ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲೂಕುಗಳಲ್ಲಿ ಮತ್ತೆ ಮುಸುಕುದಾರಿ ಕಳ್ಳರ ದಾಳಿಯಿಂದ ಜನತೆ ಆತಂಕದಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಈ ಕಳ್ಳರ ಗ್ಯಾಂಗ್ ಚಟುವಟಿಕೆಗಳು ಹೆಚ್ಚಾಗಿದ್ದು, ಅದರಲ್ಲೂ ಗ್ರಾಮೀಣ ಭಾಗದಲ್ಲಿ ಲಾಂಗು, ಮಚ್ಚು ಹಿಡಿದು ಗ್ರಾಮಕ್ಕೆ ಎಂಟ್ರಿ ಕೊಡುತ್ತಿರುವ ಗ್ಯಾಂಗ್ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿರೋದ್ರಿಂದ ಜನರ ನಿದ್ದೆಗೆಡಿಸುವ ಪರಿಸ್ಥಿತಿ...