ಸೆಪ್ಟೆಂಬರ್ 22ರಿಂದ ರಾಜ್ಯದಲ್ಲಿ ಜಾತಿ ಗಣತಿ ಶುರುವಾಗ್ತಿದೆ. ಆದ್ರೀಗ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹೊಸ ತಲೆ ನೋವು ಶುರುವಾಗಿದೆ. ಜಾತಿಗಣತಿಗೆ ಭಾರೀ ವಿರೋಧ ವ್ಯಕ್ತವಾಗ್ತಿದ್ದು, ನ್ಯಾಯಾಲಯದ ಮೆಟ್ಟಿಲೇರಿದೆ. ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ, ಹೈಕೋರ್ಟ್‌ಗೆ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದಾಖಲಾಗಿವೆ. ರಾಜ್ಯದಲ್ಲಿ ಜಾತಿ ಗಣತಿಯನ್ನೇ ರದ್ದುಪಡಿಸುವಂತೆ ಕೋರಲಾಗಿದೆ.
ವಕೀಲ ಕೆ.ಎನ್. ಸುಬ್ಬಾರೆಡ್ಡಿ ಸೇರಿ...
ರಾಜ್ಯದಲ್ಲಿ ಜಾತಿ ಜಟಾಪಟಿ ಶುರುವಾಗಿದ್ದು, ರಾಜ್ಯಪಾಲರ ಅಂಗಳ ತಲುಪಿದೆ. ಮತಾಂತರಗೊಂಡವರ ಜಾತಿ ಉಲ್ಲೇಖ ವಿಚಾರವಾಗಿ, ವಿರೋಧ ಪಕ್ಷಗಳ ಕೆಂಗಣ್ಣಿಗೆ ರಾಜ್ಯ ಸರ್ಕಾರ ಗುರಿಯಾಗಿದೆ. ಮತ್ತೊಂದೆಡೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವೂ ಮುನ್ನೆಲೆಗೆ ಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ, ರಾಜ್ಯದಲ್ಲಿ 1500ಕ್ಕೂ ಹೆಚ್ಚು ಜಾತಿ, ಉಪ ಜಾತಿಗಳು ಇರುವುದು ಬಹಿರಂಗವಾಗಿದೆ. ರಾಜ್ಯ ಸರ್ಕಾರ ಬಿಡುಗಡೆ...
ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಅನುದಾನ ಸಿಗಲಿದೆ. ಪ್ರತ್ಯೇಕ ಸಚಿವಾಲಯ, ಹಾಗೂ ವೈಶಿಷ್ಟ್ಯಪೂರ್ಣ ಯೋಜನೆಗಳು ದೊರೆಯಲಿದೆ. ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.
ಕಲಬುರಗಿ DAR ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ....
ಅತಿವೃಷ್ಟಿಯಿಂದ ಬೆಳೆ ನಷ್ಟವಾಗಿ ಕಂಗಾಲಾಗಿದ್ದ ರೈತರಿಗೆ, ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕೃಷಿ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೆ, ಜಂಟಿ ಸಭೆ ಮಾಡುವುದಕ್ಕೆ ಸೂಚನೆ ಕೊಡಲಾಗಿದೆ. ಸಭೆ ಬಳಿಕ ಇನ್ನೊಂದು ವಾರದಲ್ಲಿ, ಬೆಳೆ ಹಾನಿ ಪರಿಹಾರ ವಿತರಣೆ ಮಾಡೋದಾಗಿ, ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ, ಕಲಬುರಗಿಗೆ ಸಿಎಂ ಸಿದ್ದರಾಮಯ್ಯ...
ಅನರ್ಹ ಬಿಪಿಎಲ್ ಕಾರ್ಡ್‌ಗಳ ವಿರುದ್ಧ ರಾಜ್ಯದ ಆಹಾರ ಇಲಾಖೆ ಸಮರ ಸಾರಿದೆ. ಪಡಿತರ ವ್ಯವಸ್ಥೆಯಲ್ಲಿ ಮೇಜರ್ ಸರ್ಜರಿ ಮಾಡಲು ಸರ್ಕಾರ ಮುಂದಾಗಿದೆ. ಪಡಿತರ ಅಕ್ಕಿ ಅನರ್ಹರ ಕೈಸೇರುತ್ತಿದ್ದು, ಬರೋಬ್ಬರಿ 8 ಲಕ್ಷ ಕಾರ್ಡ್ ರದ್ದು ಮಾಡುವ ಸಾಧ್ಯತೆ ಇದೆ. ಇಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಲಾಗುತ್ತಿದೆ.
ಎಕರೆಗಟ್ಟಲೆ ಜಮೀನು,...
ಸಿಎಂ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಮೀಸಲಾತಿ ಪರಿಷ್ಕರಣೆ ಮಾಡಿದ್ದಾಯ್ತು. ಈಗ ಕುರುಬ ಸಮುದಾಯದ ಸರದಿ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ ಬಗ್ಗೆ ಚರ್ಚಿಸಲು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳು ಇಂದು ಸಭೆ ಕರೆದಿದ್ದಾರೆ. ಇಂದು ಮಹತ್ವದ ಸಭೆ ನಡೆಯುತ್ತಿದೆ. ಸಭೆಯ ಸೂಚನಾ ಪತ್ರದಲ್ಲಿ ಮುಖ್ಯವಾಗಿ 2 ಅಜೆಂಡಾಗಳನ್ನು ಉಲ್ಲೇಖಿಸಲಾಗಿದೆ.
ಕುರುಬ...
ಕೆರೆಗಳ ಸಂರಕ್ಷಿತ ಪ್ರದೇಶವನ್ನು ಬಫರ್ ಝೋನ್ ಎಂದು ಕರೆಯಲಾಗುತ್ತದೆ. ಈ ಕೆರೆಗಳ ಬಫರ್ ಝೋನ್ ಅನ್ನು 30 ಮೀಟರ್‌ಗೆ ಇಳಿಸುವುದರಿಂದ ಬೆಂಗಳೂರಿನ ನೀರಿನ ಭದ್ರತೆ ಮತ್ತು ಪರಿಸರ ವ್ಯವಸ್ಥೆಯ ಸಮಗ್ರತೆಗೆ ಅಪಾಯ ಉಂಟಾಗಲಿದೆ. ಪರಿಸರ ಸಮತೋಲನ ಕಾಪಾಡಲು 30 ಮೀಟರ್ ಬದಲು 300 ಮೀಟರ್‌ಗೆ ಬಫರ್ ಝೋನ್ ಹೆಚ್ಚಿಸುವ ಅಗತ್ಯವಿದೆ.
ಕೆರೆಗಳ ಬಫರ್ ಝೋನ್ ವ್ಯಾಪ್ತಿ...
ಹಾಸನದ ಮೊಸಳೆ ಹೊಸಳ್ಳಿ ಘೋರ ದುರಂತದಲ್ಲಿ, 10 ಮಂದಿ ಮೃತಪಟ್ಟಿದ್ದಾರೆ. 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಇದೀಗ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ.
ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ, ಆದರ್ಶ್, ಋತ್ವಿಕ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಲಕ್ಷಾಂತರ ರೂಪಾಯಿ ಬಿಲ್ ಆಗಿದ್ದು, ಕನಿಷ್ಠ ಅರ್ಧದಷ್ಟು ಹಣ...
ಪ್ರವಾಹ ಹಾಗೂ ಭೂಕುಸಿತದಿಂದ ಹಿಮಾಚಲ ಪ್ರದೇಶ ನಲುಗಿ ಹೋಗಿದೆ. ಹಾಗಾಗಿ ಹಿಮಾಚಲ ಪ್ರದೇಶ ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ನಿಧಿಗೆ ಕರ್ನಾಟಕ ಸರ್ಕಾರ ₹5 ಕೋಟಿ ಹಣ ಬಿಡುಗಡೆ ಮಾಡಿದೆ. ಇದರಿಂದಾಗಿ ವಿರುದ್ಧ ರಾಜ್ಯ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ನಿರಂತರ ಮಳೆ, ಪ್ರವಾಹ, ಮತ್ತು ಭೂಕುಸಿತದಿಂದ ಹಿಮಾಚಲ ಪ್ರದೇಶದಲ್ಲಿ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ...
2025ರ ನವೆಂಬರ್‌ಗೆ ರಾಜ್ಯ ಕಾಂಗ್ರೆಸ್ ಸರ್ಕಾರ, ಎರಡೂವರೆ ವರ್ಷ ಪೂರೈಸುತ್ತಿದೆ. ಸಿಎಂ ಬದಲಾವಣೆ ಕೂಗು ಪರೋಕ್ಷವಾಗಿ, ಮತ್ತೆ ಮುನ್ನೆಲೆಗೆ ಬಂದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನದಲ್ಲಿ, ಸಿಎಂ ಆಗುವ ಆಸೆ ಇನ್ನೂ ಇದೆ ಅನ್ನೋದು ಬಹಿರಂಗವಾಗಿದೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಆಯೋಜಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಹೆಚ್.ಸಿ. ಮಹದೇವಪ್ಪ, ಕೆ.ಹೆಚ್. ಮುನಿಯಪ್ಪ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...