ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಜಟಾಪಟಿ ಮತ್ತೊಮ್ಮೆ ತೀವ್ರಗೊಂಡಿದೆ. ಸಾಲು ಸಾಲು ಸಂಧಾನ ಸಭೆಗಳು ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ, ಸಾರಿಗೆ ನೌಕರರು ಮತ್ತೆ ಹೋರಾಟದ ಹಾದಿ ಹಿಡಿದಿದ್ದಾರೆ. ಸರ್ಕಾರದ ಮೇಲೆ ಒತ್ತಡ ಹೆಚ್ಚಿಸುವ ಉದ್ದೇಶದಿಂದ ಜನವರಿ 29ರಂದು ‘ಬೆಂಗಳೂರು ಚಲೋ’ ನಡೆಸಲು ದಿನಾಂಕ ನಿಗದಿಪಡಿಸಿದ್ದಾರೆ.
ಸಾರಿಗೆ ನೌಕರರ ಒಕ್ಕೂಟದ ನೇತೃತ್ವದಲ್ಲಿ ಜನವರಿ...