ದೆಹಲಿ: ರಾಜ್ಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಜೊತೆ ನಡೆಸುತ್ತಿರೋ ಸಭೆಯಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರೋ ಅಸಮಾಧಾನದ ಬಗ್ಗೆ ಚರ್ಚೆ ನಡೀತಿದೆ. ಆದ್ರೆ ಈ ಭಿನ್ನಾಭಿಪ್ರಾಯ ಮೈತ್ರಿ ಸರ್ಕಾರದಲ್ಲಿ ಸಹಜ ಅಂತ ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ನಡೆದ ಚರ್ಚೆ ವೇಳೆ ಮಾತನಾಡಿದ ಪರಮೇಶ್ವರ್, ಜೆಡಿಎಸ್ ನಾಯಕರು ಪದೇ ಪದೇ...
ದೆಹಲಿ: ದೆಹಲಿಯಲ್ಲಿ ರಾಹುಲ್ ಜೊತೆ ರಾಜ್ಯ ಕೈ ನಾಯಕರ ಸಭೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ನೀಡಿದ್ದಾರೆ.
ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರೋ ಅಸಮಾಧಾನ ಸ್ಫೋಟ ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ...
ಮೈಸೂರು: ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚಿಸಲು ಮೈಸೂರಿನಲ್ಲಿ ವಾಸ್ತವ್ಯ ಹೂಡಿರೋ ಸಿಎಂ ಕುಮಾರಸ್ವಾಮಿ ಮೈತ್ರಿ ಕಾಪಾಡಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಮೈಸೂರಿನ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸುತ್ತಿರೋ ಸಿಎಂ, ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋತರೆ ಉಂಟಾಗುವ ಪರಿಣಾಮದ ಬಗ್ಗೆ ಲೆಕ್ಕಾಚಾರ ಹಾಕುತ್ತಿದ್ದಾರೆ.
ಖಾಸಗಿ ರೆಸಾರ್ಟ್ ನಲ್ಲಿ ತಂಗಿರೋ ಸಿಎಂ ಕುಮಾರಸ್ವಾಮಿ, ಇಂದು ಸಹ ಅಲ್ಲಿಯೇ ಇರಲಿದ್ದಾರೆ....
ಬೆಂಗಳೂರು: ಜೆಡಿಎಸ್ ಎಂಎಲ್ ಸಿ ಬಸವರಾಜ್ ಹೊರಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಸರ್ಜಿಸೋದು ಒಳ್ಳೇದು ಅಂತ ಹೇಳೋ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಮೈತ್ರಿ ಸರ್ಕಾರದಲ್ಲಿ ಸಮನ್ವಯದ ಕೊರತೆ ಇದೆ. ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕು,ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗ್ಬೇಕು ಅಂತ ಕಾಂಗ್ರೆಸ್ ನಾಯಕರು...
ಆಂಧ್ರಪ್ರದೇಶ: ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳು 18 ಸ್ಥಾನ ಗೆಲ್ಲಲಿವೆ ಅಂತ ಸಿಎಂ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ತಿರುಮಲದಲ್ಲಿ ಮಾತನಾಡಿದ ಮುಖ್ಯಮಂತ್ರಿ
ಕುಮಾರಸ್ವಾಮಿ, ನಾವೀಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ.
ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸಿದ್ದೇವೆ. ನಮ್ಮ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ
ಮೈತ್ರಿ ಪಕ್ಷಗಳು 18ರಿಂದ 19 ಸ್ಥಾನ ಗೆಲ್ಲಲಿವೆ ಅಂತ ಸಿಎಂ...
ಆಂಧ್ರ: ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದ್ರೂ ನಾವು ರಾಹುಲ್ ಗೆ ಬೆಂಬಲಿಸ್ತೀವಿ ಅಂತ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.
ತಿರುಮಲದಲ್ಲಿ ಮಾತನಾಡಿದ ದೇವೇಗೌಡ, ಇದೀಗ
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಮೇ 23ರ ಲೋಕಸಭಾ
ಚುನಾವಣೆ ಫಲಿತಾಂಶ ಏನೇ ಬಂದರೂ ಸಹ ನಾವು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಜೆಡಿಎಸ್
ಪಕ್ಷದ...