ಧರ್ಮಸ್ಥಳ ಪ್ರಕರಣ ಕೊನೆಗೂ ಕೇಂದ್ರ ಸರ್ಕಾರದ ಅಂಗಳ ತಲುಪಿದೆ. ಪ್ರಕರಣವನ್ನು ಎನ್‌ಐಎಗೆ ವಹಿಸಬೇಕೆಂದು, ಬಿಜೆಪಿಗರು ಒತ್ತಾಯಿಸುತ್ತಲೇ ಬಂದಿದ್ರು. ಎರಡ್ಮೂರು ದಿನಗಳಲ್ಲಿ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಲು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಿದ್ಧತೆ ಮಾಡಿಕೊಂಡಿದ್ರು. ಅಷ್ಟರಲ್ಲೇ ಅಮಿತ್ ಶಾರನ್ನು ಕರ್ನಾಟಕದ 8 ಸ್ವಾಮೀಜಿಗಳ ನಿಯೋಗ ಭೇಟಿಯಾಗಿದೆ.
ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ ಗುರುಪುರ ವಜ್ರದೇಹಿ...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮವಾಗಿ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಸೆಪ್ಟೆಂಬರ್ 5ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇದರ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 30 ರಂದು ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳಸ,...
ಕಳೆದ ಎರಡ್ಮೂರು ದಿನಗಳಿಂದ ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದ್ರೆ ರಾಜ್ಯದಲ್ಲಿ ಆಗಸ್ಟ್ 27ರಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಒಂದೆರಡು ದಿನ ಬಹುತೇಕ ಜಿಲ್ಲೆಗಳಲ್ಲಿ, ಒಣ ಹವೆ ಇರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಆಗಸ್ಟ್ 27ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ...
ರಾಜ್ಯ ರಾಜಕಾರಣದ ಸ್ಫೋಟಕ ಬೆಳವಣಿಗೆಗಳು, ಧರ್ಮಸ್ಥಳದಲ್ಲಿನ ನಿಗೂಢ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. 2 ತಿಂಗಳ ಹಿಂದೆ ಅರಸರ ಅರಮನೆಗೆ ಕಾರ್ಮೋಡ ಕವಿದೀತು ಅಂತಾ, ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದ್ರು. ಅದೀಗ ನಿಜವಾಗಿದೆ. ರಾಜಣ್ಣ ತಲೆದಂಡದಿಂದ ಸಿದ್ದು ಅಕ್ಷರಶಃ ಚಿಂತಿತರಾಗಿದ್ದಾರೆ.
ಇದೇ ವಿಚಾರವಾಗಿ ಗದಗ್‌ನಲ್ಲಿ...
ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ, ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 50ರಿಂದ 60 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಮುಂದಿನ...
ಇದೇ ಆಗಸ್ಟ್ 5ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಬರ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ. ಅದರಲ್ಲೂ ಕರ್ನಾಟಕದಲ್ಲೇ ಚುನಾವಣಾ ಅಕ್ರಮ ಆಗಿದೆ ಅಂತಾ, ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಹೀಗಾಗಿ ಮತಗಳ್ಳತನ ವಿರುದ್ಧ ಕಾಂಗ್ರೆಸ್ ಹೋರಾಟ ಹಮ್ಮಿಕೊಂಡಿದೆ.
ರಾಹುಲ್ ಗಾಂಧಿ ಅವರು ಮತಗಳ್ಳತನದ ವಿರುದ್ಧದ ತಮ್ಮ ಹೋರಾಟವನ್ನು ಕರ್ನಾಟಕದಿಂದಲೇ...
ಬೆಂಗಳೂರು : ಕೆಐಎಡಿಬಿ ವತಿಯಿಂದ ರೈತರ ಭೂಸ್ವಾಧೀನ ವಿರೋಧಿಸಿ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ನಡೆಯನ್ನು ಟೀಕಿಸಿದ್ದ ನಟನ ವಿರುದ್ಧ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಪ್ರಕಾಶ್ ರಾಜ್ ಬೇರೆ ಕಡೆಗೆ ಹೋಗಿ ಹೋರಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಬಹುಭಾಷಾ ನಟ ಪ್ರಕಾಶ್ ರಾಜ್ ಕೇವಲ ಕರ್ನಾಟಕದಲ್ಲಿ...
ಮಂಗಳೂರು : ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಮುಂತಾದ ಕ್ಷೇತ್ರಗಳಿಗೆ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ. ಚತುರ್ವಿಧದಾನ ಪರಂಪರೆಯಿಂದ ಈ ದೇವಸ್ಥಾನ ಹೆಸರುವಾಸಿಯಾಗಿದೆ. ಮರಕ್ಕೆ ಬೇರಿದ್ದ ಹಾಗೆ, ಮನುಷ್ಯನಿಗೆ ನಂಬಿಕೆ. ನಂಬಿಕೆಯಿಂದ, ಮೋಕ್ಷ ಸಾಧನೆಗಾಗಿ ಜನರು ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಧರ್ಮ ನೂರಾದರೂ ತತ್ವವೊಂದೇ, ನಾಮ ಹಲವಾದರೂ ದೈವವೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ ಎಂದು...
ಬೆಂಗಳೂರಿನಲ್ಲಿ ಪುಂಡ ಪೋಕರಿಗಳ ಹಾವಳಿ ದಿನೇ ದಿನೇ ಹೆಚ್ಚಾಗ್ತಿದೆ. ಸದ್ಯ ಮಾರಕಾಸ್ತ್ರ ತೋರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಕಳ್ಳರನ್ನು ಹಿಡಿದುಕೊಡುವಲ್ಲಿ ಮಾಜಿ ಕಾರ್ಪೋರೇಟರ್ ಗಣೇಶ್ ರೆಡ್ಡಿ ಸಾಹಸ ಮೆರೆದಿದ್ದಾರೆ. ಹೌದು ಸಿನಿಮೀಯ ರೀತಿಯಲ್ಲಿ ಮಾರಕಾಸ್ತ್ರಗಳನ್ನ ತೋರಿಸಿ , ಬೆದರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿ ಯಾಗ್ತಿದ್ದ ಕಳ್ಳರನ್ನ ಗಣೇಶ್ ಕಾರು ಗುದ್ದಿಸಿ ಮೊಬೈಲ್...
ಕೆಂಗೇರಿ ರಸ್ತೆಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಡಿಸೆಂಬರ್ 15 ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರ ಉತ್ತರಾಧಿಕಾರಿಯಾಗಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗೆ ಪಟ್ಟಾಧಿಕಾರ ಮಹೋತ್ಸವ ಸಂಪನ್ನಗೊಂಡಿತು. ಧಾರ್ಮಿಕ ವಿಧಿ ವಿಧಾನದಂತೆ ಪಟ್ಟಾಧಿಕಾರ ಕಾರ್ಯಕ್ರಮದ ಭಾಗವಾಗಿ ಗಂಗೆ ಪೂಜೆ, ಶಿವಪಾರ್ವತಿ ಪೂಜೆ, ಗಣಪತಿ ಪೂಜೆಯನ್ನು ನೆರವೇರಿತು. ಇದಾಗಿ ನೂತನ ಸ್ವಾಮೀಜಿಗೆ ರುದ್ರಾಕ್ಷಿ ಮುಕುಟ ಧಾರಣೆ ವಿಧಿಯೂ...