ರಾಜ್ಯ ರಾಜಕೀಯದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ‘ನವೆಂಬರ್ ಕ್ರಾಂತಿ’ ಚರ್ಚೆಗಳು ತೀವ್ರವಾಗಿರುವ ಸಮಯದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಈ ಭೇಟಿಯಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆಯೆಂಬ ಮಾಹಿತಿ ಹೊರಬಿದ್ದಿದೆ.
ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಐದು ತಿಂಗಳ ಹಿಂದೆ ಹೈಕಮಾಂಡ್...
ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಹಲವು ಬಾರಿ ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿ ತಮ್ಮ ನಿಲುವು ಬದಲಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಸೂಚಿಸಿದರೆ ಮುಂದುವರಿಯುತ್ತೇನೆ ಎಂದಿರುವುದು, ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗೆ ಇನ್ನಷ್ಟು ತೀವ್ರತೆ ತಂದಿದೆ. ಎರಡೂವರೆ ವರ್ಷದ ಬಳಿಕ ನಾಯಕತ್ವ ಬದಲಾವಣೆ ಸಾಧ್ಯವೆಂಬ ಊಹಾಪೋಹಗಳು...
ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ಅವರ ನಾಯಕತ್ವ ಕುರಿತು ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ನಾನೇ ಐದು ವರ್ಷ ಮುಖ್ಯಮಂತ್ರಿ ಅಂತಾ ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು ಎಂದು ಕಟುವಾಗಿ ಟೀಕೆ ಮಾಡಿದರು.
ಮೈಸೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಈಗ ಎರಡು ಮುಖಗಳ ನಡುವೆ ಸಿಲುಕಿದ್ದಾರೆ ಎಂದು ಹೇಳಿ,...
ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಭಾಗ. ಆದರೆ ಈ ಪ್ರದೇಶದ ಮೇಲೆ ಹಕ್ಕು ಹೇಳಿಕೆ ಸಲ್ಲಿಸುವ ಚೀನಾ, ಮತ್ತೊಮ್ಮೆ ಅಸಹನೀಯ ವರ್ತನೆ ತೋರಿಸಿರುವ ಘಟನೆ ಬೆಳಕಿಗೆ ಬಂದಿದೆ. ಲಂಡನ್‌ನಿಂದ ಜಪಾನ್‌ಗೆ ಪ್ರಯಾಣಿಸುತ್ತಿದ್ದ ಭಾರತೀಯ ಮಹಿಳೆಯನ್ನು, ಶಾಂಘೈ ವಿಮಾನ ನಿಲ್ದಾಣದಲ್ಲಿ ಅರುಣಾಚಲ ಭಾರತದ ಭಾಗ ಎಂದು ಉಲ್ಲೇಖಿಸಿರುವ ಕಾರಣಕ್ಕೆ, ಪಾಸ್‌ಪೋರ್ಟ್ ಅಮಾನ್ಯ ಎಂದು ಹೇಳಿ ತಡೆದ...
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇವೇಗೌಡನದೊಡ್ಡಿಯಲ್ಲಿ ದಾರುಣ ಘಟನೆ ನಡೆದಿದೆ. ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಯಿಂದ ಖಿನ್ನಗೊಂಡಿದ್ದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ 31ವರ್ಷದ ಮಹದೇವು ಎಂಬ ಯುವಕ ಮೂರು ದಿನಗಳ ಹಿಂದೆ ಮರಕ್ಕೆ ನೇಣು ಬಿಗಿದು ಜೀವ ತ್ಯಜಿಸಿದ್ದಾನೆ. ಭಾನುವಾರ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದರು.
ಮಹದೇವು ಕುಮಾರಸ್ವಾಮಿ ಅವರ...
ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 100 ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಪಕ್ಷದಲ್ಲಿ ಈಗ ತಮ್ಮ ಶಾಸಕರನ್ನೇ ತಮ್ಮಿಂದಲೇ ಖರೀದಿ ಮಾಡುವ ಸ್ಥಿತಿ ಉಂಟಾಗಿದೆ ಎಂಬುದು ಹಿಂದೆಂದೂ ಕಂಡಿರದ ಅವಮಾನಕರ ಪರಿಸ್ಥಿತಿ ಎಂದು ಆರೋಪಿಸಿದರು.
ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಕಾಂಗ್ರೆಸ್ ಸರ್ಕಾರವೇ? ಅಥವಾ ಸಮ್ಮಿಶ್ರ ಸರ್ಕಾರವೇ?...
ಬೆಂಗಳೂರು ನಗರ ಜಿಲ್ಲೆ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ ಎಂಬುದನ್ನು ಕರ್ನಾಟಕ ಮಕ್ಕಳ ಹಕ್ಕುಗಳ ಸೂಚ್ಯಂಕ ವರದಿ ಬಹಿರಂಗಪಡಿಸಿದೆ. ಜೀವನಕ್ಕೆ ಅನುಕೂಲಕರ ಪರಿಸ್ಥಿತಿ, ಪೋಷಣೆಯ ಹಕ್ಕು, ರಕ್ಷಣೆ, ಶಿಕ್ಷಣ ಮತ್ತು ಭಾಗವಹಿಸುವ ಹಕ್ಕುಗಳ ಆಧಾರದ ಮೇಲೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈ ವರದಿಯನ್ನು ಸಿದ್ಧಪಡಿಸಿದೆ.
ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳಿಗಿಂತ ಬೆಂಗಳೂರು...
ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಮತ್ತೆ ಜೋರಾಗಿವೆ. ಕಾಂಗ್ರೆಸ್ ಪಾಳಯದಲ್ಲಿ ಡಿಕೆ ಶಿವಕುಮಾರ್ ಬಣ ಮತ್ತು ಸಿದ್ದರಾಮಯ್ಯ ಬಣದ ನಡುವೆ ಮನಸ್ತಾಪ ಹೆಚ್ಚಾಗಿದೆ.
ಡಿಕೆಶಿ ಪರ ವಲಯ ಶಾಸಕರನ್ನು ತಮ್ಮ ಕಡೆಗೆ ತರಲು ಶ್ರಮಿಸುತ್ತಿದ್ದರೆ, ಇತ್ತ ಮುಖ್ಯಮಂತ್ರಿಗಳ ಪುತ್ರ ಯತೀಂದ್ರ ಸಿದ್ದರಾಮಯ್ಯ ಉತ್ತರ ಕರ್ನಾಟಕದ ಕಾಂಗ್ರೆಸ್ ಶಾಸಕರನ್ನು ಒಗ್ಗೂಡಿಸುವ ಕೆಲಸದಲ್ಲಿ ತೊಡಗಿದ್ದಾರೆ. ಅಪ್ಪನ...
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ ಭೂಮಿ ಪೂಜೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಧ್ಯಮಗಳೊಂದಿಗೆ ಮಾತನಾಡಿ ಸಚಿವ ಸಂಪುಟ ಪುನಾರಚನೆ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಹೈಕಮಾಂಡ್ 4-5 ತಿಂಗಳ ಹಿಂದೆಷ್ಟೇ ಸಂಪುಟ ಪುನರ್‌ರಚನೆ ಮಾಡಬಾರದೆಂದು ಸೂಚಿಸಿತ್ತು. ಎರಡೂವರೆ ವರ್ಷ ಪೂರೈಸಿದ ನಂತರ ವಿಚಾರ ಮಾಡೋಣ ಎಂದು ಹೇಳಲಾಗಿತ್ತು. ಹೈಕಮಾಂಡ್ ಏನು ತೀರ್ಮಾನಿಸುತ್ತದೆಯೋ, ಅದರಂತೆ...
ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಯುವತಿಯೊಬ್ಬಳು ಹತ್ಯೆಯಾಗಿರುವ ಭೀಕರ ಘಟನೆ ನಡೆದಿದೆ. ಸ್ನೇಹಿತೆಯ ರೂಂಗೆ ಕರೆದುಕೊಂಡು ಹೋದ ಯುವಕನೇ ಕೊಲೆಗೈದಿದ್ದಾನೆ ಎನ್ನಲಾಗಿದೆ.
ಮೃತ ಯುವತಿ 21 ವರ್ಷದ ದೇವಿಶ್ರೀ, ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿ. ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದಳು. ಭಾನುವಾರ ಬೆಳಗ್ಗೆ ಪ್ರೇಮ್ ವರ್ಧನ್ ಎಂಬಾತನೊಂದಿಗೆ ಸ್ನೇಹಿತೆಯ...
ತುಂಗಭದ್ರಾ ಅಣೆಕಟ್ಟೆಯಿಂದ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನಿಂತ ಬೆಳೆಗಳ ರಕ್ಷಣೆಗಾಗಿ ನವೆಂಬರ್ 20ರವರೆಗೆ ನೀರು ಒದಗಿಸಲು ನಿರ್ಧರಿಸಲಾಗಿದೆ...