Hubli News: ಹುಬ್ಬಳ್ಳಿ: ಸಿಲಿಂಡರ್ ದುರಂತ ಪ್ರಕರಣ ಗಂಭೀರವಾಗಿ ಗಾಯಗೊಂಡಿದ್ದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೆ, ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಗಂಗಮ್ಮ ಮೃತ ದುರ್ದೈವಿ. ಜು.24 ರಂದು ಹುಬ್ಬಳ್ಳಿಯ ಶಕ್ತಿನಗರದಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿಕೊಂಡ ಪರಿಣಾಮ, ಗಂಗಮ್ಮ, ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದರು. ಶಿಕ್ಷಕಿಗೆ 65%...
Hubli News: ಹುಬ್ಬಳ್ಳಿ: ಯತೀಂದ್ರ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಸಿದ್ಧರಾಮಯ್ಯನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಹಣವನ್ನು ಕೊಟ್ಟಿದ್ದಾರೆ. ಗ್ಯಾರಂಟಿಗಾಗಿ ಸಾಕಷ್ಟು ವ್ಯಯ ಮಾಡಿದರೂ ಪಕ್ಷಾತೀತವಾಗಿ ಹಣವನ್ನು ಕೊಟ್ಟಿದ್ದಾರೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಾರೆ. ಹೈಕಮಾಂಡ್ ಎಲ್ಲಿಯವರೆಗೂ...
Hubli News: ಹುಬ್ಬಳ್ಳಿ: ಮಹದಾಯಿ ಹೋರಾಟ ಇದು ನಿನ್ನೆ ಮೊನ್ನೆಯದಲ್ಲ. ರೈತರಿಗೆ ಮಾತ್ರವೇ ಇರುವ ಯೋಜನೆಯಂತೂ ಅಲ್ಲವೇ ಅಲ್ಲ. ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರ ಕುಡಿಯುವ ನೀರಿನ ಭವಣೆ ನೀಗಿಸುವ ಮಹತ್ವದ ಯೋಜನೆ. ಈ ಯೋಜನೆಯ ಹೋರಾಟ ಈಗ ಹೊಸ ಸ್ವರೂಪವನ್ನು ಪಡೆದುಕೊಳ್ಳಲಿದೆ.
ಮಹದಾಯಿ ನೀರಿಗಾಗಿ ಕಳೆದ ಸರಿಸುಮಾರು 10 ವರ್ಷದಿಂದ ನಿರಂತರ ಧರಣಿ ನಡೆಸುತ್ತಿರುವ...
Hubli News: ಹುಬ್ಬಳ್ಳಿ: ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಪ್ರತಿಭಟನೆ ಮಾಡಿದರು.
ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ ವರ್ಷಕ್ಕೆ 4 ಸಾವಿರ ನೀಡಲಾಗುತ್ತದೆ. ರಸಗೊಬ್ಬರ, ಔಷಧಿ, ಮತ್ತು ಬಿತ್ತನೆ ಬೀಜಗಳ ಬೆಲೆ ಏರಿಕೆ ಮಾಡಿ ರೈತರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದೆ. 15-15-15...
Hubli News: ಹುಬ್ಬಳ್ಳಿ: ಒಳ ಮೀಸಲಾತಿಗಾಗಿ ಕಳೆದ ಮೂವತ್ತು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಕೊಡುವುದಾಗಿ ಹೇಳಿತ್ತು. ಅಧಿಕಾರಕ್ಕೆ ಬಂದರೂ ಮೀಸಲಾತಿ ನೀಡುತ್ತಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಎರಡು ವರ್ಷಗಳಿಂದ ಮೀಸಲಾತಿ ಕೊಡುತ್ತಿಲ್ಲ. ಕೆಳ ವರ್ಗದ ಜನ ಮೇಲೆ ಬರಬಾರದೆಂದು...
Hubli News: ಹುಬ್ಬಳ್ಳಿ: ಸಿದ್ದರಾಮಯ್ಯನವರು ಹಿಂದುಳಿದ ವರ್ಗದವರಿಗೆ ಮೋಸ ಮಾಡಿದ್ದಾರೆ. ಸಿದ್ದರಾಮಯ್ಯನವರು ನುಡಿದಂತೆ ನಡೆಯುತ್ತಾರೆಂದು ಹಿಂದುಳಿದ ವರ್ಗ ನಂಬಿತ್ತು. ಆದರೆ ಜನರಿಗೆ ಮೋಸ ಮಾಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಕಿಡಿಕಾರಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಶಸ್ತ್ರಾಸ್ತ್ರಗಳನ್ನ ಕೆಳಗೆ ಇರಿಸಿ ಬಿಟ್ಟಿದ್ದಾರೆ. ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಲು ಅವರಿಂದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಿನ್ನೆ ಮಧ್ಯಾಹ್ನ ನಡೆಯಬೇಕಿದ್ದ ಕೇಂದ್ರ ಎಸ್ಎಸ್‌ಸಿ ಪರೀಕ್ಷೆ ರಾಾತ್ರಿ 10 ಆದರೂ ನಡೆಯದೇ, ಎಡವಟ್ಟು ನಡೆದಿದೆ.
ಭವಿಷ್ಯದ ಕೇಂದ್ರ ಸರ್ಕಾರಿ ನೌಕರರ ಜೊತೆಗೆ ಪರೀಕ್ಷಾ ಕೇಂದ್ರ ಸಿಬ್ಬಂದಿ ಹುಡುಗಾಟವಾಡಿದ್ದು, ಹುಬ್ಬಳ್ಳಿ ಕೇಶ್ವಾಪುರದಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಕಾಲೇಜಿಗೆ ಬಂದು ಪರೀಕ್ಷೆ ಬರೆಯಬೇಕಿದ್ದು, ಆನ್‌ಲೈನ್ ಪರೀಕ್ಷೆ ಬರೆಯುವ ವ್ಯವಸ್ಥೆಯೂ ಇಲ್ಲ.
ಇನ್ನು...
Hubli News: ಹುಬ್ಬಳ್ಳಿ: ನಿನ್ನೆ ಅಷ್ಟೇ ನಗರದ ಚೆನ್ನಪೇಟೆಯಲ್ಲಿ ಸಿಲಿಂಡರ್ ಸೋರಿಕೆಯಿಂದ ತಂದೆ ಹಾಗೂ ಏಳು ವರ್ಷದ ಮಗು ಗಾಯಗೊಂಡ ಪ್ರಕರಣ ಮಾಸುವ ಮುನ್ನವೇ ಮತ್ತೆ ನಗರದ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಕ್ತಿ ಕಾಲನಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದಾಗಿ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕ್ರೀಡಾ ತರಬೇತುದಾರ ಮಹಾಂತೇಶ ಬಳ್ಳಾರಿ,...
Hubli News: ಹುಬ್ಬಳ್ಳಿ : ಧಾರವಾಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ವರ್ಷದ ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಸನತ್ಕುಮಾರ ಬೆಳಗಲಿ ಭಾಜನರಾಗಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದ ಅವ್ವ ಟ್ರಸ್ಟ್ ನಿಂದ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಅವ್ವ ಪತ್ರಕರ್ತೆ ಪ್ರಶಸ್ತಿ...
Hubli News: ಹುಬ್ಬಳ್ಳಿ : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇತ್ತ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ 32 ವರ್ಷದ ಶಂಕ್ರಯ್ಯ ಗುರಯ್ಯನವರ ಎಂಬ ಯುವಕ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ.
ನಿನ್ನೆ ಸಂಜೆ ಮನೆದಲ್ಲಿ ಊಟ ಮಾಡಿ ಮಲಗಿದ್ದ ಶಂಕ್ರಯ್ಯ ಅವರಿಗೆ ಇಂದು ಬೆಳಗ್ಗೆ...