www.karnatakatv.net :ರಾಜ್ಯದಲ್ಲಿ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ನಿರೀಕ್ಷೆಯಂತೆ ಆಡಳಿತ ರೂಡ ಬಿಜೆಪಿ ಹೆಚ್ಚಿನ ಕ್ಷೇತ್ರದಲ್ಲಿ ಗೆಲುವು ಸಾಧಿಸುವತ್ತ ಮುನ್ನಡೆಯುತ್ತಿದೆ . ಬೆಂಗಳೂರು ನಗರ ವ್ಯಾಪ್ತಿಯ ಬಿಜೆಪಿಯ ಶಾಸಕರಿಗೆ ಪ್ರತಿಷ್ಟೆಯ ಪ್ರಶ್ನೆಯಾಗಿದ್ದ ಪರಿಷತ್ ಚುನಾವಣೆಯಲ್ಲಿ ಪಕ್ಷ ಸಮಾಧಾನದ ನಿಟ್ಟುಸಿರು ಬಿಟ್ಟಿದೆ. ಸೋತ ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು ಬೆಂಗಳೂರು...
ಹಾಸನ : ಡಿಸೆಂಬರ್ 10ರಂದು ವಿಧಾನಪರಿಷತ್ತಿನ ದಂತಹ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. 75 ಸದಸ್ಯರ ಮೇಲೆ ಮನೆಯಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಪಡೆದುಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶವಿದೆ. ಅದರಂತೆ ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಅವರ ಮೊಮ್ಮಗ ಸೂರಜ್ ರೇವಣ್ಣ ರವರು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದು ಸಾವಿರಕ್ಕೂ ಅಧಿಕ ಮತಗಳಿಂದ ...
ಧನಂಜಯ್ ನಟನೆಯ ‘ಬಡವ ರಾಸ್ಕಲ್’ ಸಿನಿಮಾದ ಟ್ರೇಲರ್ ಇಂದು ಸಂಜೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ರಿಲೀಸ್ ಆಗಿದೆ. ಗೆಳೆಯರಿಗಾಗಿ ಪ್ರಾಣ ಬೇಕಾದರೂ ಕೊಡೋಕೆ ಸಿದ್ಧನಿರುವ ಮಧ್ಯಮ ವರ್ಗದ ಯುವಕನಾಗಿ ಧನಂಜಯ ಮಿಂಚಿದ್ದಾರೆ. ಟ್ರೇಲರ್ ರಿಲೀಸ್ ಆದ ನಂತರದಲ್ಲಿ ಈ ಸಿನಿಮಾ ಬಗ್ಗೆ ಇದ್ದ ನಿರೀಕ್ಷೆಗಳು ದುಪ್ಪಟ್ಟಾಗಿವೆ.
ಧನಂಜಯ್ ಈ ಸಿನಿಮಾದಲ್ಲಿ ಆಟೋ ಓಡಿಸೋ...
ರಾಯಚೂರು : ನಿಧಿಗಾಗಿ ದುಷ್ಕರ್ಮಿಗಳು ಒಂದಲ್ಲಾ ಒಂದು ಕೃತ್ಯ ಮಾಡುವುದನ್ನು ನೋಡಿರುತ್ತೇವೆ. ಆದರೆ ಶ್ರೀಕೃಷ್ಣನ ದೇಗುಲವನ್ನೇ ಕುರೂಪಗೊಳಿಸಿ ನಿಧಿಗಾಗಿ ತಡಕಾಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದ ಯಾಟಗಲ್ ಗ್ರಾಮದಲ್ಲಿ ನಡೆದಿದೆ .
ಇನ್ನೂ ದುಷ್ಕರ್ಮಿಗಳಿಗೆ ನಿಧಿ ಇರುವುದಾಗಿ ತಿಳಿದುಬಂದಂತೆ ,ಹಾಗಾಗಿ ಯಾಟಗಲ್ ಗ್ರಾಮದ ಸರ್ಕಾರಿ ಶಾಲೆ ಪಕ್ಕದಲ್ಲಿರುವ ಕೃಷ್ಣನ ದೇವಸ್ಥಾನದಲ್ಲಿ .ತಡರಾತ್ರಿ ಎದೆಯೆತ್ತರ ಗುಂಡಿ ತೋಡಿ...
‘ಲಕ ಲಕ ಲ್ಯಾಂಬೋರ್ಗಿನಿ’ ಹಾಡಿನ ಪೋಸ್ಟರ್ ಬಿಡುಗಡೆ ಆಗಿದೆ.ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ ಅವರು ತಮ್ಮ ಹಾಡುಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಸಿನಿಮಾ ಗೀತೆಗಳಿಗಿಂತಲೂ ತಮ್ಮ ಮ್ಯೂಸಿಕ್ ವಿಡಿಯೋಗಳ ಮೂಲಕ ಅವರು ಹೆಚ್ಚು ಫೇಮಸ್ ಆಗಿದ್ದಾರೆ. ಈಗ ಅವರು ಅದೇ ರೀತಿ ಇನ್ನೊಂದು ಹಾಡು ತಯಾರಿಸಿದ್ದಾರೆ. ಅದರಲ್ಲಿ ಖ್ಯಾತ ನಟಿ ರಚಿತಾ ರಾಮ್ ಅವರು...
ಹೊಸ ಪ್ರತಿಭೆಗಳ ಕೆಲವು ಸಿನಿಮಾಗಳು ಬಿಡುಗಡೆ ಮೊದಲು ಸದ್ದು ಮಾಡುವುದಿಲ್ಲ , ಬಿಡುಗಡೆ ನಂತರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದು ಸದ್ದುಮಾಡುತ್ತವೆ . ಅಂತಹ ಚಿತ್ರವೇ ಕಾನ್ಸೀಲಿಯಂ ಕಳೆದ ಶುಕ್ರವಾರ ಡಿ 10 ರಂದು ತೆರೆಕಂಡ ಈ ಚಿತ್ರ. ಈಗ ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಥ್ರಿಲ್ಲರ್ ಸಸ್ಪೆನ್ಸ್ ಅಂಶದೊಂದಿಗೆ ಸಾಗುವ ಈ ಸಿನಿಮಾ ಹೊಸಬರ ಪ್ರಯತ್ನವಾಗಿ...
ಉತ್ತರಪ್ರದೇಶ : ಕಾಶಿ ವಿಶ್ವನಾಥ ಕಾರಿಡಾರ್’ ಇಂದು ಲೋಕಾರ್ಪಣೆಗೊಳ್ಳಲಿದೆ. ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಕನಸಿನ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನೆಗೂ ಮುನ್ನ ಕಾಶಿಯ ಕೊತ್ವಾಲ್ ಎಂದೆ ಪ್ರಸಿದ್ಧಿಯಾಗಿರುವ ಕಾಲಬೈರವನ ದರ್ಶನ ಪಡೆಯಲಿದ್ದಾರೆ.12 ಜೋತಿರ್ಲಿಂಗಗಳಲ್ಲಿ ಒಂದಾದ ಕಾಶಿ ವಿಶ್ವನಾಥನ ದರ್ಶನ ಪಡೆದ್ರೆ ಜೀವ ಪಾವನ ಅನ್ನೋ ನಂಬಿಕೆ ಭಕ್ತರದ್ದು. ಆದ್ರೆ ಕಾಶಿ ವಿಶ್ವನಾಥನ ಭಕ್ತರಿಗೆ...
ಇಸ್ರೇಲ್ : 2021 ರ ಮಿಸ್ ಯುನಿವರ್ಸ್ ಸ್ಪರ್ಧೆಯ ವಿಜೇತೆಯಾಗಿ ಚಂಡೀಗಢ ಮೂಲದ ಹರ್ನಾಜ್ ಸಂಧು ಆಯ್ಕೆಯಾಗಿದ್ದಾರೆ. ಇಸ್ರೇಲ್ನ ಐಲಾಟ್ನಲ್ಲಿ ನಡೆದ 70ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ 21 ವರ್ಷದ ಹರ್ನಾಜ್ ಸಂಧು ಭುವನ ಸುಂದರಿಯಾಗಿ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ 21 ವರ್ಷಗಳ ಬಳಿಕ ಭಾರತಕ್ಕೆ ಮಿಸ್ ಯುನಿವರ್ಸ್ ಪಟ್ಟ ದೊರಕಿದೆ. 2000ರಲ್ಲಿ ಲಾರಾದತ್ತ ಭುವನ ಸುಂದರಿಯಾಗಿ ಹೊರಹೊಮ್ಮಿದ್ದರು. ಅವರ ಬಳಿಕ ಈಗ...
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡು ಲಾರಿ ಪಲ್ಟಿಯಾಗಿದ್ದು ನಾಲ್ವರು ಮೃತಪಟ್ಟ ಘಟನೆ ನಡೆದಿದೆ.
ಗದಗ ಜಿಲ್ಲೆ ಹುಯಿಲಗೋಳ್ ನಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡ ಕಾರಣ ಪಲ್ಟಿಯಾಗಿದ್ದು ನಾಲ್ವರು...