ರಾಜ್ಯದಲ್ಲೂ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆಗಾಗಿ, ರಾಜ್ಯ ಬಿಜೆಪಿ ನಾಯಕರು ಸಿದ್ಧತೆ ಆರಂಭಿಸಿದ್ದಾರೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಬಿಜೆಪಿ ಪಕ್ಷದಿಂದ ಬೆಂಗಳೂರಿನಲ್ಲಿ ಕಾರ್ಯಗಾರ ಹಮ್ಮಿಕೊಂಡಿದ್ದಾರೆ. ಶಾಸಕರು, ಜಿಲ್ಲಾ ಘಟಕದ ಅಧ್ಯಕ್ಷರು ಸೇರಿ 200ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ರು.
ಕಾರ್ಯಾಗಾರಕ್ಕೆ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಅಧ್ಯಕ್ಷ ಓಂ...
ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಿಹಾರ ಚುನಾವಣೆ ನಂತರ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದೆ. ಅಲ್ಲೋಲ ಕಲ್ಲೋಲ ಸೃಷ್ಟಿಯಾಗಲಿದೆ ಎಂದು ಬಾಂಬ್ ಸಿಡಿಸಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರೇ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಏನೂ ಚರ್ಚೆ ಮಾಡ್ಬೇಡಿ. ಏನೇ ಇದ್ರೂ ಹೈಕಮಾಂಡ್ ತೀರ್ಮಾನ ಮಾಡುತ್ತೆ...
ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು, ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ್ರು ಮಹತ್ವದ ಕ್ಲಾರಿಟಿ ಕೊಟ್ಟಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ, ಹರಿದಾಡ್ತಿದ್ದ ಊಹಾಪೋಹಗಳಿಗೆಲ್ಲಾ ತೆರೆ ಎಳೆದಿದ್ದಾರೆ.
ಯಾವುದೇ ಚುನಾವಣೆಯಾದರೂ ಮೈತ್ರಿ ಮುಂದುವರಿಯುತ್ತದೆ. ಮೈತ್ರಿಕೂಟದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಪಂಚಾಯಿತಿ ಮತ್ತು ವಿಧಾನಸಭಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದು ಹೇಳಿದ್ರು.
ನನಗೆ ಕಾಲಿನ ನೋವು ಬಿಟ್ಟರೆ ಬೇರೆ ಯಾವುದೇ...
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಕಾಂಗ್ರೆಸ್ ಸರ್ಕಾರ, ಜಾತಿ ಸಮೀಕ್ಷೆ ನಡೆಸುತ್ತಿದೆ ಅನ್ನೋ ಮಾತುಗಳು ವಿಪಕ್ಷಗಳಿಂದ ಕೇಳಿ ಬಂದಿದೆ. ಇದಕ್ಕೆಲ್ಲಾ ಖುದ್ದು ಡಿಸಿಎಂ ಡಿ.ಕೆ. ಶಿವಕುಮಾರ್ ತೆರೆ ಎಳೆದಿದ್ದಾರೆ. ಜಾತಿ ಆಧಾರಿತ ಜನಗಣತಿ ಮಾಡುತ್ತಿರುವುದು ಗ್ಯಾರಂಟಿ ಕಡಿತಕ್ಕೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯಿಸಿದ್ದು, ಇದೆಲ್ಲಾ ಸುಳ್ಳು ಅಂತಾ ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಯಾರೂ...
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ರನ್ನು, ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬ ಕೂಗು ಜೋರಾಗಿದೆ. ಯತ್ನಾಳ್ಗೆ ಬಿಜೆಪಿ ಹೈಕಮಾಂಡ್ ಆಹ್ವಾನ ನೀಡಬೇಕೆಂದು, ಮಾಜಿ ಸಂಸದ ರಮೇಶ್ ಕತ್ತಿ ಆಗ್ರಹಿಸಿದ್ದಾರೆ. ಇಲ್ಲವಾದ್ರೆ ಉತ್ತರ ಕರ್ನಾಟಕದ ಧ್ವನಿ ಬಡವಾಗುತ್ತದೆ ಅಂತಾ ಆತಂಕ ಹೊರಹಾಕಿದ್ದಾರೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ದಿವಂಗತ ಉಮೇಶ್ ಕತ್ತಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು....
2019ರಿಂದ 2023ರವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ, ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗವನ್ನು ರಚಿಸಲಾಗಿತ್ತು. ಇದೀಗ ಈ ಆಯೋಗದ ಅವಧಿ ಮುಗಿಯುವುದಕ್ಕೂ ಮುನ್ನವೇ ವಿಸರ್ಜನೆ ಮಾಡಲಾಗಿದೆ. ಸೆಪ್ಟೆಂಬರ್ 30ರವರೆಗೆ ಅಧಿಕಾರ ಅವಧಿ ವಿಸ್ತರಿಸುವಂತೆ ಆಯೋಗ ಮನವಿ ಮಾಡಿತ್ತು. ಈ ಮನವಿಯನ್ನು ಸರ್ಕಾರ ಪರಿಗಣಿಸಿಲ್ಲ ಎನ್ನಲಾಗಿದೆ.
ಬಿಜೆಪಿ ಸರ್ಕಾರದ ಅವಧಿಯ 40%...
ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಸಮರ ಸಾರಿದ್ದಾರೆ. ರಾಜ್ಯ ಸರ್ಕಾರ ಕಾಟಾಚಾರಕ್ಕೆ ರಸ್ತೆ ಗುಂಡಿಗಳನ್ನು ಮುಚ್ಚುತ್ತಿದ್ದು, ಕಳಪೆ ಮಟ್ಟದ ಡಾಂಬರೀಕರಣ ಮಾಡಲಾಗ್ತಿದೆ ಎಂದು ಆರೋಪಿಸಿದೆ. ಹೀಗಾಗಿ ಬೆಂಗಳೂರಿನ ರಸ್ತೆಗಳನ್ನು ತಡೆದು, ಗುಂಡಿ ಮುಚ್ಚುವ ಅಭಿಯಾನವನ್ನು ಬಿಜೆಪಿಗರು ಕೈಗೊಂಡಿದ್ದಾರೆ. ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರತಿಭಟನೆಗೆ ಇಳಿದಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ನಾಯಕರು ರೋಡಿಗಿಳಿದಿದ್ದಾರೆ....
ಕರ್ನಾಟಕ ಬಿಜೆಪಿ ಚಿಂತನಾ ಸಭೆಯ ಸಮಾರೋಪ ಸಮಾರಂಭದಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ರಾಜ್ಯ ಬಿಜೆಪಿ ನಾಯಕರಿಗೆ ಕಠಿಣ ಸಂದೇಶ ನೀಡಿದ್ದಾರೆ. ಪಕ್ಷದ ಆಂತರಿಕ ಭೇದಭಾವ, ನಿರ್ಗತಿಕ ನಾಯಕತ್ವ ಮತ್ತು ಹೋರಾಟದ ಕೊರತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಯಕರಿಗೆ ಶಿಸ್ತಿನ ಪಾಠ ನೀಡಿ, ಸಂಘಟನೆಯ ಶಕ್ತಿಯನ್ನು ಮರೆತಿದ್ದಾರೆಂದು ಪರೋಕ್ಷವಾಗಿ ಟೀಕೆ...
ರಾಜ್ಯದಲ್ಲಿ ಲಿಂಗಾಯತರ ದೊಡ್ಡ ಶಕ್ತಿ ಇದೆ. ಇದನ್ನು ವ್ಯವಸ್ಥಿತವಾಗಿ ಒಡೆಯಲು ಕಾಂಗ್ರೆಸ್ ಮುಂದಾಗಿದೆ. ಹೀಗಂತ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಮುಸಲ್ಮಾನರ ಅಭಿವೃದ್ಧಿ ಬಿಟ್ಟರೆ ಬೇರೆಯವರಿಗೆ ಏನು ಮಾಡಿಲ್ಲ. ಹಾಲು ಮತ ಸಮಾಜದಲ್ಲಿ ಹುಟ್ಟಿ ಅದಕ್ಕೆ ಅಪಮಾನ ಮಾಡ್ತಿದ್ದಾರೆ. ಇದೊಂದು ಮೂರ್ಖ ಸರ್ವೇ. ಲಿಂಗಾಯತ ಕ್ರಿಶ್ಚಿಯನ್ ಮಾಡಿದ...
ಮಾಲೂರಿನ ಮರು ಮತಎಣಿಕೆಯಲ್ಲಿ ಬಿಜೆಪಿ ಗೆದ್ರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಸವಾಲು ಹಾಕಿದ್ದಾರೆ. ಹೈಕೋರ್ಟ್ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಯಲಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥಗೌಡ ಗೆಲುವು ಸಾಧಿಸಿದ್ರೆ, ರಾಜಕೀಯ ನಿವೃತ್ತಿ ಸ್ವೀಕರಿಸುತ್ತೇನೆ. ಮರು ಮತ ಎಣಿಕೆಯ ಹೈಕೋರ್ಟ್ ಆದೇಶಕ್ಕೆ,...