Tuesday, November 11, 2025

#formers protest

ಮಂಡ್ಯದಲ್ಲೂ ರೈತರ ಪ್ರತಿಭಟನೆ : ಉಗ್ರ ಹೋರಾಟದ ಎಚ್ಚರಿಕೆ

ಮಂಡ್ಯ: ಉತ್ತರ ಕರ್ನಾಟಕದ ರೈತರ ಹೋರಾಟಕ್ಕೆ ಬೆಂಬಲವಾಗಿ ಮಂಡ್ಯದಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಕಬ್ಬಿನ ದರ ಏರಿಕೆಗಾಗಿ ಆಗ್ರಹಿಸುತ್ತಾ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ರೈತರು, ಸರ್ಕಾರದ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರೈತನ ಕಷ್ಟಕ್ಕೆ ಯಾವುದೇ...

ಕಬ್ಬು ಬೆಲೆ, ರೈತರ ಕಿಚ್ಚು : ಸಿಎಂ ರಾಜೀನಾಮೆಗೆ ಒತ್ತಾಯ

ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರ ಆಕ್ರೋಶ ದಿನೇ ದಿನೇ ತೀವ್ರಗೊಳ್ಳುತ್ತಿದ್ದಂತೆ, ರಾಜಕೀಯ ವಲಯದಲ್ಲೂ ಆರೋಪ-ಪ್ರತ್ಯಾರೋಪಗಳ ಜ್ವಾಲೆ ಎದ್ದಿದೆ. ಪ್ರತಿಟನ್ ಕಬ್ಬಿಗೆ ₹3,500 ದರ ನಿಗದಿ ಮಾಡುವಂತೆ ರೈತರು ಬೀದಿಗಿಳಿದಿದ್ದಾರೆ. ಆದರೆ ಸಮಸ್ಯೆ ಬಗೆಹರಿಸುವ ಬದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರವನ್ನು ದೂಷಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು...

ಇಳುವರಿಗೂ ದರ ನಿಗದಿಗೂ ಏನ್ ಸಂಬಂಧ..?

ರಾಜ್ಯದ ಕಬ್ಬು ಬೆಳೆಗಾರರು ಬೀದಿಗೆ ಇಳಿದು ಕ್ರಾಂತಿಗೆ ಮುಂದಾಗಿದ್ದಾರೆ. ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹3,500 ದರ ನೀಡಬೇಕು ಎಂದು ಆಗ್ರಹಿಸಿ, ಹೋರಾಟ ಮಾಡ್ತಿದ್ದಾರೆ. ಬೆಳಗಾವಿಯಲ್ಲಿ 1 ವಾರದಿಂದ ಅಹೋರಾತ್ರಿ ಪ್ರತಿಭಟನೆ ಕೈಗೊಳ್ಳಲಾಗಿದೆ. ಪ್ರತಿಭಟನೆನಿರತ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾರೆ. ರಾಜ್ಯದ ಕಬ್ಬು ಬೆಳೆಗಾರರು, ಸರ್ಕಾರ, ಸಕ್ಕರೆ ಕಾರ್ಖಾನೆಗಳ ನಡುವಿನ ಸಂಘರ್ಷಕ್ಕೆ ದೊಡ್ಡ...

ನಮ್ಮ ಕೈಯಲ್ಲಿ ಏನೂ ಇಲ್ಲ.. ರೈತರಿಗೆ ಜಾರಕಿಹೊಳಿ ಸ್ಪಷ್ಟನೆ

ರಾಜ್ಯದಲ್ಲಿ ಕಬ್ಬಿಗೆ ಬೆಂಬಲ ಬೆಲೆ ನಿಗದಿಯಾಗುವ ವಿವಾದ ದಿನದಿಂದ ದಿನಕ್ಕೆ ಕಾವೇರುತ್ತಿದೆ. ರೈತರ ಪ್ರತಿಭಟನೆಯ ಹಿನ್ನೆಲೆ, ಸರ್ಕಾರದ ಪರವಾಗಿ ಸಚಿವ ಎಚ್.ಕೆ. ಪಾಟೀಲ್ ಅವರು ರೈತರ ಅಹವಾಲು ಕೇಳಿದ್ದಾರೆ. ಈ ವಿಷಯ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಆದರೆ, ಕಬ್ಬಿನ ಬೆಲೆ ನಿಗದಿ...

ಸಿಹಿಯಾದ ಉದ್ಯಮ ಕಹಿಯಾಯ್ತು : ಕಬ್ಬಿನ ಬೆಲೆಯ ದೊಡ್ಡ ಯುದ್ಧ

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಹೋರಾಟ 8ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ಮೇಲೂ ಒತ್ತಡ ತೀವ್ರಗೊಳ್ಳುತ್ತಿದೆ. ಬೇಡಿಕೆ ಈಡೇರಿಸುವಂತೆ ರೈತರು ಪಟ್ಟು ಹಿಡಿದಿದ್ದು, ಮಾತುಕತೆಗೂ ನಿರಾಕರಣೆ ಮಾಡಿದ್ದಾರೆ. ಈ ನಡುವೆ ಗುರುವಾರ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಈಗಾಗಲೇ ಪ್ರತಿಭಟನಾ ನಿರತ ಸ್ಥಳಕ್ಕೆ ಕಾನೂನು...

ಸರ್ಕಾರದ ಎದುರು ರೈತರ 7 ಬೇಡಿಕೆಗಳು!

ಕಬ್ಬಿನ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಆರಂಭವಾಗಿರುವ ಹೋರಾಟದ ಕಿಚ್ಚು, ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಬೆಳಗಾವಿಯಲ್ಲಿ 7ನೇ ದಿನಕ್ಕೆ ಅಹೋರಾತ್ರಿ ಹೋರಾಟ ಮುಂದುವರೆದಿದ್ದು, 7 ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಕಬ್ಬು ಬೆಳೆಗಾರರ ಬೇಡಿಕೆಗಳು ಏನು ಅನ್ನೋದನ್ನ ನೋಡೋದಾದ್ರೆ.. 1) 1 ಟನ್‌ ಕಬ್ಬಿಗೆ 3,500ಕ್ಕೂ ಹೆಚ್ಚಿನ ದರ ನಿಗದಿ 2) ಕಬ್ಬಿಗೆ ಬೆಂಬಲ ಬೆಲೆ ನೀಡಿ 3) ಕೇಂದ್ರ, ರಾಜ್ಯದಿಂದ...

ರಸ್ತೆಯಲ್ಲೇ ಮಲಗಿದ್ದ ರೈತರಿಗೆ ಡಿಸಿ ಹೇಳಿದ್ದೇನು?

ರಾಷ್ಟ್ರೀಯ ಹೆದ್ದಾರಿ 206ರ ಭೂ ಸ್ವಾಧೀನದ ಪರಿಹಾರ ದರ ನಿಗದಿಯಲ್ಲಿ ಅನ್ಯಾಯವಾಗಿದೆಯಂತೆ. ಹಾಸನ ಜಿಲ್ಲೆ ಅರಸಿಕೆರೆ ತಾಲ್ಲೂಕಿನ ಬೆಂಡೆಕೆರೆಯಲ್ಲಿ ರೈತರು ಆರೋಪಿಸಿದ್ದು, ರಸ್ತೆಯ ಮಧ್ಯೆ ಮಲಗಿ ಪ್ರತಿಭಟನೆ ನಡೆಸಿದ್ದಾರೆ. ಮನೆ ಮತ್ತು ಜಮೀನು ವಶಕ್ಕೆ ಪಡೆಯುವ ಮೊದಲು, ಜಿಲ್ಲಾಡಳಿತ ಯಾವುದೇ ಮುನ್ಸೂಚನೆ ನೀಡಿಲ್ಲ ಎನ್ನಲಾಗ್ತಿದೆ. ಏಕಾಏಕಿ ಜೆಸಿಬಿ ಸಹಾಯದಿಂದ ಕಾಮಗಾರಿ ಪ್ರಾರಂಭಿಸಲು ಯತ್ನಿಸಿದ್ದು, ರೈತರು ತೀವ್ರ...

ರೈತರಿಗೆ ಅಧಿಕಾರ ಕೊಡುವುದು ಗೊತ್ತು ತೊಡೆ ಮುರಿಯುವುದು ಗೊತ್ತು

ಬಿಡದಿಯಲ್ಲಿ ಟೌನ್ ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟಕ್ಕೆ, ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಅನ್ನದಾತರ ಪರ ನಿಂತಿದ್ದಾರೆ. ಹೋರಾಟದಲ್ಲಿ ಭಾಗಿಯಾಗಿ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರು ರೈತರಿಂದ ಒಂದಿಂಚೂ ಭೂಮಿಯನ್ನ ಕಸಿದುಕೊಳ್ಳಲು ನಾವು ಬಿಡುವುದಿಲ್ಲ ಎಂದು ಗುಡುಗಿದ್ದಾರೆ. ಸರ್ಕಾರ ಟೌನ್‌ಶಿಪ್...

ರೈತರ ಬಗ್ಗೆ ಮಾತಾಡುವಾಗ ಎಚ್ಚರ ಇರಲಿ..

ರೈತರು ಧಿಕ್ಕಾರ ಕೂಗಲು ಮಾತ್ರ ಸಾಧ್ಯ ಎಂದು ಡಿ.ಕೆ. ಶಿವಕುಮಾರ್ ಹೇಳಿ‌ದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗುಡುಗಿದ್ದಾರೆ. ಬಿಡದಿ ಸ್ಮಾರ್ಟ್‌ ಸಿಟಿ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು ದಕ್ಷಿಣ ಭಾಗದ ರೈತರು ಪ್ರತಿಭಟನೆಗೆ ಮುಂದಾಗಿದ್ರು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಡಿಕೆಶಿ, ಗರಂ ಆಗಿ ರೈತರ ಬಗ್ಗೆ ಕೇವಲವಾಗಿ ಮಾತನಾಡಿದ್ರು. ನೀವು...

6 ಸಾವಿರ ರೈತರ ಆಕ್ರೋಶ : ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ

ತುಮಕೂರು ತಾಲ್ಲೂಕಿನಲ್ಲಿ ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸಿರುವ ಕ್ರಮ ರೈತರಲ್ಲಿ ಆಕ್ರೋಶ ಉಂಟುಮಾಡಿದ್ದು, ಈ ಸಂಬಂಧ 6 ಸಾವಿರ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಶಾಸಕ ಬಿ. ಸುರೇಶ್‌ಗೌಡ ಎಚ್ಚರಿಸಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯ ನಂತರ ಮಾತನಾಡಿದ ಶಾಸಕರು, ಫಾರಂ 57ರಲ್ಲಿ ಸಲ್ಲಿಕೆಯಾಗಿರುವ 6 ಸಾವಿರ...
- Advertisement -spot_img

Latest News

ಕೆಂಪುಕೋಟೆ ಬಳಿ ಭಾರೀ ಸ್ಫೋಟ — 10 ಸಾವು, 24ಕ್ಕೂ ಹೆಚ್ಚು ಮಂದಿಗೆ ಗಾಯ

ದೆಹಲಿ ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಎರಡು ಕಾರುಗಳು ಸ್ಫೋಟಗೊಂಡ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಮತ್ತು...
- Advertisement -spot_img