ಬೆಳಗಾವಿ: ಹುಟ್ಟಹಬ್ಬ ಪ್ರಯುಕ್ತ ಪೊಲೀಸ್ ಅಧಿಕಾರಿಗಳು ಶಾಸಕರೊಬ್ಬರ ಮೇಲೆ ಹೂಮಳೆ ಸುರಿಸಿದ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.
ಬೆಳಗಾವಿಯ ಜಿಲ್ಲೆಯ ಕಿತ್ತೂರು ತಾಲೂಕಿನ ಕಿತ್ತೂರು ಮತಕ್ಷೇತ್ರದ ಶಾಸಕ ಮಹಾಂತೇಶ್ ದೊಡ್ಡಗೌಡರ ಅವರ ಹುಟ್ಟ ಹಬ್ಬದ ನಿಮಿತ್ತ ಪೋಲಿಸ ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿ ಕೇಕ್ ಕತ್ತರಿಸಿದ್ರು. ಅಲ್ಲದೆ ಶಾಸಕ ಮಹಾಂತೇಶ್ ದಂಪತಿ...
ತುಮಕೂರು: ಸುಳ್ಳು ಪ್ರಕರಣ ದಾಖಲಿಸಿದ್ದಲ್ಲದೆ ನನ್ನಿಂದ ಹಣ ಪಡೆದುಕೊಂಡಿದ್ದಾರೆ ಅಂತ ಮ್ಯಾಕ್ಸಿ ಕ್ಯಾಬ್ ಚಾಲಕನೊಬ್ಬ ಗುಬ್ಬಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾನೆ.
ಹೌದು, ಮ್ಯಾಕ್ಸಿ ಕ್ಯಾಬ್ ಚಾಲಕ ಶಕೀಲ್ ಎಂಬಾತ ಗುಬ್ಬಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದಾನೆ. ಇನ್ನು ಆರೋಪಕ್ಕೆ ಕಾರಣವಾಗಿದ್ದು ಶವ ಸಾಗಿಸೋ ವಿಚಾರವಾಗಿ. ಹೌದು ಸೆ.02ರ ಬೆಳಗ್ಗೆ ತುಮಕೂರು ಜಿಲ್ಲೆಯ...
ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ.
ಗುಬ್ಬಿ ತಾಲೂಕಿನ ಪತ್ರೆ ಮತ್ತಿಘಟ್ಟದ ಬಳಿ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು ಸಾವನ್ನಪ್ಪಿದ್ದ ಚಿರತೆ ಸುಮಾರು 8 ವರ್ಷ ಪ್ರಾಯದ್ದೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತಿಘಟ್ಟದ ಬಳಿಯ ಮೇಲ್ಸೇತುವೆ ಬಳಿ ಬಿದ್ದಿದ್ದ ಚಿರತೆಯ...
ರಾಯಚೂರು: ಮಹಿಳೆಯರ ಮೇಲೆ ದಿನೆ ದಿನೆ ಕಿರುಕುಳ, ಅತ್ಯಾಚಾರ, ಹಿಂಸೆ, ದೌರ್ಜನ್ಯ ಪ್ರಕರಣ ಖಂಡಿಸಿ ವಿದ್ಯಾರ್ಥಿಯೋರ್ವ ಸೈಕಲ್ ಜಾಥಾ ನಡೆಸುತ್ತಿದ್ದಾನೆ. ಇಂತಹ ಹೇಯ ಕೃತ್ಯಗಳ ಮೇಲೆ ಕಡಿವಾಣ ಹಾಕಬೇಕಾಗಿದೆ. ಇದಕ್ಕಾಗಿ ಕಳೆದ 2021ರ ಆಗಸ್ಟ್ 22ರಿಂದ ಸೈಕಲ್ ಜಾಥಾ ನಡೆಸುತ್ತಿದ್ದಾನೆ. ಈಗಾಗಲೇ 7 ಜಿಲ್ಲೆಗಳಿಗೆ ಭೇಟಿ ನೀಡಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾನೆ...
ಬೆಂಗಳೂರು- ಕಳೆದ 8 ದಿನಗಳ ಹಿಂದೆ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿ ಸಿಬ್ಬಂದಿ ಇಂದು ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ನಿಗೂಢವಾಗಿ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿಯ ಮೊದಲ ದರ್ಜೆ ಸಹಾಯಕ ಇಂದು ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಗಸ್ಟ್ 23 ರಂದು ಪ್ರಕಾಶ್ ಬಾಬು ನಾಪತ್ತೆಯಾಗಿದ್ರು. ಈ ಪ್ರಕರಣ...
ಉತ್ತರಪ್ರದೇಶ: ಉತ್ತರಪ್ರದೇಶದ ಫಿರೋಜಾಬಾದ್ ನಲ್ಲಿ ನಿಗೂಢ ರೋಗಕ್ಕೆ 30ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ ಒಟ್ಟು 40 ಮಂದಿ ಬಲಿಯಾಗಿದ್ದಾರೆ. ಇನ್ನು ಫಿರೋಜಾಬಾದ್ ಮೆಡಿಕಲ್ ಕಾಲೇಜಿನಲ್ಲಿ 137 ಮಂದಿ ಮಕ್ಕಳು ಈ ನಿಗೂಢ ರೋಗಕ್ಕೆ ತುತ್ತಾಗಿದ್ದು ಅವರ ಪೈಕಿ 72 ಮಕ್ಕಳ ತೀವ್ರ ಅಸ್ವಸ್ಥಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸ್ತಿದ್ದಾರೆ.
ಇನ್ನು ಮೇಲ್ನೋಟಕ್ಕೆ ಎಲ್ಲಾ ರೋಗಿಗಳಲ್ಲೂ...
ನವದೆಹಲಿ-ತಮಿಳುನಾಡಿಗೆ 30.6 ಟಿಎಂಸಿ ನೀರು ಬಿಡುವಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ದೆಹಲಿಯಲ್ಲಿ ಇಂದು ನಡೆದ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಬೇಕು ಅಂತ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ ಹಲ್ದರ್ ಸೂಚನೆ ನೀಡಿದ್ದಾರೆ.
ತಮಿಳುನಾಡಿಗೆ ಜೂನ್, ಜುಲೈ, ಅಗಸ್ಟ್ ತಿಂಗಳುಗಳಲ್ಲಿ ಬಿಡಬೇಕಿದ್ದ...
ಬೆಳಗಾವಿ: ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾಗ ಜನರ ಸಮಸ್ಯೆ ಕೇಳಲು ಬಾರದೆ ಇದೀಗ ಚುನಾವಣೆ ಪ್ರಚಾರಕ್ಕೆ ಜನರ ಬಳಿ ಓಡೋಡಿ ಹೋಗುತ್ತಿದ್ದಾರೆ ಅಂತ ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸತೀಶ್ ಜಾರಕಿಹೊಳಿ, ಜಿಲ್ಲೆಯಿಂದ 4 ಮಂದಿ ಸಚಿವರಿದ್ದಾರೆ. ಆದ್ರೆ ಇವರೆಲ್ಲರೂ ಕೋವಿಡ್...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಗ್ಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದ ನಂತರ ಇದೀಗ ರಾಜ್ಯ ಹೈಕೋರ್ಟ್ ತನ್ನ ಆವರಣದೊಳಗೆ ಕಕ್ಷಿದಾರರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಹೌದು, ಹೈಕೋರ್ಟ್ ಕಲಾಪ, ಪ್ರವೇಶ ಮತ್ತು ಅರ್ಜಿಗಳ ವಿಚಾರಣೆ ಸೇರಿದಂತೆ ರಾಜ್ಯ ಹೈಕೋರ್ಟ್ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ನೂತನ ಮಾರ್ಗಸೂಚಿ ಆಧಾರದ ಮೇಲೆ ಸೆ.01ರಿಂದ...
www.karnatakatv.net ಕರ್ನಾಟಕ : ದೇಶದಲ್ಲಿ ಕೊರೊನಾ ಅಲೆಗಳ ಅಟ್ಟಹಾಸ ಮುಂದುವರೆದಿದ್ದು ರಾಜ್ಯಕ್ಕೆ ಆಗಸ್ಟ್ ನಲ್ಲಿ3ನೇ ಅಲೆ ಅಪ್ಪಳಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿರುವುದಾಗಿ ತಜ್ಞರು ಎಚ್ಚರಿಸುತ್ತಿದ್ದಾರೆ. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಸೋಂಕಿನ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು ಕರ್ನಾಟಕಕ್ಕೂ ಇದೇ ಮಾರ್ಗವಾಗಿ ಬರುವ ಸೂಚನೆಗಳಿವೆ. ಈ ಮೊದಲು ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ವೈರಸ್ ಗಳು ಇದೇ...