ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಮಲಗಲು ಹೆಚ್ಚುವರಿ ಹಾಸಿಗೆ ಮತ್ತು ದಿಂಬು ಬೇಕೆಂದು ಮನವಿ ಮಾಡಿದ್ದರು. ಜೈಲಧಿಕಾರಿಗಳು ಹೆಚ್ಚುವರಿ ಹಾಸಿಗೆ-ದಿಂಬು ನೀಡಲು ನಿರಾಕರಿಸಿದ ಕಾರಣ ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದರು. ಕೆಲ ದಿನಗಳ ಹಿಂದೆ ನಡೆದ ವಾದದ ಸಮಯದಲ್ಲಿ ನಟ ದರ್ಶನ್ ಪರ ವಕೀಲರು, ಜೈಲಧಿಕಾರಿಗಳು ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ.
ದರ್ಶನ್ ಅವರಿಗೆ ಹೆಚ್ಚುವರಿ...
ತಮ್ಮ ವಿರುದ್ಧದ ಪೋಕ್ಸೋ ಕೇಸ್ ರದ್ದು ಮಾಡುವಂತೆ ಕೋರಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಇಂದು ವಿಚಾರಣೆ ನಡೆಸಿದಂತಹ ಹೈಕೋರ್ಟ್ ಪೀಠ ಆದೇಶ ಕಾಯ್ದಿರಿಸಿದೆ. ನ್ಯಾಯಮೂರ್ತಿ ಎಂಐ ಅರುಣ್ ಪೀಠದಲ್ಲಿ ವಿಚಾರಣೆ ನಡೆದಿದ್ದು ಆದೇಶ ಕಾಯ್ದಿರಿಸಲಾಗಿದೆ.
ಸಂತ್ರಸ್ತೆಯ ಹೇಳಿಕೆ ಬಿಟ್ಟು ಉಳಿದ ಸಾಕ್ಷ್ಯಗಳನ್ನು ಕೋರ್ಟ್ ಪರಿಗಣಿಸಿಲ್ಲ. ಯಡಿಯೂರಪ್ಪ ಮನೆಯಲ್ಲಿದ್ದ ಸಾಕ್ಷಿಗಳ ಹೇಳಿಕೆ,...
ರಾಜ್ಯ ರಾಜಕೀಯದಲ್ಲಿ RSS ಕಾರ್ಯಕ್ರಮಗಳ ಬಗ್ಗೆ ಚರ್ಚೆ ಭುಗಿಲೆದ್ದಿದೆ. ಅದರಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. RSS ಅನ್ನು ನಿಷೇಧಿಸಲು ಇಂದಿರಾ ಗಾಂಧಿ ಯತ್ನಿಸಿದರೂ ಸೋಲಲೇಬೇಕಾಯಿತು. ಇನ್ನು ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?...
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು. ಕನ್ನಡ ಸೇರಿದಂತೆ ಎಲ್ಲಾ ಭಾಷೆಯ ಸಿನಿಮಾಗಳಿಗೂ ಇದು ಅನ್ವಯ ಆಗಬೇಕಿತ್ತು. ಆದರೆ, ಸರ್ಕಾರದ ಈ ಆದೇಶಕ್ಕೆ ಮಲ್ಟಿಫ್ಲೆಕ್ಸ್ ಹಾಗೂ ಕೆಲ ನಿರ್ಮಾಪಕರು ಸೆಡ್ಡು ಹೊಡೆದಿದ್ದಾರೆ.
ರಾಜ್ಯ ಸರ್ಕಾರ ಕರ್ನಾಟಕದಲ್ಲಿ...
ಧರ್ಮಸ್ಥಳ ನಿಗೂಢ ಸಾವಿನ ಪ್ರಕರಣ ಅಗೆದಷ್ಟು ಮತ್ತೆ, ಮತ್ತೆ ಮೇಲೇಳುತ್ತಿದೆ. ಈಗಾಗಲೇ ಮಾಸ್ಕ್ಮ್ಯಾನ್ ಚಿನ್ನಯ್ಯ ಸುಳ್ಳು ಹೇಳ್ತಿದ್ದಾನೆ ಅನ್ನೋದು ಎಸ್ಐಟಿ ಅಧಿಕಾರಿಗಳಿಗೆ ಅರ್ಥವಾಗಿದೆ. ಚಿನ್ನಯ್ಯನ ಹಿಂದೆ ಷಡ್ಯಂತ್ರ ಇದ್ದು, ಯಾವ ಕಾರಣಕ್ಕೆ ಸುಳ್ಳು ಹೇಳಿದ ಅನ್ನೋದನ್ನ ಪತ್ತೆ ಮಾಡಬೇಕಿದೆ. ಈ ಮಾಹಿತಿಯನ್ನ ರಾಜ್ಯ ಸರ್ಕಾರದ ಅಭಿಯೋಜಕರು, ಹೈಕೋರ್ಟ್‌ಗೆ ತಿಳಿಸಿದ್ದಾರೆ.
ಧರ್ಮಸ್ಥಳದಲ್ಲಿ ತಾವು ತೋರಿಸುವ ಸ್ಥಳಗಳಲ್ಲಿ ಉತ್ಖನನ...
ಬಾನು ಮುಷ್ತಾಕ್, ದಸರಾ ಉದ್ಘಾಟನೆಯ ವಿವಾದಕ್ಕೆ ಹೈಕೋರ್ಟ್ ಹೊಸ ಟ್ವಿಸ್ಟ್ ಕೊಟ್ಟಿದೆ. ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದವರಿಗೆ ಹಿನ್ನಡೆಯಾಗಿದೆ. ಹೈಕೋರ್ಟ್, ಮಾಜಿ ಸಂಸದ ಪ್ರತಾಪ್ ಸಿಂಹ ಪರ ವಕೀಲರಿಗೆ ಖಡಕ್ ಪ್ರಶ್ನೆಗಳನ್ನು ಕೇಳಲಾಗಿದೆ.
ಬಾನು ಮುಷ್ತಾಕ್ ಅವರ ಆಯ್ಕೆ ಪ್ರಶ್ನಿಸಿ, ಪ್ರತಾಪ್ ಸಿಂಹ ಹಾಗೂ ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ...
ನಾಡಹಬ್ಬ ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಅವರಿಗೆ ಸರ್ಕಾರ ಆಹ್ವಾನ ನೀಡಲಾಗಿದೆ. ಇದು ಹಿಂದೂ ಸಂಘಟನೆಗಳು ಮತ್ತು ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನವನ್ನು ಹಿಂಪಡೆಯಲು, ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ.
ಹೈಕೋರ್ಟ್‌ಗೆ ಸಾರ್ವಜನಿಕ...
ಇವತ್ತು ರಾಜ್ಯಾದ್ಯಂತ ಸಾರಿಗೆ ನೌಕರರ ಒಕ್ಕೂಟ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿತ್ತು. ಇದೀಗ ಹೈಕೋರ್ಟ್ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಲಾಗಿದೆ. ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಮುಷ್ಕರದಿಂದ ಹಿಂದೆ ಸರಿದಿದ್ದಾರೆ. ಜೊತೆಗೆ 4 ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ, ಹೈಕೋರ್ಟ್ ನೋಟಿಸ್ ನೀಡಿದೆ.
ಆಗಸ್ಟ್ 4ರಂದು ವಕೀಲ ಅಮೃತೇಶ್ ಮತ್ತು ಸಾರಿಗೆ ಇಲಾಖೆ ಪರ ವಕೀಲರು, ಹೈಕೋರ್ಟ್‌ಗೆ...
ತನ್ನಿಂದ ದೂರವಾದ ಪತಿಯಿಂದ ಪ್ರತಿ ತಿಂಗಳು 6 ಲಕ್ಷ ರೂಪಾಯಿ ಜೀವನಾಂಶ ಕೋರಿದ ಪತ್ನಿಯ ನಡೆಗೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಷ್ಟು ಹಣ ಬೇಕಾದ್ರೆ ತಾನೇ ದುಡಿಯುವುದು ಉತ್ತಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿದ್ದ ಪತ್ನಿಯ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಲಲಿತಾ ಕನ್ನೆಘಂಟಿ ಅವರಿದ್ದ ನ್ಯಾಯಪೀಠ, ಅರ್ಜಿದಾರರ ಪರ...
ರಾಜ್ಯ ಸುದ್ದಿಗಳು: ಕರ್ನಾಟಕದಲ್ಲಿ ಸೆ.28 ರಂದು ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಯನ್ನು ಮುಂದುವರಿಸಲು ತಡೆ ನೀಡಿ ಎಂದು ಹೈಕೋರ್ಟ್ ಹೇಳಿದೆ.545 ಹುದ್ದೆಗಳಿಗೆ ಅಕ್ಟೋಬರ್ 3, 2021 ರಂದು ನಡೆಸಲಾದ ಪರೀಕ್ಷೆಯನ್ನು 'ವಂಚನೆ' ಭುಗಿಲೆದ್ದ ನಂತರ ಸರ್ಕಾರವು ರದ್ದುಗೊಳಿಸಿದೆ.
ಸೆಪ್ಟೆಂಬರ್ 28 ರಂದು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳ ನೇಮಕಾತಿಗೆ ಮರು ಪರೀಕ್ಷೆ ನಡೆಸುವುದಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್...