ಕೇರಳದಲ್ಲಿ ನಿರಂತರ ಮಳೆಯಾಗುತ್ತಿದೆ. ನದಿಗಳಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. 3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ, ಕೇರಳದಾದ್ಯಂತ ಶೀತಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ವಯನಾಡು, ಕಾಸರಗೋಡು, ಕಣ್ಣೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ,...
ಕೇರಳಾ: ಮಳೆಗೆ ತತ್ತರಿಸುತ್ತಿರುವ ಕೇರಳಾದಲ್ಲಿ ಭೂಕುಸಿತ-ಪ್ರವಾಹವುಂಟಾಗಿ ಇದೂವರೆಗೆ ಸುಮಾರು 24 ಮಂದಿ ಜೀವ ಕಳೆದುಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕೇರಳಾದ 11 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ ಮಾಡಿದೆ. ಮೇಘಸ್ಫೋಟದಿಂದ ರಾಜ್ಯದಲ್ಲಿ ಈ ರೀತಿ ವಿಪರೀತ ಮಳೆಯಾಗಿದೆ ಅಂತ ತಿಳಿದುಬಂದಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗುವ ಕಡಿಮೆ ಒತ್ತಡದ ಕಾರಣ ಇಂದೂ ಸಹ ಮಳೆ ಮುಂದುವರಿಯಲಿದ್ದು...