ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಮ್ಮ ಮೇಲಿನ ಬೆಂಗಾವಲು ಭದ್ರತೆಯನ್ನ ಸರ್ಕಾರ ಹಿಂತೆಗೆದುಕೊಂಡಿರುವುದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನಗೇನಾದರೂ ಆದರೆ ಅದಕ್ಕೆ ಸಂಪೂರ್ಣ ಹೊಣೆ ರಾಜ್ಯ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಕುಟುಂಬದದು ಎಂದು ಅವರು ಎಚ್ಚರಿಸಿದ್ದಾರೆ.
ನನ್ನ ಬೆಂಗಾವಲು ರಕ್ಷಕರನ್ನ ತೆರವುಗೊಳಿಸಿರುವುದು ಸರ್ಕಾರ ನನ್ನನ್ನು ಟಾರ್ಗೆಟ್ ಮಾಡುತ್ತಿರುವ ಸ್ಪಷ್ಟ...
25 ವರ್ಷಗಳ ಅಧೀನದಲ್ಲಿ ಸದೃಢ ಸ್ಥಾನ ಪಡೆದಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ, ನೂತನ ಚುನಾವಣೆಗೆ ನಾಮಪತ್ರ ಸಲ್ಲಿಸಿ ಹೋರಾಟವನ್ನ ಘೋಷಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿಗೆ ನಿಮ್ಮ 'ಅಶ್ವಮೇಧ ಯಾಗದ ಕುದುರೆ'ಯನ್ನು ಕಟ್ಟಿಹಾಕುವುದಾಗಿ ಸವಾಲು ಎಸೆದಿದ್ದಾರೆ. ನಾನು 40 ವರ್ಷಗಳಿಂದ ಬ್ಯಾಂಕ್ ಸೇವೆಯಲ್ಲಿ ತೊಡಗಿದ್ದೇನೆ. 25 ವರ್ಷ ಅಧ್ಯಕ್ಷರಾಗಿದ್ದು, ಈ ಬಾರಿ ಮತ್ತೆ...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ ಪಕ್ಷವನ್ನು ರಚಿಸುವ ಬಗ್ಗೆ ಅವರು ನೀಡಿರುವ ಎಚ್ಚರಿಕೆ, ಮತ್ತು ತಮ್ಮ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂಬ ಆತ್ಮವಿಶ್ವಾಸದ ಅಭಿವ್ಯಕ್ತಿ, ರಾಜ್ಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗಳಿಗೆ ದಾರಿ...
ಕಾಂಗ್ರೆಸ್ನ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ನವೆಂಬರ್ ತಿಂಗಳಲ್ಲಿ ಸರ್ಕಾರದಲ್ಲಿ ಬದಲಾವಣೆ ಅಥವಾ ಕ್ರಾಂತಿ ಸಂಭವಿಸಲಿದೆ ಎಂಬ ಊಹಾಪೋಹಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜಣ್ಣ ಅವರು ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ನವೆಂಬರ್‌ನಲ್ಲಿ ಯಾವುದೇ ಬದಲಾವಣೆ ಅಥವಾ ಕ್ರಾಂತಿ ಆಗೋದಿಲ್ಲ. ಇದು ಸಂಪೂರ್ಣ ಸುಳ್ಳು ಮಾತು ಎಂದು ಹೇಳಿದರು.
ಊಹಾಪೋಹಗಳಿಗೆ ಯಾವುದೇ ಅವಕಾಶವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್...
ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರ ಸಂಪುಟ ಪುನಾರಚನೆಯಾಗುತ್ತದೆ ಎಂದು ಹೇಳಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಮಾತ್ರ ಐದು ವರ್ಷ ಮುಖ್ಯಮಂತ್ರಿಯಾಗಿಯೇ ಮುಂದುವರಿಯಲಿದ್ದಾರೆ ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದರು. ಆದ್ರೆ ಈ ಹೇಳಿಕೆಗೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ವಿರೋಧಿ. ತಮ್ಮ ರಾಜಕೀಯ ಲಾಭಕ್ಕಾಗಿ ಮಾತ್ರ ಕುರುಬ ಸಮುದಾಯವನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪವನ್ನು ಎಚ್. ವಿಶ್ವನಾಥ್ ಅವರು ಮಾಡಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ಮೂಲಕ ಮಾತನಾಡಿದ ಅವರು ಸಿದ್ದರಾಮಯ್ಯ ಅವರ ವಿರುದ್ಧ ಗಂಭೀರ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಅವರಿಗೆ ಯಾವಾಗಲೂ ರಾಜಕೀಯ ಸಂಕಷ್ಟ ಬಂದಾಗ ಮಾತ್ರ ಕುರುಬ ಸಮುದಾಯದ ನೆನಪು...
ಪ್ರತಾಪ್ ಸಿಂಹ ಅವರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹಾಗಾಗಿ ಬಿಜೆಪಿ ರಾಜಕೀಯವಾಗಿ ತಮ್ಮನ್ನು ಜೀವಂತವಾಗಿ ತೋರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಾಪ್ ಸಿಂಹರಿಗೆ ಈ ಬಾರಿ ಟಿಕೆಟ್ ಸಿಗಲಿಲ್ಲ. ಅವರು ಈಗ ತಮ್ಮ ರಾಜಕೀಯ ಪ್ರಸ್ತಿತಿಯನ್ನು ಪೋಷಿಸಲು ಈ ರೀತಿ ಕ್ರಮಕೈಗೊಂಡಿದ್ದಾರೆ ಎಂದು ಟೀಕಿಸಿದರು.
ದಸರಾ ನಾಡಹಬ್ಬದ ಉದ್ಘಾಟನೆಗೆ...
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಅವರು ಕೊನೆಗೂ ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಭೂ ಒಡೆತನ ಯೋಜನೆಯ ಫಲಾನುಭವಿಗಳಿಂದ ಕಮಿಷನ್ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಉಂಟಾದ ವಿವಾದ ಹಾಗೂ ರಾಜಕೀಯ ಒತ್ತಡದ ನಡುವೆಯೇ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವು ಭೋವಿ ಸಮುದಾಯದ...
ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿದೆ. ಜಮೀನಿನ ಬೆಳೆ ನಾಶ, ಆಸ್ತಿಪಾಸ್ತಿ ಹಾನಿ, ರಸ್ತೆ ಸಂಪರ್ಕ ಕಡಿತ ಸೇರಿದಂತೆ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ನಿಖಿಲ್ ಕುಮಾರಸ್ವಾಮಿ ರಾಜ್ಯವ್ಯಾಪಿ ಪ್ರವಾಸ ಕೈಗೊಳ್ಳಲಿದೆ
ಈ ನಿಟ್ಟಿನಲ್ಲಿ ಬಿಜೆಪಿ...
ಸ್ಯಾಂಡಲ್‌ವುಡ್ ನಟಿ ರಮ್ಯಾಗೆ ಕಮೆಂಟ್ ಮಾಡಿದ್ದಕ್ಕೆ 12 ಜನರನ್ನ ಅರೆಸ್ಟ್ ಮಾಡಿದ್ದಾರೆ. ಧರ್ಮಸ್ಥಳ ಕೇಸ್‌ನಲ್ಲಿ ಯಾಕಿಲ್ಲ? ಧರ್ಮಸ್ಥಳ ಕ್ಷೇತ್ರದ ಬಗ್ಗೆ ಯೂಟ್ಯೂಬ್ ಚಾನೆಲ್‌ಗಳಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬಳಸಿ ಅವಹೇಳನಕಾರಿ ವಿಡಿಯೋ ಮಾಡ್ತಾರೆ. ತಪ್ಪು ವಿಷಯಗಳನ್ನು ಸೃಷ್ಟಿಸಿ ಪ್ರಸಾರ ಮಾಡಿದ್ದಾರೆ. ಹೀಗೆ ಮಾಡಿದವರವನ್ನ ಎಷ್ಟು ಜನರನ್ನು ಬಂಧಿಸಲಾಗಿದೆ? ಎಷ್ಟು ಮಂದಿ ಜೈಲಿನಲ್ಲಿ ಇದ್ದಾರೆ? ಅಂತ ವಿಧಾನ...