ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ ಭೀಕರ ಪ್ರವಾಹ ಉಂಟಾಗಿದೆ. ಕಳೆದ 48 ಗಂಟೆಗಳಲ್ಲಿ 321ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮನೆಗಳು, ಶಾಲೆಗಳು, ಆಸ್ಪತ್ರೆಗಳು ಹಾಗೂ ರಸ್ತೆಗಳು ಜಲಾವೃತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಭಾರೀ ಮಳೆಯ ಪರಿಣಾಮವಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಸೇರಿದಂತೆ ಖೈಬರ್ ಪಖ್ತುಂಖ್ವಾ, ಬುನೇರ್, ಬಜೌರ್, ಸ್ವಾತ್, ಶಾಂಗ್ಲಾ, ಮನ್ಸೆಹ್ರಾ, ಬಟ್ಟಾಗ್ರಾಮ್,...