ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಗ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಗೂ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ. ಆರ್ಟಿಕಲ್ 370 ರದ್ದತಿ ವಿಚಾರವಾಗಿ, ಮೋದಿ ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪವೆತ್ತಿ ಇಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ಜಮ್ಮು ಕಾಶ್ಮೀರವನ್ನು ಇಬ್ಭಾಗ ಮಾಡುವುದರಿಂದ, ಜನಪ್ರತಿನಿಧಿಗಳನ್ನ ಬಂಧಿಸುವುದರಿಂದ ಹಾಗೂ ನಮ್ಮ ಸಂವಿಧಾನವನ್ನ...