ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಕಾವೇರಿದೆ ಬದ್ಧವೈರಿಗಳ ಜಟಾಪಟಿ. ಕಾಂಗ್ರೆಸ್ ಸರ್ಕಾರದ ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಜೆಡಿಎಸ್ ಪಕ್ಷದಿಂದ ಬೆಂಗಳೂರಿನಲ್ಲಿ ಇಂದು ಬೃಹತ್ ಪ್ರತಿಭಟನೆ ಮತ್ತು 'ವಿಧಾನಸೌಧ ಚಲೋ' ಹಮ್ಮಿಕೊಳ್ಳಲಾಗಿತ್ತು. ಫ್ರೀಡಂ ಪಾರ್ಕ್‌ನಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ದಳಪತಿಗಳು ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ,...
ಬೆಂಗಳೂರು: ಬಿಡದಿ ಟೌನ್‌ಶಿಪ್ ಹಾಗೂ NICE Road ಯೋಜನೆಗೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯುತ್ತಿದೆ.
ಬಿಡದಿ ಭಾಗದಲ್ಲಿ ನಡೆಯುತ್ತಿದ್ದ ಜೆಡಿಎಸ್ ಪಾದಯಾತ್ರೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಜೆಡಿಎಸ್ ನಾಯಕರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದರು. ಇಂದು ಬೆಳಗ್ಗೆಯಿಂದಲೇ ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್ ಕಾರ್ಯಕರ್ತರು...
ಬಿಡದಿ ಸಮೀಪದ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆ ವಿರುದ್ಧ ಆಕ್ರೋಶ ತೀವ್ರವಾಗುತ್ತಿರುವ ನಡುವೆ, ಭೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ನಿಯೋಗವು ಭಾನುವಾರ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಯೋಜನೆ ಮರುಪರಿಶೀಲನೆ ನಡೆಸುವಂತೆ ಆಗ್ರಹಿಸಿತು.
'ಬೈರಮಂಗಲ, ಕಂಚುಗಾರನಹಳ್ಳಿ ಗ್ರಾಮ ಪಂಚಾಯತ್‌ಗಳ ರೈತ ಭೂ ಹಿತರಕ್ಷಣಾ ಸಮಿತಿ'ಯ ಭಾಗವಾಗಿರುವ ರೈತರು,...
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರನ್ನು ಹಿರಿಯ ಜೆಡಿಎಸ್ ನಾಯಕ ಜಿ. ಟಿ. ದೇವೇಗೌಡ ಅಚಾನಕ್ ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಡುವೆ ನಡೆದ ಈ ಭೇಟಿ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
ಬೆಂಗಳೂರಿನಲ್ಲಿ ನಡೆದ ಈ ಭೇಟಿಯ ವೇಳೆ ಇಬ್ಬರು ನಾಯಕರು ಕೆಲಕಾಲ ರಾಜಕೀಯ ಬೆಳವಣಿಗೆಗಳು, ಪಕ್ಷದ ಒಳಾಂಗಣ...
2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಅನುಭವಿಸಿದ ಸೋಲನ್ನು ನೆನೆದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ʼಆ ಸೋಲೇ ನನ್ನ ರಾಜಕೀಯ ಪಕ್ವತೆಗೆ ಟರ್ನಿಂಗ್ ಪಾಯಿಂಟ್ʼ ಎಂದು ಹೆಮ್ಮೆಯಿಂದ ಹೇಳಿದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರದಲ್ಲಿ ನಡೆದ ಜೆಡಿಎಸ್ 25ನೇ ವರ್ಷದ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ನಿಖಿಲ್, ಮಂಡ್ಯ ಜನರ ಪ್ರೀತಿ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ JDSಗೆ ಹೋಗುವ ಪ್ರಶ್ನೆಯೇ ಇಲ್ಲ, ಬಿಜೆಪಿಯನ್ನು ರಿಪೇರಿ ಮಾಡುವುದಾಗಿ ಹೇಳಿದರು.
ರಾಜ್ಯದಲ್ಲಿ BJP ಜೆಡಿಎಸ್ ಮೈತ್ರಿ ಇದೆ. ಇದು ಮುಂದುವರಿಯಬೇಕು ಅನ್ನುವವರು ನಾವು. ದೇವೇಗೌಡರು ಹಾಗೂ ಕುಮಾರಸ್ವಾಮಿ ಒಂದು...
ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ JDS ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನವದೆಹಲಿಯಲ್ಲಿ ಮಹತ್ವದ ಸಂಘಟನಾ ಸಭೆ ನಡೆಯಿತು. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಕೇಂದ್ರ ಸಚಿವ, JDS ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪಕ್ಷದ ಮುಖಂಡರು ಹಾಗೂ...
ರಾಜ್ಯ ರಾಜಕೀಯದಲ್ಲಿ ಜನತಾ ದಳ ಪಕ್ಷ ಮಹತ್ವದ ಸಂಘಟನಾತ್ಮಕ ಬದಲಾವಣೆಗೆ ಮುಂದಾಗಿದೆ. ರಾಜ್ಯಾದ್ಯಂತ ತನ್ನ ಎಲ್ಲಾ ಘಟಕಗಳ ಮರುರಚನೆಗೆ ಮುಂದಾಗಿರುವ ಜನತಾ ದಳ ಪಕ್ಷವು, ಸಂಕ್ರಾಂತಿ ಬಳಿಕ ಹೊಸ ಪದಾಧಿಕಾರಿಗಳ ನೇಮಕಕ್ಕೆ ಸಿದ್ಧವಾಗುತ್ತಿದೆ. ಇದರಿಂದಾಗಿ ಪಕ್ಷದ ಒಳರಾಜಕೀಯದಲ್ಲಿ ಚಟುವಟಿಕೆ ಗರಿಗೆದರಿದೆ.
ಮಹಿಳಾ ಘಟಕ, ಯುವ ಜೆಡಿಎಸ್, ರೈತ ಘಟಕ, SC-ST, ವಿಭಾಗ, ಕಾನೂನು ವಿಭಾಗ, ಹಿಂದುಳಿದ...
ರಾಜ್ಯದ ಹಿರಿಯ ರಾಜಕಾರಣಿ ಹಾಗೂ ಬಾಗಲಕೋಟೆಯ ಶಾಸಕ ಹೆಚ್.ವೈ. ಮೇಟಿ ಅವರು ಇಂದು ಜೀವನ ಪಯಣ ಮುಗಿಸಿದ್ದಾರೆ. 79ನೇ ವಯಸ್ಸಿನಲ್ಲಿ ಅವರು ವಿಧಿವಶರಾಗಿದ್ದು, ಅವರ ನಿಧನದಿಂದ ರಾಜ್ಯ ರಾಜಕೀಯ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ.
ಮೇಟಿ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಹಿರಿಯ ಸದಸ್ಯರಾಗಿದ್ದು, 14ನೇ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಸಿದ್ದರಾಮಯ್ಯ ನೇತೃತ್ವದ...
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಳಿ ಜ್ವರ ಮತ್ತು ಯೂರಿನ್ ಇನ್ಫೆಕ್ಷನ್‌ನಿಂದ ಬಳಲುತ್ತಿದ್ದ ಅವರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅಕ್ಟೋಬರ್ 8ರ ರಾತ್ರಿ ದೇವೇಗೌಡರನ್ನು ತೀವ್ರ ನಿಗಾ ಘಟಕದಿಂದ ವಾರ್ಡ್‌ಗೆ ಸ್ಥಳಾಂತರಿಸಿ ಮುಂದಿನ ಚಿಕಿತ್ಸೆ ನೀಡಲಾಗುತ್ತಿದೆ.
ತಂದೆಯ ಆರೋಗ್ಯ ವಿಚಾರಿಸಲು ಕೇಂದ್ರ ಸಚಿವ...