ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿ ಮದುವೆ ಆಸೆ ತೋರಿಸಿ ಯುವತಿಗೆ ಕೋಟಿ ಕೋಟಿ ರೂಪಾಯಿಗಳ ವಂಚನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ, ವಿಜಯ್ ರಾಜ್ ಗೌಡ, ಬೋರೆಗೌಡ ಮತ್ತು ಸೌಮ್ಯ ಎಂಬ ಮೂವರ ವಿರುದ್ಧ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ವೈಟ್‌ಫೀಲ್ಡ್ ಮೂಲದ ಯುವತಿ, ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್, ಮ್ಯಾಟ್ರಿಮೋನಿಯಲ್ ಮೂಲಕ ಪರಿಚಯವಾದ ವ್ಯಕ್ತಿಯ...