ಕಾಂಗ್ರೆಸ್‌ನ ಪ್ರಬಲ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಇತ್ತೀಚೆಗೆ ನೂತನ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ, ಸಾರ್ವಜನಿಕ ವಲಯದಲ್ಲಿ ಸಾಕಷ್ಟು ರಾಜಕೀಯ ಲೆಕ್ಕಾಚಾರಗಳ ಚರ್ಚೆಗೆ ಕಾರಣವಾಗಿದೆ. ಶುಕ್ರವಾರ ಬೆಂಗಳೂರಿನ ಜಕ್ಕೂರು ಏರೋಡ್ರೋಮ್‌ನಲ್ಲಿ ಸಚಿವರು ಈ ಹೆಲಿಕಾಪ್ಟರ್‌ನ್ನು ಸ್ವತಃ ಪರಿಶೀಲಿಸಿದ್ದಾರೆ. ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು...