ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣಗೆ ವಿಧಿಸಿದ್ದ ಜಾಮೀನಿನ ಷರತ್ತು ಸಡಿಲಿಕೆ ಮಾಡಿರುವ ಕರ್ನಾಟಕ ಹೈಕೋರ್ಟ್, ಅವರಿಗೆ 15 ದಿನಗಳ ಕಾಲ ಹಾಸನ, ಮೈಸೂರಿಗೆ ಭೇಟಿ ನೀಡಲು ಅನುಮತಿ ನೀಡಿದೆ. ಷರತ್ತು ಸಡಿಲಗೊಳಿಸುವಂತೆ ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ...