ಕೇಂದ್ರ ಸರ್ಕಾರ ನೀಡಿದ ವಿಶೇಷ ಅನುದಾನದಲ್ಲಿ ದುರ್ಬಳಕೆ ನಡೆದಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿದ್ದಾರೆ. ರಾಜ್ಯ ಸರ್ಕಾರ ಸುಮಾರು 1,323 ಕೋಟಿ 96 ಲಕ್ಷ ರೂ. ಹಣವನ್ನು ಬೇರೆ ಇಲಾಖೆಗಳಿಗೆ ವರ್ಗಾಯಿಸಿದೆ ಎಂದು ಅವರು ದೂರಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಕೇಂದ್ರ ಸರ್ಕಾರ ನೀಡಿದ ಅನುದಾನವನ್ನು ನಿಗದಿತ ಉದ್ದೇಶಕ್ಕಷ್ಟೇ ಬಳಸಬೇಕು....
ರಾಜ್ಯ ಬಜೆಟ್ ಘೋಷಣೆಯ ಬೆನ್ನಲ್ಲೇ ‘ಗದ್ದುಗೆ ಬದಲಾವಣೆ’ ಚರ್ಚೆ ಮತ್ತೆ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ. ಇದೇ ವೇಳೆ ಕೋಡಿಮಠದ ಶ್ರೀಗಳ ಭವಿಷ್ಯ ನುಡಿಗಳು ಹೊಸ ಕುತೂಹಲಕ್ಕೆ ಕಾರಣವಾಗಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿತು.
ಅದರಲ್ಲಿ ಪ್ರಮುಖವಾಗಿ 2026ನೇ ಸಾಲಿನ ರಾಜ್ಯ ಬಜೆಟ್...
ಮಹಾಶಿವರಾತ್ರಿ ಹಬ್ಬದ ಮುನ್ನ ರಾಜ್ಯ ರಾಜಕೀಯದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ. ಶಿವರಾತ್ರಿಯ ನಂತರ ಎಲ್ಲವೂ ಶುಭವಾಗಲಿದೆ ಎಂಬ ಡಿಸಿಎಂ ಮಾತು ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್, ಜಾತ್ರಾಮಹೋತ್ಸವದ ಅಂಗವಾಗಿ ನೊಣವಿನಕೆರೆ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ದರ್ಶನದ...
ರಾಜ್ಯದಲ್ಲಿ ಕುರ್ಚಿ ಕದನ ಮುಂದಿನ ವಾರದಿಂದ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಅನಿಶ್ಚಿತತೆಗೆ ಆದಷ್ಟು ಬೇಗ ತೆರೆ ಎಳೆಯಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ಹೇರಲು ನಿರ್ಧರಿಸಿರುವ ಮುಂದಿನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ ಬಣದವರೆಂದು ಹೇಳಿಕೊಳ್ಳುವ ಶಾಸಕರು ಮುಂದಿನ ವಾರ ಡಿನ್ನರ್ ನೆಪದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸುವ ಸಾಧ್ಯತೆಗಳಿವೆ.
ಇನ್ನೊಂದೆಡೆ ತಟಸ್ಥ ಬಣವೆಂದು...
ಜನವರಿ 22ರಿಂದ ಆರಂಭವಾಗಿದ್ದ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬುಧವಾರ ತೆರೆ ಬಿದ್ದಿದ್ದು, ಇದರೊಂದಿಗೆ ಕಾಂಗ್ರೆಸ್ ಪಕ್ಷದೊಳಗಿನ ಕುರ್ಚಿ ಕದನ ಮತ್ತೆ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಇದೇ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶೀಘ್ರವೇ ಕಾಂಗ್ರೆಸ್ ಹೈಕಮಾಂಡ್ ದಿಲ್ಲಿಗೆ ಕರೆಸಿಕೊಳ್ಳಬಹುದೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿದೆ.
ಸಂಕ್ರಾಂತಿ ಬಳಿಕ ರಾಜ್ಯ ನಾಯಕತ್ವ...
ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು ದೃಢವಾದ ಪುರಾವೆಗಳನ್ನು ಮುಂದಿಡಲಿ ಎಂದು ಅವರು ಸವಾಲು ಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕಳೆದ ಹತ್ತು ದಿನಗಳಿಂದ ಬಿಜೆಪಿ ವಿಧಾನಪರಿಷತ್ ಮತ್ತು ವಿಧಾನಸಭೆಯಲ್ಲಿ ಈ ವಿಚಾರವನ್ನು ಎತ್ತುತ್ತಿದೆ....
ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ JDS ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನವದೆಹಲಿಯಲ್ಲಿ ಮಹತ್ವದ ಸಂಘಟನಾ ಸಭೆ ನಡೆಯಿತು. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಕೇಂದ್ರ ಸಚಿವ, JDS ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪಕ್ಷದ ಮುಖಂಡರು ಹಾಗೂ...
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುವುದು ಖಚಿತ ಎಂದು ಸಂಸದ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಅಲ್ಲದೇ, 2028ರ ವೇಳೆಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮುಂದಿನ 20 ವರ್ಷಗಳ ಕಾಲ ಎನ್‌ಡಿಎ ಸರ್ಕಾರವೇ ಅಧಿಕಾರದಲ್ಲಿರಲಿದೆ ಎಂದರು. ಕಾಂಗ್ರೆಸ್ ಭವಿಷ್ಯದ ಬಗ್ಗೆ...
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಹಾಗೂ ವಿಧಾನಪರಿಷತ್ ಸದಸ್ಯ ಎಸ್. ರವಿ ನಡುವೆ ತೀವ್ರ ಪೈಪೋಟಿ ಉಂಟಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆ ಕುರಿತಾಗಿ ಒಮ್ಮತ ಮೂಡಿಲ್ಲ. ಇದರ ಪರಿಣಾಮವಾಗಿ ಗುರುವಾರ ನಡೆಯಬೇಕಿದ್ದ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಕೊನೇ ಕ್ಷಣದಲ್ಲಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಕೆ.ಎನ್....
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ಕ್ಲೀನ್‌ಚಿಟ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುದ್ರೆ ಒತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ದೊಡ್ಡ ನಿರಾಳತೆಯಾಗಿದೆ. ಇನ್ನು ಲೋಕಾಯುಕ್ತ ಬಿ–ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದ ದೂರುದಾರ ಸ್ನೇಹಮಯಿ ಕೃಷ್ಣಗೆ ಸ್ಪಷ್ಟ ಹಿನ್ನಡೆಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಸಲ್ಲಿಸಿದ್ದ...