ಕೋಲಾರ: 2023ರ ಚುನಾವಣಾ ಹೊಸ್ತಿಲಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ ತಟ್ಟಿದೆ. ಕೋಲಾರ ಜಿಲ್ಲೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಪ್ರಭಾವಿ ಮುಖಂಡ, ಆನಂದ್ ರೆಡ್ಡಿ ಇಂದು ಕಾಂಗ್ರೆಸ್ ತೊರೆದು, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು .
ಮುಳಬಾಗಿಲಿನ ಶಿನಿಗಾನಹಳ್ಳಿ ಆನಂದ್ ರೆಡ್ಡಿ ತಮ್ಮ ನಿವಾಸದ ಬಳಿ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕಳೆದ...
ಕೋಲಾರ: 2023ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಮಾಲೂರಿನಲ್ಲಿ ಚುನಾವಣಾ ಕಣ ರಂಗೇರಿದೆ. ಮಾಲೂರು ಶಾಸಕ ಹಾಗೂ ಅಭ್ಯರ್ಥಿ ಕೆ.ವೈ ನಂಜೇಗೌಡ ಕಳೆದ 5 ವರ್ಷಗಳ ಕಾಲ ತನ್ನ ಜನಸೇವೆ ಮೂಲಕ ಮನೆ ಮಾತಾಗಿದ್ದು, ಶಾಸಕರಾಗಿ ಕ್ಷೇತ್ರದ ಅಭಿವೃದ್ದಿಯನ್ನು ಸಹ ಮಾಡಿ ಜನ ಮೆಚ್ಚುಗೆ ಪಡೆದುಕೊಂಡಿದ್ದಾರೆ.
ಇದೀಗ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷದಿಂದ...
ಕೋಲಾರ : ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡ ಮಾತನಾಡಿದ್ದು, ಎಲೆಕ್ಷನ್ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಅಲ್ಲದೇ ಬಿಜೆಪಿ ವಿರುದ್ಧವೂ ಹರಿಹಾಯ್ದಿದ್ದಾರೆ.
ಮಾಲೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡರು ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸಲಿದ್ದು, ಸೋಮವಾರ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇನೆ ಎಂದಿದ್ದಾರೆ. ಅಲ್ಲದೇ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ ....
ಕೋಲಾರ: ಕೋಲಾರದಲ್ಲಿ ಬಿಜೆಪಿ ಟಿಕೆಟ್ ವಾರ್ ಮುಂದುವರೆದಿದ್ದು, ಮೋಹನ್ ಕೃಷ್ಣ ಬೆಂಬಲಿಗರು ವೇಲು ನಾಯ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋಹನ್ ಕೃಷ್ಣ ಇಲ್ಲಿ 4 ವರ್ಷಗಳಿಂದ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಆದ್ರೆ ವೇಲು ನಾಯ್ಕರ್ ಈಗ ಇಲ್ಲಿ ಬಂದಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಅಲ್ಲದೇ, ಗೋ ಬ್ಯಾಕ್ ವೇಲು ನಾಯ್ಕರ್ ಅಭಿಯಾನವನ್ನೂ ಶುರು ಮಾಡಿದ್ದಾರೆ.
ಇದಕ್ಕೆ ಮುನಿರತ್ನ...
ಕೋಲಾರ : ಕೋಲಾರ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಮೋಹನ್ ಕೃಷ್ಣ ಬೆಂಬಲಿಗರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.
ಮೋಹನ್ ಕೃಷ್ಣ ಹಲವು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿದ್ದು, ಪಕ್ಷ ಸಂಘಟನೆ ಮಾಡಿದ್ದಾರೆ. ಆದರೆ ವೇಲು ನಾಯ್ಕರ್ ಇತ್ತೀಚೆಗೆ ಬಂದಿದ್ದು, ರಾಜ್ಯದ ಬಿಜೆಪಿ ಉಸ್ತುವಾರಿ ಸಚಿವ ಮುನಿರತ್ನ ಕೂಡ ವೇಲು ನಾಯ್ಕರ್‌ಗೆ ಬೆಂಬಲ ನೀಡಿ, ಪ್ರಚಾರಕ್ಕಾಗಿ ಕೋಲಾರಕ್ಕೆ ಬಂದಿದ್ದರು....
ಕೋಲಾರ: 'ಕುರುಕ್ಷೇತ್ರದಲ್ಲಿ ಪಾಂಡವರಿಗೆ 14 ವರ್ಷ ವನವಾಸ, ಒಂದು ವರ್ಷ ಅಜ್ಞಾತವಾಸ ಇರುತ್ತದೆ. 15 ವರ್ಷ ಕೊನೆಯಾದ ನಂತರ ಅವರಿಗೆ ಅಧಿಕಾರ ಸಿಗುತ್ತದೆ. ಹಾಗೇ ಬಹುಶಃ ಜೆಡಿಎಸ್ ಪಕ್ಷಕ್ಕೆ ಏನಾದ್ರೂ ಆ ಶಾಪ ತಟ್ಟಿದೆಯೆನೋ ಗೊತ್ತಿಲ್ಲ. ಮುಳಭಾಗಿಲು ನಲ್ಲಿ 15 ವರ್ಷಗಳಿಂದಲೂ ಅಧಿಕಾರ ಇಲ್ಲ. ಹಾಗಾಗಿ ಪಾಂಡವರು ವನವಾಸವನ್ನು ಅಂತ್ಯಗೊಳಿಸಿದಂತೆ ಮುಳಬಾಗಿಲು ಕ್ಷೇತ್ರದಲ್ಲೂ ಮೇ...
ಕೋಲಾರ : ಮಾಲೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಯಡಿಯೂರಪ್ಪ ಹೂಡಿ ವಿಜಯ್ ಕುಮಾರ್ ಹೆಸರನ್ನ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಕೋಲಾರದಲ್ಲಿಂದು ಹೂಡಿ ವಿಜಯ್ ಕುಮಾರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಅಭ್ಯರ್ಥಿ ಆಯ್ಕೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಯಾರಿಗೆ ಟಿಕೆಟ್ ಘೋಷಣೆ ಮಾಡಬೇಕು ಎಂಬುದು ಪಕ್ಷ ತೀರ್ಮಾನ ಮಾಡುತ್ತೆ. ಯಾರು...
ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಎಂಎಲ್‌ಸಿ ವೈ.ಎ.ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸೋದಿಲ್ಲ. ಅದರ ಬಗ್ಗೆ ಚರ್ಚೆ ವ್ಯರ್ಥ. ಅವರಿಗೆ ಈಗಾಗಲೇ ಪಕ್ಷದ ಹೈಕಮಾಂಡ್ ವರುಣಾದಲ್ಲಿ ನಿಲ್ಲುವಂತೆ ಟಿಕೇಟ್ ಘೋಷಣೆ ಮಾಡಿದ್ದಾರೆ. ಅವರು ಅವರ ಮನೆಯವರನ್ನ ಕೇಳಿ ಚುನಾವಣೆಯಲ್ಲಿ ನಿಲ್ಲುತ್ತೇನೆ ಎನ್ನುವುದು ದುರಂತ . ಸಮೀಕ್ಷೆ ಆಧರಿಸಿ...
ಕೋಲಾರ : ಕೋಲಾರದಲ್ಲಿ ಎರಡನೇಯ ಬಾರಿಗೆ ಕಾಂಗ್ರೆಸ್ ಪಕ್ಷದ ಸತ್ಯಮೇವ ಜಯತೆ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ. ಕೋಲಾರ ನಗರದ ಹೊರವಲಯದ ಡಿಸಿ ಕಛೇರಿ ಸಮೀಪದ ಮೈದಾನದಲ್ಲಿ, ಈ ಕಾರ್ಯಕ್ರಮ ಮಾಡಬೇಕೆಂದು ಏಪ್ರಿಲ್ 5ರಂದು ನಿಗದಿ ಪಡಿಸಲಾಗಿತ್ತು. ಕಾರಣಾಂತರಗಳಿಂದ ಏಪ್ರಿಲ್9ಕ್ಕೆ ಮುಂದೂಡಲಾಗಿತ್ತು.
ಇದೀಗ ಮತ್ತೆ ಸತ್ಯಮೇವ ಜಯತೆ ಕಾರ್ಯಕ್ರಮ ಏಪ್ರಿಲ್ 10ಕ್ಕೆ ಮುಂದೂಡಿಕೆಯಾಗಿದೆ ಎಂದು ಎಮ್ ಎಲ್...
ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ, ಅಭ್ಯರ್ಥಿಗಳ ಆಯ್ಕೆಗಾಗಿ ನನ್ನನ್ನು ಕೋಲಾರ ಜಿಲ್ಲೆಗೆ ಕಳುಹಿಸಿದ್ದಾರೆ. ಒಳ್ಳೆ ರೀತಿಯಲ್ಲಿ ತಾಲೂಕು ಮಟ್ಟದ ಸಭೆಗಳು ನಡೆಯುತ್ತಿವೆ. ಸದ್ಯ ಚುನಾವಣೆ ಘೋಷಣೆಯಾಗಿದ್ದು, ಒಳ್ಳೆಯ ವಾತಾವರಣ ಇದೆ. ಕೋಲಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ ನೀಡಿದ್ದಾರೆ.
ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಪೈಪೋಟಿ ಹೆಚ್ಚಿದೆ. ಈ ಬಾರಿ ಪ್ರಧಾನಿ ಮೋದಿ ನೇತೃತ್ವದಲ್ಲಿ...