ಸಿದ್ದರಾಮಯ್ಯ ಬಳಿಕ ಕರ್ನಾಟಕದ ಮುಖ್ಯಮಂತ್ರಿ ಯಾರಾಗ್ತಾರೆ ಅನ್ನೋ ಗೊಂದಲಗಳ ಮಧ್ಯೆಯೇ, ಉಪಮುಖ್ಯಮಂತ್ರಿ ವಿಚಾರ ಮುನ್ನೆಲೆಗೆ ಬಂದಿದೆ. ಇದೇ ವಿಚಾರವಾಗಿ ಮಾಜಿ ಸಚಿವ ಶ್ರೀರಾಮುಲು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪ್ರಿಯಾಂಕ್ ಖರ್ಗೆ ಡಿಸಿಎಂ ಆಗಲು ದೆಹಲಿ ಮಟ್ಟದಲ್ಲಿ ಪ್ಲಾನ್ ಮಾಡಲಾಗಿದೆಯಂತೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ತಂತ್ರ ರೂಪಿಸಲಾಗಿದೆಯಂತೆ. ಹೀಗಂತ ಶ್ರೀರಾಮುಲು ಬಾಂಬ್ ಸಿಡಿಸಿದ್ದಾರೆ.
ಸಿದ್ದರಾಮಯ್ಯ...
ಇಂದು ಕಿತ್ತೂರ ರಾಣಿ ಚೆನ್ನಮ್ಮ ಅವರ 201ನೇ ಜಯಂತ್ಸೋತ್ಸವ. ಕೇಂದ್ರ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ಇಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅವರು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಬೈಲಹೊಂಗಲದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿಯನ್ನು ಅಭಿವೃದ್ಧಿಪಡಿಸಿ ಅದನ್ನು ರಾಷ್ಟ್ರೀಯ ಸ್ಮಾರಕವೆಂದು...
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಇದರ ಭಾಗವಾಗೇ ನವೆಂಬರ್ 19ರಂದು ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರ್ತಿದ್ದಾರೆ ಎನ್ನಲಾಗ್ತಿದೆ. ನವೆಂಬರ್ 15ರಿಂದ 20ರೊಳಗೆ ದೊಡ್ಡ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ. ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಆಹ್ವಾನ ಕೊಡುವ ಬಗ್ಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರಮುಖವಾಗಿ ಡಿ.ಕೆ. ಶಿವಕುಮಾರ್ ಅತಿ ಹೆಚ್ಚು ಆಸಕ್ತಿ ವಹಿಸಿ,...
ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ನವೆಂಬರ್ ಕ್ರಾಂತಿಯ ಕಿಚ್ಚು ಧಗಧಗಿಸುತ್ತಿದೆ. ಸಿಎಂ ಯಾರಾಗ್ತಾರೆ ಅನ್ನೋ ಚರ್ಚೆಗಳು ಜೋರಾಗಿವೆ. ಇಂಥಾ ಹೊತ್ತಲ್ಲಿ ಬಿಜೆಪಿಗರು, 2028ಕ್ಕೆ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಅಂತಾ ಭವಿಷ್ಯ ನುಡಿದಿದ್ದಾರೆ.
ರಾಜ್ಯದಲ್ಲಿ ನಾವು ಏನೇ ಮಾಡಿದ್ರೂ 2028ಕ್ಕೆ ಸಮ್ಮಿಶ್ರ ಸರ್ಕಾರ ರಚನೆ ಆಗಲಿದೆ. ಹೀಗಂತ ಸಂಸದ ಕೆ. ಸುಧಾಕರ್ ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿ,...
ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ, ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಯತೀಂದ್ರ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಪರ ಬ್ಯಾಟ್ ಬೀಸಿದ್ದು, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸಿದೆ. ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಯೂ ಉದ್ಭವವಾಗಿದ್ದು, ಹಲವು ನಾಯಕರ ಹೆಸರು ಚರ್ಚೆಗೆ ಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಪೋಸ್ಟರ್‌ಗಳು...
ಡಿಸಿಎಂ ಡಿ.ಕೆ ಶಿವಕುಮಾರ್ ದೀಪಾವಳಿಯ ಬಲಿಪಾಡ್ಯಮಿ ದಿನ, ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಜೊತೆಗೆ ರಾಯರ ಅನುಗ್ರಹಕ್ಕಾಗಿ ತುಲಾಭಾರ ಸೇವೆ ನೆರವೇರಿಸಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಬಳಿಕ ಪಂಚಮುಖಿ ದೇಗುಲದಲ್ಲಿ ಪೂಜೆ ಸಲ್ಲಿಸಿ, ಮೂಲ ರಾಮ ದೇವರ ದರ್ಶನವನ್ನೂ ಮಾಡಿದ್ದಾರೆ.
ಪಂಚಮುಖಿ ಆಂಜನೇಯನ ದರ್ಶನದ...
ರಾಜ್ಯ ಸರ್ಕಾರದಲ್ಲಿ ಸಿಎಂ ಹುದ್ದೆ ಬದಲಾವಣೆ ಕೂಗಿನ ಮಧ್ಯೆ ಯತೀಂದ್ರ ನೀಡಿರುವ ಹೇಳಿಕೆಗೆ ಭಾರೀ ಮಹತ್ವ ಸಿಕ್ಕಿದೆ. ಸಿದ್ದರಾಮಯ್ಯ ಬಳಿಕ ಉತ್ತರಾಧಿಕಾರಿ ಬಗ್ಗೆ ಹೇಳಿದ್ದ ಎಂಎಲ್‌ಸಿ ಯತೀಂದ್ರ, ತಮ್ಮದೇ ಹೇಳಿಕೆಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ತಂದೆಯವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡವರು. ಅದೇ ಸಿದ್ಧಾಂತದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಕೂಡ ನಂಬಿಕೆ ಇಟ್ಟುಕೊಂಡು ಹೋಗುತ್ತಿದ್ದಾರೆ....
ನೂರು ವರ್ಷಗಳ ಹಿಂದೆ ಮಹಾತ್ಮ ಗಾಂಧಿ ಕುಳಿತ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಕೂತಿದ್ದಾರೆ. ಅವರು ಈ ಭಾಗಕ್ಕೆ ಆರ್ಟಿಕಲ್ 371ಜೆ ಕೊಟ್ಟರು. ಅಡ್ವಾಣಿ ಅವರು ಇದು ಸಾಧ್ಯವಿಲ್ಲ ಎಂದು ಹೇಳಿದ್ದನ್ನು, ಖರ್ಗೆ ಅವರು ಮಾಡಿ ತೋರಿಸಿದ್ದಾರೆ ಎಂದು, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿರುವ ಡಿಕೆಶಿ, ಕಾಂಗ್ರೆಸ್ ಸರ್ಕಾರದ ಯೋಜನೆಗಳು ಕೇವಲ ಕಾಂಗ್ರೆಸ್ ಸರ್ಕಾರಕ್ಕೆ...
ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಚರ್ಚೆಯ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಪಲ್ ರನ್ ಮಾಡುತ್ತಿದ್ದಾರೆ. ಇದೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ರಾಜಕೀಯ ಬದುಕಿನ ಕೊನೆಗಾಲದಲ್ಲಿ ಇದ್ದಾರೆಂದು ಹೇಳಿದ್ದು, ಭಾರೀ ಸಂಚಲನ ಸೃಷ್ಟಿಸಿದೆ.
ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರೆಂಬ ಪ್ರಶ್ನೆಗೆ ಎಂಎಲ್‌ಸಿ ಯತೀಂದ್ರ, ಅಹಿಂದ...
ರಾಜ್ಯದ ಗೃಹಲಕ್ಷ್ಮೀ ಫಲಾನುಭವಿಗಳಿಗೆ ಕಾಂಗ್ರೆಸ್ ಸರ್ಕಾರ ಭರ್ಜರಿ ಗಿಫ್ಟ್ ಕೊಟ್ಟಿದೆ. ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡ್ತಿದ್ದ ಸರ್ಕಾರ, ಈ ಬಾರಿ 3 ತಿಂಗಳು ಒಟ್ಟಿಗೆ ಸೇರಿಸಿ 6 ಸಾವಿರ ರೂಪಾಯಿ ರಿಲೀಸ್ ಮಾಡಲಿದೆಯಂತೆ.
ಕಳೆದ ಕೆಲ ತಿಂಗಳಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ ಅಂತಾ, ಫಲಾನುಭವಿಗಳು ಆಕ್ರೋಶ ಹೊರಹಾಕ್ತಿದ್ರು. ಈಗ ಎಲ್ಲರ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...