ಕುಣಿಗಲ್ ತಾಲ್ಲೂಕಿನ ಹಿತ್ತಾಪುರ ಗ್ರಾಮದಲ್ಲಿ ಕಲ್ಲುಗಣಿಗಾರಿಕೆ ಅನುಮತಿ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಕುಣಿಗಲ್ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದರು.
ಹಿತ್ತಾಪುರ ಗ್ರಾಮದ ಸರ್ವೆ ನಂಬರ್ 52ರಲ್ಲಿ ಕಲ್ಲುಗಣಿಗಾರಿಕೆಗೆ ತಾಲೂಕು ಆಡಳಿತ ಅನುಮತಿ ನೀಡಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಉಜಿನಿ ಚೌಡೇಶ್ವರಿ ದೇವಸ್ಥಾನಕ್ಕೆ ಸೇರಿದ ಬೆಟ್ಟ ಪ್ರದೇಶವಾಗಿರುವುದರಿಂದ...
ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಮುಂದುವರಿದಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಹಾಗೂ ಹೋರಾಟಗಾರರು ಇಂದು ಆಸ್ಪತ್ರೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿಲ್ಲ, ವೈದ್ಯರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಆರೋಪಗಳು ವ್ಯಕ್ತವಾದವು.
ಪ್ರತಿಭಟನೆಯಲ್ಲಿ ಭಾಗವಹಿಸಿದವರು, ಆಸ್ಪತ್ರೆಯ ಕೆಲವು ವೈದ್ಯರು ಸಾರ್ವಜನಿಕರು ಹಾಗೂ ರೋಗಿಗಳೊಂದಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು....
ಭಾರತ ಮತ್ತು ರಷ್ಯಾ ನಡುವಿನ ದೀರ್ಘಕಾಲದ ಸ್ನೇಹಪೂರ್ಣ ಸಂಬಂಧವು ಸುಭದ್ರ ವ್ಯಾಪಾರ ಸಹಕಾರದಲ್ಲಿ ಪ್ರತಿಫಲಿಸುತ್ತಿದ್ದು, ಈ ಸಂಬಂಧವನ್ನು ಮತ್ತಷ್ಟು ವಿಸ್ತರಿಸಲು ಎರಡೂ ರಾಷ್ಟ್ರಗಳು ಮುಂದಾಗಿವೆ.
ಈ ಸಂಬಂಧ ಎಂಜಿನಿಯರಿಂಗ್, ಔಷಧ, ಕೃಷಿ ಮತ್ತು ರಾಸಾಯನಿಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸುಮಾರು 300 ಉತ್ಪನ್ನಗಳನ್ನು ಭಾರತ ಗುರುತಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಈ...
ಧಾರ್ಮಿಕ ಕಾರ್ಯಕ್ರಮದ ನಿಮಿತ್ತ ಆಸ್ಟ್ರೇಲಿಯಾದ ಸಿಡ್ನಿಯ ಬೋಂಡಿ ಕಡಲತೀರದಲ್ಲಿ ಜಮಾವಣೆಯಾಗಿದ್ದ ಸುಮಾರು ಎರಡು ಸಾವಿರ ಯಹೂದಿಗಳ ಮೇಲೆ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 42 ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿ ನಡೆದ ತಕ್ಷಣ ಪೊಲೀಸರು ಪ್ರತಿದಾಳಿ ನಡೆಸಿದ್ದು, ಓರ್ವ...
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಿ ಒಂದು ವಾರಕ್ಕೂ ಹೆಚ್ಚು ಸಮಯ ಕಳೆದಿದ್ದು, ಈ ಬಾರಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸಲಾಗಿದೆ. ಆದರೆ, ಈ ಅವಕಾಶವನ್ನು ರಾಜಕೀಯವಾಗಿ ಸದುಪಯೋಗಪಡಿಸಿಕೊಳ್ಳುವಲ್ಲಿ ಜೆಡಿಎಸ್ ಪಕ್ಷ ವಿಫಲವಾಗುತ್ತಿರುವಂತೆ ಕಾಣಿಸುತ್ತಿದೆ.
ಇದಕ್ಕೆ ಪ್ರಮುಖ ಕಾರಣವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅನುಪಸ್ಥಿತಿ ಚರ್ಚೆಗೆ ಬಂದಿದೆ....
ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಗೊಂದಲ ಮುಂದುವರಿದಿದ್ದರೂ, ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿ ವಿಧಾನಸಭೆಯಲ್ಲಿ ಸರ್ಕಾರವನ್ನು ಪರಿಣಾಮಕಾರಿಯಾಗಿ ಕಟ್ಟಿ ಹಾಕಲು ವಿಫಲವಾಗಿದೆ ಎಂಬ ಅಸಮಾಧಾನ ಬಿಜೆಪಿಯ ಶಾಸಕರಲ್ಲೇ ವ್ಯಕ್ತವಾಗಿದೆ.
ಸಾಕಷ್ಟು ಜ್ವಲಂತ ಸಮಸ್ಯೆಗಳು ಮತ್ತು ವಿವಾದಗಳು ಇದ್ದರೂ, ಮುಂದಿನ ಸಾಲಿನ ನಾಯಕರು ರಕ್ಷಣಾತ್ಮಕ ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಬೇಸರ ಪಕ್ಷದೊಳಗೆ ಮನೆ ಮಾಡಿದೆ. ಉತ್ತರ ಕರ್ನಾಟಕದ ಸಮಸ್ಯೆಗಳ...
ಮತ ಕಳವು ವಿರುದ್ಧದ ರ್ಯಾಲಿಗೆ ದೆಹಲಿಗೆ ಆಗಮಿಸಿರುವ ಕಾಂಗ್ರೆಸ್ ನಾಯಕರು, ಕರ್ನಾಟಕ ಭವನದಲ್ಲಿ ಬಣ ರಾಜಕೀಯದ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲಿಗರು “ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ” ಎಂದು ಘೋಷಣೆ ಕೂಗಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು “ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ” ಎಂದು ಪ್ರತಿಘೋಷಣೆ ಮೊಳಗಿಸಿದರು.
ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ...
ರಾಜ್ಯಾದ್ಯಂತ ಮೈನಡುಗುವ ಚಳಿ ಆರಂಭವಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಶೀತಗಾಳಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಮೊದಲ ಹಾಗೂ ಎರಡನೇ ದಿನ ತೀವ್ರ ಶೀತಗಾಳಿ ಬೀಸುವ ಸಾಧ್ಯತೆ...
ನಗರದ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಶಿಲ್ಪಾ ಶೆಟ್ಟಿ ಒಡೆತನದ ‘ಬ್ಯಾಸ್ಟಿಯನ್’ ಪಬ್‌ನಲ್ಲಿ, ಮಧ್ಯರಾತ್ರಿ ಗಲಾಟೆ ನಡೆದಿದ್ದು, ಈ ಪ್ರಕರಣದಲ್ಲಿ ಮಾಜಿ ಬಿಗ್ ಬಾಸ್ ಸ್ಪರ್ಧಿ ಹಾಗೂ ನಿರೂಪಕಿಯ ಮಾಜಿ ಪತಿ, ಉದ್ಯಮಿ ಸತ್ಯ ನಾಯ್ಡು ಗಲಾಟೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಘಟನೆ ಕಳೆದ ಎರಡು ದಿನಗಳ ಹಿಂದೆ, ಮಧ್ಯರಾತ್ರಿ ಸುಮಾರು 1:30ರ ವೇಳೆಗೆ ನಡೆದಿದ್ದು, ಪಬ್...
ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು ಶಿವ ಮತ್ತು ವಿಷ್ಣು ಹೆಸರಿನಿಂದಲೇ ನನ್ನ ಜನ್ಮನಾಮ ಸಿದ್ದ ರಾಮ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನನ್ನ ಹೆಸರಲ್ಲಿ ಶಿವನೂ ಇದ್ದಾನೆ, ವಿಷ್ಣುನೂ ಇದ್ದಾನೆ. ದೇವರು ಹಾಗೂ ಧರ್ಮಗಳು ದ್ವೇಷ ಹುಟ್ಟು ಹಾಕುವ ಕೆಲಸ ಮಾಡಲ್ಲ. ಪಟ್ಟಭದ್ರ ಹಿತಾಸಕ್ತಿಗಳು ಧರ್ಮವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ....