ಬೆಂಗಳೂರು: 17ನೇ ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಕೌಂಟಿಂಗ್ ಶುರುವಾಗಲಿದ್ದು ಸಂಜೆ 6 ಗಂಟೆ ವೇಳೆಗೆ ಫಲಿತಾಂಶ ಹೊರಬೀಳೋ ಸಾಧ್ಯತೆಯಿದೆ.
543 ಲೋಕಸಭಾ ಕ್ಷೇತ್ರಗಳ ಪೈಕಿ 542ಕ್ಷೇತ್ರಗಳಿಗೆ ಏಳು ಹಂತದಲ್ಲಿ ಮತದಾನ ಕಳೆದೊಂದು ತಿಂಗಳಿಂದ ಮತದಾನ ನಡೆದಿತ್ತು. ಶೇ.67.11ರಷ್ಟು ಮತದಾನ ನಡೆದು ಹಿಂದಿನ ದಾಖಲೆಗಳನ್ನೆಲ್ಲಾ ಮುರಿದಿದೆ. ತಮಿಳುನಾಡಿನ ವೆಲ್ಲೂರು...
ಕೋಲಾರ: ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಇದಕ್ಕೆ ರೋಷನ್ ಬೇಗ್ ಆರೋಪವೇ ಸಾಕ್ಷಿ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಆರೋಪಿಸಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ವಿಶ್ವನಾಥ್, ಸಮನ್ವಯ ಸಮಿತಿ ಯಾರಿಗೂ ವೈಯಕ್ತಿಕ ಅಲ್ಲ. ಪಾಲುದಾರ ಪಕ್ಷಗಳಲ್ಲಿ ಸಮನ್ವಯ ಮಾಡಲು ಇರುವ ಸಮಿತಿ. ಆದ್ರೆ ಈ ಕಾರ್ಯ ನಿಭಾಯಿಸಲು ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ...
ಚಿತ್ರದುರ್ಗ: ಸ್ಥಳೀಯ ಸಂಸ್ಥೆ
ಚುನಾವಣೆಯಲ್ಲಿ ಮೈತ್ರಿ ಪಕ್ಷದ ಜೆಡಿಎಸ್ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಚುನಾವಣೆಗೂ
ಮುನ್ನವೇ ಶುಭಾರಂಭ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರಸಭೆಗೆ 7ನೇ ವಾರ್ಡ್ ನಿಂದ ಜೆಡಿಎಸ್ ಅಭ್ಯರ್ಥಿ ಪಾಂಡುರಂಗ ಅವಿರೋಧ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂಪಡೆಯಲು ಕೊನೆ ದಿನವಾದ ಇಂದು ಪಾಂಡುರಂಗ ವಿರುದ್ಧ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ತಮ್ಮ ಉಮೇದುವಾರಿಕೆ ಹಿಂಪಡೆದಿದ್ದಾರೆ. ಹೀಗಾಗಿ...
ಬೆಂಗಳೂರು: ಚುನಾವಣೋತ್ತರ ನಡೆದ ಎಕ್ಸಿಟ್ ಪೋಲ್ ವರದಿಯಲ್ಲಿ ನನಗೆ ವಿಶ್ವಾಸವಿಲ್ಲ ಅಂತ ಡಿಸಿಎಂ ಪರಮೇಶ್ವರ್
ಹೇಳಿದ್ದಾರೆ.
ಲೋಕಸಭಾ ಚುನಾವಣಾ ಫಲಿತಾಂಶ ಕುರಿತಾಗಿ ರಾಜ್ಯದಲ್ಲಿ ಗ್ರೌಂಡ್ ರಿಯಾಲಿಟಿ ಬೇರೆ
ರೀತಿಯಲ್ಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ 20ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ.
ನಮ್ಮ ಲೆಕ್ಕಾಚಾರ,ವಾತಾವರಣ ಕೂಡ ಇದಕ್ಕೆ ಪೂರಕವಾಗಿದೆ. ಚುನಾವಣಾ ಪ್ರಚಾರದ ಆಧಾರದ ಮೇಲೆ ಇದನ್ನು
ಹೇಳುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಬಿಜೆಪಿಗೆ 18 ಸೀಟು...
ಮಂಡ್ಯ: ಹೈ ವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಯಾರು ಗೆಲ್ತಾರೆ ಅಂತ ತಿಳುದುಕೊಳ್ಳೋಕೆ ಕುತೂಹಲಭರಿತರಾಗಿ ಜನ ಕಾಯುತ್ತಿದ್ದಾರೆ.
ಈ ಬಗ್ಗೆ ಹತ್ತಾರು ಸಮೀಕ್ಷೆಗಳು ಕೂಡ ನಡೆದಿವೆ. ಒಂದು ಸಮೀಕ್ಷೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಗೆಲ್ತಾರೆ ಅಂತ ವರದಿ ನೀಡಿದ್ರೆ, ಮತ್ತೊಂದು ವರದಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲ್ತಾರೆ ಅಂತಿದೆ.
ಆದ್ರೆ ಗೆಲ್ಲೋದು ಯಾರು...
ಲೋಕಸಭಾ ಚುನಾವಣಾ ಮಹಾ ಸಮರ ಇದೀಗ ಮುಗಿದಿದೆ. ಕರ್ನಾಟಕ ಟಿವಿ ಮತದಾನೋತ್ತರ ಸಮೀಕ್ಷೆ ಪ್ರಕಾರ, 543 ಕ್ಷೇತ್ರಗಳಲ್ಲಿ ಬಿಜೆಪಿ ಸರಳ ಬಹುಮತ ಗಳಿಸಿ ಮತ್ತೆ ಮೋದಿ ಅಧಿಕಾರಕ್ಕೆ ಬರಲಿದ್ದು ಎನ್ ಡಿಎ 275 ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ. ಇನ್ನು ಕಳೆದ ಬಾರಿಗಿಂತ ಯುಪಿಎ ಭಾರೀ ಚೇತರಿಕೆ ಕಾಣಲಿದೆ.
ಕಳೆದ ಬಾರಿ ಬಿಜೆಪಿ ಸ್ವತಂತ್ರವಾಗಿ 280 ಸ್ಥಾನಗಳಿಸಿ...
ಬೆಳಗಾವಿ: ಸರ್ಕಾರ ವಿಸರ್ಜನೆ ಕುರಿತ ಬಸವರಾಜ ಹೊರಟ್ಟಿ ಹೇಳಿಕೆಗೆ ಅಷ್ಟು ಮಹತ್ವ ಕೊಡಬೇಕಿಲ್ಲ ಅಂತ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಬಸವರಾಜ್ ಹೊರಟ್ಟಿ ಹೇಳಿಕೆಗೆ ಅಷ್ಟು ಮಹತ್ವ ಕೊಡಬೇಕಾಗಿಲ್ಲ. ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ರೆ ವಿಚಾರ ಮಾಡಬೇಕಾಗುತ್ತದೆ. ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿ ಅವರು ಆ ರೀತಿ ಹೇಳಿದ್ರೆ ಗಂಭೀರವಾಗಿ...
ಬೆಂಗಳೂರು: ಒಂದೆಡೆ ಕಾಂಗ್ರೆಸ್- ಜೆಡಿಎಸ್ ನಾಯಕರ ಹೇಳಿಕೆ ಮೈತ್ರಿ ಸರ್ಕಾರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದೋಸ್ತಿ ಸರ್ಕಾರದಲ್ಲಿ ಆರೋಪ ಪತ್ಯಾರೋಪಗಳ ಸುರಿಮಳೆಯಾಗ್ತಿದೆ. ಮತ್ತೊಂದೆಡೆ ಸಿಎಂ ಕುಮಾರಸ್ವಾಮಿ ಈ ಎಲ್ಲಾ ವಿವಾದಗಳಿಗೆ ಫುಲ್ ಸ್ಟಾಪ್ ಹಾಕಲು ಸರ್ಕಸ್ ಮಾಡ್ತಿದ್ದಾರೆ. ಇದೀಗ ಮಧ್ಯಪ್ರವೇಶಿಸಿರೋ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಗೊಂದಲಗಳಿಗೆ ತೆರೆ ಎಳೆಯೋ ಪ್ರಯತ್ನ ಮಾಡಿದ್ದಾರೆ....
ಹಾಸನ: ನನಗೆ ಎಲ್ಲರೂ ಇದ್ದಾರೆ, ಎಲ್ಲವೂ ಇದೆ.
ಆದ್ರೆ ನನ್ನ ತಂದೆ-ತಾಯಿ ಮಾತ್ರ ಇಲ್ಲ ಅಂತ ತಮ್ಮ ಪೋಷಕರನ್ನು ನೆನೆದು ಹಾಸನ ಜಿಲ್ಲಾ ಪಂಚಾಯತ್
ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ
ಅಧ್ಯಕ್ಷೆ ಭವಾನಿ ರೇವಣ್ಣ ಕಣ್ಣೀರು ಹಾಕಿದ್ದಾರೆ.
ಹಾಸನದ ಕಾಮಧೇನು
ವೃದ್ಧಾಶ್ರಮದಲ್ಲಿ ತಮ್ಮ ಮಾವ ದೇವೇಗೌಡರ ಹುಟ್ಟುಹಬ್ಬ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ
ಮಾತನಾಡಿದ ಭವಾನಿ ತಮ್ಮ ಪೋಷಕರನ್ನು ನೆನೆದು ಕಣ್ಣೀರು...
ಬೆಂಗಳೂರು: ಜೆಡಿಎಸ್ ಎಂಎಲ್ ಸಿ ಬಸವರಾಜ್ ಹೊರಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಸರ್ಜಿಸೋದು ಒಳ್ಳೇದು ಅಂತ ಹೇಳೋ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಮೈತ್ರಿ ಸರ್ಕಾರದಲ್ಲಿ ಸಮನ್ವಯದ ಕೊರತೆ ಇದೆ. ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕು,ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗ್ಬೇಕು ಅಂತ ಕಾಂಗ್ರೆಸ್ ನಾಯಕರು...