ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಅಕ್ಟೋಬರ್ 11ರ ವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಂತ ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೈನಂದಿನ ತೀವ್ರತೆಯಲ್ಲಿ ಕೆಲವೊಂದು ಬದಲಾವಣೆಗಳು ಇರಬಹುದು. ಆದ್ರೂ ಕೂಡ ರಾಜ್ಯದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ.
ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ಹಲವು ಪ್ರಮುಖ ಜಿಲ್ಲೆಗಳು ಮಳೆಯ ಪರಿಣಾಮ...
ಶನಿವಾರ ಬೆಳಿಗ್ಗೆಯಿಂದ ತಿರುಪತಿ ಮತ್ತು ಚಿತ್ತೂರು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆ ಜನ ಜೀವನವನ್ನು ಸ್ತಬ್ಧಗೊಳಿಸಿದೆ. ಕೆಳಮಟ್ಟದ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, ಮುಂದಿನ 24 ಗಂಟೆಗಳವರೆಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ತಿರುಪತಿ ನಗರದಲ್ಲಿ ಪೂರ್ವ ಭಾಗದ ವಸತಿ ಪ್ರದೇಶಗಳಿಗೆ ನೀರು ನುಗ್ಗಿ, ಲಕ್ಷ್ಮೀಪುರಂ ಸರ್ಕಲ್, ನಾರಾಯಣಪುರಂ ಹಾಗೂ ಪ್ರಮುಖ ಅಂಡರ್‌ಪಾಸ್‌ಗಳು...
ರಾಜ್ಯಕ್ಕೆ ಮತ್ತೆ ಮಳೆರಾಯನ ಆಘಾತ ಎದುರಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇಂದಿನಿಂದ ಮುಂದಿನ 2 ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 1ರಿಂದ ಮಳೆ ಮತ್ತಷ್ಟು ಚುರುಕಾಗಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಕೂಡ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಬಾಗಲಕೋಟೆ, ಬೀದರ್, ಗದಗ,...
ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಒಂದು ವಾರದಿಂದ ಸುರಿದಿದ್ದ ಮುಂಗಾರು ಮಳೆ ತಾತ್ಕಾಲಿಕವಾಗಿ ಬ್ರೇಕ್ ನೀಡಿದೆ. ಇದೇ ಸೆಪ್ಟಂಬರ್ 27ರಿಂದ ಒಟ್ಟು 09 ಜಿಲ್ಲೆಗಳಲ್ಲಿ ಮತ್ತೆ ಜೋರಾಗಿ ಮಳೆ ಅಬ್ಬರಿಸುವ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಕಲಬುರಗಿ, ಬೀದರ್, ಕೊಪ್ಪಳ, ಯಾದಗಿರಿ, ಬೆಳಗಾವಿಯಲ್ಲಿ...
ಕರ್ನಾಟಕದ ಉತ್ತರ ಒಳನಾಡು ಭಾಗದಲ್ಲಿ ಮಳೆ ಚುರುಕುಗೊಂಡಿದೆ. ಮುಂದಿನ ಎರಡು ದಿನಗಳ ಕಾಲ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದರ ಜೊತೆಗೆ ದಕ್ಷಿಣ ಒಳನಾಡು ಹಾಗೂ...
ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದೆ. ಕರಾವಳಿ ಮತ್ತು ಮಲೆನಾಡಿನ 5 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಅದರಲ್ಲೂ ವಿಶೇಷವೆಂದರೆ, ನಿನ್ನೆ ಉತ್ತರ ಕರ್ನಾಟಕ ಮತ್ತು ಬಯಲುಸೀಮೆಯಂತಹ ಕಡಿಮೆ ಮಳೆ ಬೀಳುವ ಪ್ರದೇಶಗಳಾದ ವಿಜಯಪುರ, ಗದಗ, ಬೀದರ್‌ನಲ್ಲಿ ದಾಖಲೆಯ ಮಳೆ ಸುರಿದು ಅಚ್ಚರಿ ಮೂಡಿಸಿದೆ.
ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಮಳೆ...