ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿಯವರು ಹೊಗೇನಕಲ್ ಯೋಜನೆ 2ನೇ ಹಂತವನ್ನು ಕೈಗೆತ್ತಿಕೊಳ್ಳಲು 4,600 ಕೋಟಿ ವೆಚ್ಚದ ಡಿ.ಪಿ.ಆರ್. (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸುವುದಾಗಿ ಘೋಷಿಸಿರುವುದನ್ನು ಕರ್ನಾಟಕ ವಿರೋಧಿಸುತ್ತದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ಕಾವೇರಿ ಕಣಿವೆಯಲ್ಲಿ ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ತೀರ್ಪುಗಳಲ್ಲಿನ ನೀರಿನ ಹಂಚಿಕೆಗಳ ಅನ್ವಯವಾಗಿ ತಮಿಳುನಾಡು ರಾಜ್ಯವು ಯೋಜನೆಗಳನ್ನು ಕೈಗೊಳ್ಳಬೇಕಾಗುತ್ತದೆ. ಆದರೆ, ಈ...