ಜೆಡಿಎಸ್ ಪಕ್ಷದ ಕಾರ್ಯಕರ್ತರು ಹತ್ತು ವರ್ಷಗಳಿಂದ ಎಚ್.ಡಿ ಕೋಟೆ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವ ಕನಸು ಕಂಡಿದ್ದಾರೆ. ಅದನ್ನು ನನಸು ಮಾಡಲು ಮುಂದಿನ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡೋಣ ಎಂದು ಜೆಡಿಎಸ್ ಮುಖಂಡ ಕೆ.ಎಂ. ಕೃಷ್ಣ ನಾಯಕ ತಿಳಿಸಿದ್ದಾರೆ.
ಎಚ್.ಡಿ.ಕೋಟೆಯ ಜೆಡಿಎಸ್ ಕಚೇರಿಗೆ ಕೆ.ಎಂ.ಕೃಷ್ಣ ನಾಯಕರನ್ನು ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿಯಾಗಿ...