸಂಘದ ಸೊಸೈಟಿಗಳನ್ನು ಪ್ರತಿನಿಧಿಸುವ 1ನೇ...
ಪಾಂಡವಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಇತ್ತೀಚಿನ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ 12 ಅಭ್ಯರ್ಥಿಗಳಲ್ಲಿ 9 ಮಂದಿ ಗೆಲುವು ಸಾಧಿಸಿದ್ದಾರೆ. ರೈತ ಸಂಘ – ಕಾಂಗ್ರೆಸ್ ಮೈತ್ರಿ ಬೆಂಬಲಿತ 12 ಅಭ್ಯರ್ಥಿಗಳಲ್ಲಿ ಕೇವಲ 3 ಮಂದಿ ಮಾತ್ರ ಆಯ್ಕೆಯಾಗಿದ್ದು, 7 ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸೋಲನ್ನು ಅನುಭವಿಸಿದ್ದಾರೆ.
ಸಾಮಾನ್ಯ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ...
ತಿಪಟೂರು:ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಆರೋಪದ ಮೇರೆಗೆ, ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ನಾಲ್ವರು ಸದಸ್ಯರ ಸದಸ್ಯತ್ವವನ್ನು ಜಿಲ್ಲಾಧಿಕಾರಿ ನ್ಯಾಯಾಲಯ ಅನರ್ಹಗೊಳಿಸಿದೆ.
31ನೇ ವಾರ್ಡ್ ಬಿಜೆಪಿ ಬೆಂಬಲಿತ ಸದಸ್ಯೆ ಅಶ್ವಿನಿ ದೇವರಾಜು, 16ನೇ ವಾರ್ಡ್ ಬಿಜೆಪಿ ಬೆಂಬಲಿತ ಸದಸ್ಯೆ ಪದ್ಮಶಿವಪ್ಪ, 11ನೇ ವಾರ್ಡ್ ಜೆಡಿಎಸ್ ಬೆಂಬಲಿತ ಸದಸ್ಯ ಎಂ.ಬಿ.ಜಯರಾಂ, 24ನೇ ವಾರ್ಡ್...
ಇಡೀ ರಾಜ್ಯದ ರಾಜಕಾರಣ ಒಂದಾದ್ರೆ, ಬೆಳಗಾವಿ ರಾಜಕೀಯದ ಕಿಚ್ಚೇ ಬೇರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಜಾರಕಿಹೊಳಿ, ಕತ್ತಿ ಫ್ಯಾಮಿಲಿ ನಡುವಿನ ಸಮರ ಜೋರಾಗಿದೆ. ಎಲ್ಲೇ ಹೋದ್ರೂ ಪರಸ್ಪರ ವಾಗ್ದಾಳಿ, ಟೀಕೆ-ಟಿಪ್ಪಣಿಗಳನ್ನ ನಡೆಸ್ತಿದ್ದಾರೆ. ಸದ್ಯ, ರಮೇಶ್ ಕತ್ತಿ ವಿರುದ್ಧ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗುಡುಗಿದ್ದಾರೆ.
ರಾಜಕಾರಣ ಎಂದ್ರೆ ತಂತ್ರಗಾರಿಕೆ ನಡೆಯುವುದು ಸಹಜ....
ಮಾಲೂರಿನ ಮರು ಮತಎಣಿಕೆಯಲ್ಲಿ ಬಿಜೆಪಿ ಗೆದ್ರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಸವಾಲು ಹಾಕಿದ್ದಾರೆ. ಹೈಕೋರ್ಟ್ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಯಲಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥಗೌಡ ಗೆಲುವು ಸಾಧಿಸಿದ್ರೆ, ರಾಜಕೀಯ ನಿವೃತ್ತಿ ಸ್ವೀಕರಿಸುತ್ತೇನೆ. ಮರು ಮತ ಎಣಿಕೆಯ ಹೈಕೋರ್ಟ್ ಆದೇಶಕ್ಕೆ,...
ಬಿಹಾರ ಚುನಾವಣೆ ಘೋಷಣೆಯಾಗುವ ಮುನ್ನವೇ, ಬಿಜೆಪಿ ಪಾಲಿಗೆ ಮಿತ್ರಪಕ್ಷಗಳೇ ಬಿಸಿತುಪ್ಪವಾಗುತ್ತಿವೆ. ಸದ್ಯದ ಬೆಳವಣಿಗೆಗಳನ್ನ ನೋಡಿದ್ರೆ 2018ರಲ್ಲಿ ಕರ್ನಾಟಕದಲ್ಲಿ ನಡೆದಿದ್ದ ಸನ್ನಿವೇಶವೇ, ಬಿಹಾರದಲ್ಲಿ ಮರುಕಳಿಸುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್. ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಬಿಹಾರ ಚುನಾವಣೆ ಕುರಿತ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ಬಿಹಾರ ಸಿಎಂ...
ಇದೇ ಆಗಸ್ಟ್ 5ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಬರ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ. ಅದರಲ್ಲೂ ಕರ್ನಾಟಕದಲ್ಲೇ ಚುನಾವಣಾ ಅಕ್ರಮ ಆಗಿದೆ ಅಂತಾ, ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಹೀಗಾಗಿ ಮತಗಳ್ಳತನ ವಿರುದ್ಧ ಕಾಂಗ್ರೆಸ್ ಹೋರಾಟ ಹಮ್ಮಿಕೊಂಡಿದೆ.
ರಾಹುಲ್ ಗಾಂಧಿ ಅವರು ಮತಗಳ್ಳತನದ ವಿರುದ್ಧದ ತಮ್ಮ ಹೋರಾಟವನ್ನು ಕರ್ನಾಟಕದಿಂದಲೇ...
ಮೈಸೂರು ಸಮಾವೇಶದ ಬಳಿಕ ಹಾಸನ ಜಿಲ್ಲೆಯಲ್ಲಿ ಸಮಾವೇಶ ಮಾಡಲು ಕಾಂಗ್ರೆಸ್ ಸಜ್ಜಾಗಿದೆ. ಅರಸೀಕೆರೆಯಲ್ಲಿ ಜುಲೈ 26ಕ್ಕೆ ಬೃಹತ್ ಸಮಾವೇಶಕ್ಕೆ ವೇದಿಕೆ ಸಿದ್ಧತೆ ಮಾಡಲಾಗ್ತಿದೆ. ಅಂದು ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ.
ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, 4 ಜೆಡಿಎಸ್, 2 ಬಿಜೆಪಿ ಮತ್ತು ಕೇವಲ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...