ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಹತ್ವದ ಕಾನೂನು ಜಯ ದೊರೆತಿದೆ.
ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಸಲ್ಲಿಸಿದ್ದ ಎಲೆಕ್ಷನ್ ಪಿಟಿಷನ್ ಅನ್ನು ಕಲಬುರ್ಗಿ...
ಮ್ಯಾನ್ಮಾರ್ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದ ದೋಷಾರೋಪ ಪಟ್ಟಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ವೇಳೆ, ರೀಲ್ಸ್ ಹಾಗೂ ಫೇಸ್‌ಬುಕ್ ಪೋಸ್ಟ್‌ಗಳಿಗಾಗಿ ಹಲ್ಲೆ ನಡೆಸುವುದು ಅಥವಾ ಪೊಲೀಸರನ್ನು ನಿಂದಿಸುವುದು ಒಪ್ಪಲಾಗದು ಎಂದು ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ.
ಬೆಂಗಳೂರಿನ ಚನ್ನಮ್ಮನ...
ಅಕ್ರಮ ವಿದೇಶಿಗರು ಹಾಗೂ ವಲಸಿಗರು ದೇಶದ ಭದ್ರತೆಗೆ ಗಂಭೀರ ಅಪಾಯ ಎಂಬ ವಿಚಾರವನ್ನು ಪುನರುಚ್ಚರಿಸಿರುವ ಕರ್ನಾಟಕ ಹೈಕೋರ್ಟ್, ರಾಜ್ಯದಲ್ಲಿ ಅಂದಾಜು 20 ಲಕ್ಷಕ್ಕೂ ಹೆಚ್ಚು ಅಕ್ರಮ ವಲಸಿಗರು ನೆಲೆಸಿದ್ದಾರೆ ಎಂಬ ಸರ್ಕಾರದ ಮಾಹಿತಿಯನ್ನು ಉಲ್ಲೇಖಿಸಿದೆ. ಈ ಸಂಬಂಧ ಅಕ್ರಮ ವಲಸಿಗರ ವಿರುದ್ಧ ರಾಜ್ಯ ಸರ್ಕಾರ ಯಾವೆಲ್ಲ ಕ್ರಮ ಕೈಗೊಂಡಿದೆ ಎಂಬುದರ ಕುರಿತು ವಿವರವಾದ ವರದಿ...
ಯಾವುದೇ ಪ್ರತಿಫಲ ಬಯಸದೆ ಕಿಡ್ನಿ ದಾನ ಮಾಡಲು ಮುಂದಾಗಿದ್ದ ಬೆಂಗಳೂರಿನ ವೈದ್ಯೆಯೊಬ್ಬರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ಅನುಮತಿ ನೀಡಿದೆ. ಆಸ್ಪತ್ರೆ ಹಾಗೂ ಅಂಗಾಂಗ ಕಸಿ ಸಮಿತಿ ಅವಕಾಶ ನೀಡಿರಲಿಲ್ಲ ಎಂಬ ಕಾರಣದಿಂದ ವೈದ್ಯೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅಪರೂಪದ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ವೈದ್ಯೆಯ ಮನವಿಯನ್ನು ಪುರಸ್ಕರಿಸಿದೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ...
ಸ್ಮಾರ್ಟ್ ಮೀಟರ್ ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಕೆಲವರ ವಿರುದ್ಧ ದಾಖಲಾದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಬಿಜೆಪಿ ನಾಯಕರಿಂದ ಸಲ್ಲಿಸಲ್ಪಟ್ಟ ಈ ಪ್ರಕರಣದಲ್ಲಿ, ನ್ಯಾಯಮೂರ್ತಿ M.I ಅರುಣ್ ಅಧ್ಯಕ್ಷತೆಯ ಹೈಕೋರ್ಟ್ ಪೀಠವು ದೂರು ಮುಂದುವರಿಯಲು ಆಧಾರವಿಲ್ಲ ಎಂದು ಅದನ್ನು ವಜಾಗೊಳಿಸುವ ಆದೇಶ ಹೊರಡಿಸಿದೆ.
ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್...
ಚಿತ್ತಾಪುರದಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಪಥಸಂಚಲನ ಕುರಿತ ಕಗ್ಗಂಟನ್ನು ಸೌಹಾರ್ದಯುತವಾಗಿ ಪರಿಹರಿಸಲು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು ನವೆಂಬರ್ 5ರಂದು ಸಂಜೆ 5 ಗಂಟೆಗೆ ಮತ್ತೊಂದು ಶಾಂತಿ ಸಭೆ ನಡೆಸುವಂತೆ ಸೂಚಿಸಿದೆ.
ನ್ಯಾಯಮೂರ್ತಿ M.G.S. ಕಮಲ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಈ ನಿರ್ದೇಶನ ನೀಡಲಾಯಿತು. ವಿಚಾರಣೆ ವೇಳೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು...
ರಾಜಧಾನಿ ಬೆಂಗಳೂರಿನಲ್ಲಿ ಸದ್ದುಮಾಡಿದ ಬಿಕ್ಲು ಶಿವ ಕೊಲೆ ಪ್ರಕರಣವು ರಾಜಧಾನಿಯಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಈಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಮತ್ತೊಮ್ಮೆ ಸಂಕಷ್ಟ ಸುತ್ತಿಕೊಂಡಿದೆ. ಸದ್ಯ ಬಂಧನದಿಂದ ರಕ್ಷಣೆ ಪಡೆದಿರುವ ಭೈರತಿ ಬಸವರಾಜ್ಗೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ವಿಚಾರಣೆಗಾಗಿ ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 23ಕ್ಕೆ ಅಂತಿಮ ವಿಚಾರಣೆಯನ್ನು ನಿಗದಿಪಡಿಸಿದೆ.
ಹೈಕೋರ್ಟ್ ಪೀಠದ...
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಈ ಪಾಲಿಕೆಯ ವಿರುದ್ಧವೇ ಈಗ ವಾರ್ಡ್ ಸಮಿತಿ PIL ಹಾಕಲು ಮುಂದಾಗಿದೆ. ಅವಳಿನಗರದ ನಾಗರಿಕನ್ನೊಳಗೊಂಡ ವಾರ್ಡ್ ಸಮಿತಿ ರಚನೆಗೆ ಸಾಕಷ್ಟು ವಿಳಂಬ ಆಗಿರುವುದರಿಂದ ರಾಜ್ಯ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಕೇಸ್ ದಾಖಲಿಸಲು ಹುಬ್ಬಳ್ಳಿ-ಧಾರವಾಡ ವಾರ್ಡ್ ಸಮಿತಿ ಬಳಗ ಟ್ರಸ್ಟ್ ಮುಂದಾಗಿದೆ.
ನಾಲೈದು ವರ್ಷಗಳಾದರೂ...
ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಡಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಜ್ವಲ್ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿಇನ್ನೆರಡು ಕ್ರಿಮಿನಲ್ ಪ್ರಕರಣಗಳು ನಡೆಯುತ್ತಿವೆ. ಈ ಪ್ರಕರಣಗಳನ್ನು ಮತ್ತೊಂದು ಸೆಷನ್ಸ್ ಕೋರ್ಟ್‌ಗೆ ವರ್ಗಾಯಿಸುವಂತೆ ಮಾಡಿದ್ದ ಮನವಿಯನ್ನು, ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ಪೀಠ, ಪ್ರಜ್ವಲ್ ರೇವಣ್ಣ ಅರ್ಜಿಯನ್ನು...
ಮಾಲೂರಿನ ಮರು ಮತಎಣಿಕೆಯಲ್ಲಿ ಬಿಜೆಪಿ ಗೆದ್ರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಸವಾಲು ಹಾಕಿದ್ದಾರೆ. ಹೈಕೋರ್ಟ್ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಯಲಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥಗೌಡ ಗೆಲುವು ಸಾಧಿಸಿದ್ರೆ, ರಾಜಕೀಯ ನಿವೃತ್ತಿ ಸ್ವೀಕರಿಸುತ್ತೇನೆ. ಮರು ಮತ ಎಣಿಕೆಯ ಹೈಕೋರ್ಟ್ ಆದೇಶಕ್ಕೆ,...