ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆ ನಡೆಯುತ್ತಿರುವ ಮಧ್ಯೆ, ಮಾಜಿ ಸಂಸದ ಡಿ.ಕೆ. ಸುರೇಶ್ ಮಾಡಿರುವ ಟ್ವೀಟ್ ಭಾರೀ ವೈರಲ್ ಆಗಿದೆ.
ಬುಧವಾರ ದೆಹಲಿಗೆ ತೆರಳಿದ್ದ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಭೇಟಿಗೆ ಯತ್ನಿಸಿದ್ದಾರೆ. ಅದು ಆಗದಿದ್ದಕ್ಕೆ ಬರಿಗೈನಲ್ಲೇ ವಾಪಸ್ ಆಗಿದ್ದಾರೆ. ಇತ್ತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ಡಿಕೆಶಿಗೆ ಆಹ್ವಾನ ಬಂದಿಲ್ಲ....
ಬೆಂಗಳೂರು ಟನಲ್ ರಸ್ತೆ ಯೋಜನೆ ಇದೀಗ ಕೇವಲ ಮೂಲಸೌಕರ್ಯ ವಿಚಾರವಾಗಿಲ್ಲ. ಇದು ರಾಜಕೀಯ ವಾದ–ವಿವಾದಕ್ಕೂ ಕಾರಣವಾಗಿದೆ. ಕಾರಣ, ಬೆಂಗಳೂರು ಟನಲ್ ರಸ್ತೆ ಟೆಂಡರ್‌ನಲ್ಲಿ ಅದಾನಿ ಗ್ರೂಪ್ ಅತಿ ಕಡಿಮೆ ಮೊತ್ತದ ಬಿಡ್ ಸಲ್ಲಿಸಿ ಮುಂಚೂಣಿಯಲ್ಲಿದೆ. ಇದರಿಂದಾಗಿ ರಾಷ್ಟ್ರಮಟ್ಟದಲ್ಲಿ ಸದಾ ಅದಾನಿ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್ ಪಕ್ಷ, ಈಗ ಅದೇ ಅದಾನಿ ಸಮೂಹಕ್ಕೆ ಟೆಂಡರ್...
ಒಂದೇ ಒಂದು ದಿನದ ಅಂತರದಲ್ಲಿ ಎರಡು ಡಿನ್ನರ್ ಪಾರ್ಟಿಗಳು. ಒಂದೇ ಬಣದ ನಾಯಕರು. ಅಧಿವೇಶನ ಅಂತ್ಯದ ಹೊಸ್ತಿಲಲ್ಲಿ ರಾಜಕೀಯದ ಅಡುಗೆ ಗಟ್ಟಿ ಆಗ್ತಿದೆಯಾ? ಅನ್ನೋ ಪ್ರಶ್ನೆ ಮೂಡಿದೆ. ಹೌದು ವಿಧಾನಮಂಡಲ ಚಳಿಗಾಲದ ಅಧಿವೇಶನ ಮುಕ್ತಾಯಕ್ಕೆ ಒಂದು ದಿನ ಬಾಕಿ ಇರುವಾಗಲೇ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಡಿನ್ನರ್ ರಾಜಕೀಯ...
ರಾಜ್ಯದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸುವ ಉದ್ದೇಶದಿಂದ ವಿಶೇಷ ಕಾನೂನು ಜಾರಿಗೆ ತರಬೇಕು ಎಂದು ವಿಧಾನ ಪರಿಷತ್ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳು ಕಾಲಮಿತಿಯೊಳಗೆ ಜರುಗುತ್ತಿರುವಂತೆ, ಜಿಲ್ಲಾ ಪಂಚಾಯಿತಿ,...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಿಲ್ಲಿ ಭೇಟಿ, ಮತಗಳ್ಳತನದ ವಿರುದ್ಧ ನಡೆಯುತ್ತಿರುವ ಕಾಂಗ್ರೆಸ್ ಅಭಿಯಾನದ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗಿದ್ದು, ರಾಜ್ಯ ರಾಜಕಾರಣ ಅಥವಾ ನಾಯಕತ್ವದ ಕುರಿತಾಗಿ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಆದರೆ, ದಿಲ್ಲಿಯಲ್ಲೇ ವಾಸ್ತವ್ಯ ಹೂಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಚಟುವಟಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ.
ಲೋಕಸಭೆಯ ಪ್ರತಿಪಕ್ಷ ನಾಯಕ...
ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಅಂತರಿಕ ಕಲಹ, ನಾಯಕತ್ವ ಎಡೆಬಿಡದೇ ಚರ್ಚೆಗೆ ಗ್ರಾಸವಾಗುತ್ತಿರುವ ಸಮಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಳಗ ಒಂದೆಡೆ ಗುಪ್ತ ಭೇಟಿ ಹಾಗೂ ಭೋಜನ ಕೂಟಗಳನ್ನು ಆಯೋಜಿಸಿಕೊಂಡಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹ ಔತಣಕೂಟದ ನೆಪದಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಗುರುವಾರ...
ಧರ್ಮಸ್ಥಳ ಪ್ರಕರಣ ಮತ್ತೊಮ್ಮೆ ರಾಜಕೀಯ ತಾಪಮಾನ ಏರಿಸಿದೆ. ದೂರುದಾರರೇ ಆರೋಪಿಗಳಾಗಿ ಹೊರಬಂದಿರುವ ಚಾರ್ಜ್‌ಶೀಟ್ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಚ್ಚರಿಯ ಬಾಂಬ್ ಸಿಡಿಸಿದ್ದಾರೆ. ಧರ್ಮಸ್ಥಳದ ವಿರುದ್ಧ ನಡೆದ ಪಿತೂರಿಗೆ ಯಾರು ಕಾರಣ ಅನ್ನೋ ಮಾಹಿತಿಯನ್ನ ಡಿಕೆಶಿ ಬಿಚ್ಚಿದ್ದಾರೆ
ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರದ ಬಗ್ಗೆ ನಾನು ಅಂದೇ ಧೈರ್ಯದಿಂದ ಹೇಳಿದ್ದೆ ಎಂದು ಡಿಕೆ ಶಿವಕುಮಾರ್ ಅಧಿವೇಶನದಲ್ಲಿ...
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಮಧ್ಯೆ, ರಾಜ್ಯ ಕಾಂಗ್ರೆಸ್‌ನಲ್ಲಿ “ಡಿನ್ನರ್ ಪಾಲಿಟಿಕ್ಸ್” ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು ಬಳಿಕ ಇದೀಗ ಬೆಳಗಾವಿಯಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖ ನಾಯಕರು ಸೇರಿಕೊಂಡಿರುವ ''ಡಿನ್ನರ್ ಮೀಟಿಂಗ್'' ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಅಹಿಂದ ಶಕ್ತಿ ಕೇಂದ್ರ ಎಂದು ಪರಿಗಣಿಸಲಾದ ಈ ನಾಯಕರ ಹಾಜರಾತಿ ರಾಜಕೀಯ ನಿರೀಕ್ಷೆಗಳನ್ನು...
ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಹಗುರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯೆಯರು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಮಹಿಳಾ ಸದಸ್ಯೆಯರು, ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಭಾರತೀಯ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...