ಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಭ್ರೂಣ ಲಿಂಗ ಪತ್ತೆಗೆ ಮುಂದಾದವರ ಬಗ್ಗೆ ಮಾಹಿತಿ ನೀಡುವವರಿಗೆ ನೀಡುತ್ತಿದ್ದ ಬಹುಮಾನವನ್ನು ₹50,000 ರಿಂದ ₹1 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಶುಕ್ರವಾರ ಆರೋಗ್ಯ ಇಲಾಖೆಯಿಂದ ಆರೋಗ್ಯ ಸೌಧದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ...