ಬೆಂಗಳೂರು ರಸ್ತೆ ಗುಣಮಟ್ಟ ಮತ್ತು ಉದ್ಯಮಿಗಳು ನಗರ ಬಿಟ್ಟು ಹೋಗುವ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಮಾತಿನ ಚಕಮಕಿ ತೀವ್ರವಾಗಿದೆ. ಈಗ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡಾ ಚರ್ಚೆಗೆ ಎಂಟ್ರಿ ಕೊಟ್ಟಿದ್ದಾರೆ.
ಡಿಕೆ ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡ ನಿಖಿಲ್, ನಿಮ್ಮಲ್ಲೇ ಮೂಲಭೂತ ಸಮಸ್ಯೆ...
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ. ನಾನು ಫಿಟ್ ಅಂಡ್ ಫೈನ್ ಎಂದು HDK ಅವರೇ ಸ್ಪಷ್ಟಪಡಿಸಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಹರಿದಾಡುತ್ತಿದ್ದ ಎಲ್ಲಾ ಊಹಾಪೋಹಗಳಿಗೆ ಇದೇ ಮೊದಲ ಬಾರಿಗೆ ಖುದ್ದು ಕುಮಾರಸ್ವಾಮಿ ಅವರೇ ತೆರೆ ಎಳೆದಿದ್ದಾರೆ. ತಾವು ಆರೋಗ್ಯವಾಗಿ ಚೆನ್ನಾಗಿದ್ದು, ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ನಾನು ಚೆನ್ನಾಗಿದ್ದೇನೆ. ಯಾವುದೇ...
ಜೆಡಿಎಸ್ ಪಕ್ಷದ ಕಾರ್ಯಕರ್ತರು ಹತ್ತು ವರ್ಷಗಳಿಂದ ಎಚ್.ಡಿ ಕೋಟೆ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವ ಕನಸು ಕಂಡಿದ್ದಾರೆ. ಅದನ್ನು ನನಸು ಮಾಡಲು ಮುಂದಿನ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡೋಣ ಎಂದು ಜೆಡಿಎಸ್ ಮುಖಂಡ ಕೆ.ಎಂ. ಕೃಷ್ಣ ನಾಯಕ ತಿಳಿಸಿದ್ದಾರೆ.
ಎಚ್.ಡಿ.ಕೋಟೆಯ ಜೆಡಿಎಸ್ ಕಚೇರಿಗೆ ಕೆ.ಎಂ.ಕೃಷ್ಣ ನಾಯಕರನ್ನು ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿಯಾಗಿ...
ಹಾಸನದಲ್ಲಿ ಕಾಂಗ್ರೆಸ್ ಹಿಂದಿಕ್ಕಿ ಜೆಡಿಎಸ್ ಮತ್ತೆ ಮೇಲುಗೈ ಸಾಧಿಸಿದೆ. ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ 13 ಸ್ಥಾನಗಳ ಪೈಕಿ, 12 ಮಂದಿ ಜೆಡಿಎಸ್ ಬೆಂಬಲಿತ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ ಒಂದು ಸ್ಥಾನಕ್ಕೆ ಆಗಸ್ಟ್ 21ರಂದು ಚುನಾವಣೆ ನಡೆಯಲಿದೆ.
ಬ್ಯಾಂಕಿನ 13 ನಿರ್ದೇಶಕರ ಸ್ಥಾನಗಳಿಗೆ ಇತ್ತೀಚೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದಿತ್ತು. ಇದೀಗ 12...
ನಾಗಮಂಗಲ ತಾಲ್ಲೂಕಿನ ಲಾಳನಕೆರೆ ಗ್ರಾಮ ಪಂಚಾಯಿತಿಯಲ್ಲಿ, ಬಹುಮತವಿದ್ದರೂ ಸದಸ್ಯರು ನಿಗದಿತ ಸಮಯಕ್ಕೆ ನಾಮಪತ್ರ ಸಲ್ಲಿಸದ ಕಾರಣ, ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದಾರೆ. ಮಂಜೇಶ್ ಚನ್ನಾಪುರ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕಳೆದ ಜುಲೈ 10ರಂದು ಚುನಾವಣೆ ನಿಗದಿಯಾಗಿತ್ತು. ಪಂಚಾಯಿತಿಯಲ್ಲಿ 13 ಸದಸ್ಯರ ಪೈಕಿ, 11 ಕಾಂಗ್ರೆಸ್ ಬೆಂಬಲಿತ ಮತ್ತು ಇಬ್ಬರು ಜೆಡಿಎಸ್...
ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಹಕಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾಗಿದೆ. ಮಾಗಡಿ ತಾಲೂಕಿನ ಬೆಳಗುಂಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ನಿರ್ದೇಶಕರ ಆಯ್ಕೆಗೆ ಜಿದ್ದಾಜಿದ್ದಿನ ಸ್ಪರ್ಧೆ ಇತ್ತು. ಚುನಾವಣೆಯಲ್ಲಿ JDS ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ. ಒಟ್ಟು 11 ನಿರ್ದೇಶಕರ ಸ್ಥಾನದಲ್ಲಿ JDS ಬೆಂಬಲಿತ 9 ನಿರ್ದೇಶಕರು ಜಯಶಾಲಿಗಳಾಗಿದ್ದಾರೆ.
ಮಾಗಡಿಯಲ್ಲಿ ಕಾಂಗ್ರೆಸ್ ಆಡಳಿತ ಇದ್ದು,...
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಆರೋಪ ಹೊತ್ತು ಒಂದೂವರೆ ವರ್ಷದಿಂದ ಜೈಲಿನಲ್ಲಿದ್ದಾರೆ. ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಲಾಗಿದೆ. ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೋಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಜಾಮೀನು ಕೋರಿ ಪ್ರಜ್ವಲ್ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಜ್ವಲ್ ಬೇಲ್ ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ವಿಶೇಷ...
ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಭವಿಷ್ಯವಾಣಿ ನುಡಿದಿದ್ದಾರೆ. ಅರಸನ ಅರಮನೆಗೆ ಕಾರ್ಮೋಡ ಕವಿದೀತು, ಜಗತ್ತೇ ತಿರುಗಿ ನೋಡುವಂತಹ ಆಘಾತ ಭಾರತಕ್ಕಾಗಲಿದೆ ಎಂಬ ಭವಿಷ್ಯ ನುಡಿದಿದ್ದಾರೆ. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಯಾವುದಕ್ಕಾದರೂ ಆಗಬಹುದು. ಎರಡನ್ನೂ ಸೇರಿಸಿ ಹೇಳಿದ್ದು ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ...
ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದೇ ಶನಿವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶಕ್ಕೆ ಸಿದ್ಧತೆ ಜೋರಾಗಿದೆ. ಕಾರ್ಯಕರ್ತರಿಗೆ ದುಡ್ಡು ಕೊಟ್ಟು ಸಮಾವೇಶಕ್ಕೆ ಕರೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ದುಡ್ಡು ಕೊಟ್ಟು ಜನರನ್ನು ಕರೆ ತರುವ ಬಗ್ಗೆ ನಾಯಕರ ಸಭೆಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದೆ.
ಸಾಧನಾ ಸಮಾವೇಶದ...
ಎಸ್‌ಟಿ ಸಮುದಾಯದ ಪ್ರಭಾವಿ ನಾಯಕರ ರಾಜಕೀಯ ಭವಿಷ್ಯವನ್ನು ರಾಜ್ಯ ಕಾಂಗ್ರೆಸ್ ಕೊನೆಗಾಣಿಸುತ್ತಿದೆ ಎಂದು ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ಆರೋಪಿಸಿದ್ದಾರೆ. ಮೈಸೂರಲ್ಲಿ ನಡೆದ ನಾಯಕ ಸಮುದಾಯದ ಸಭೆಯಲ್ಲಿ ಅವರು ಮಾತನಾಡಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಲಾಯಿತು. ಅಲ್ಲದೇ ವಾಲ್ಮೀಕಿ ಹಗರಣದ ಕೋಟ್ಯಂತರ ಹಗರಣದ ಮೂಲಕ ಬಿ.ನಾಗೇಂದ್ರ ಅವರನ್ನು ಜೈಲು ಸೇರುವಂತೆ ಮಾಡಿದ್ದಾರೆ....
ನವೆಂಬರ್ ಕ್ರಾಂತಿ ಚರ್ಚೆ ಜೋರಾಗ್ತಿದೆ. ಈ ಬೆನ್ನಲ್ಲೇ ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ದೌಡಾಯಿಸಿದ್ದಾರೆ. ಇದು ದೆಹಲಿಯಲ್ಲಿ ರಹಸ್ಯ ಕಾರ್ಯತಂತ್ರ ನಡೆಯುತ್ತಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ....