ಕೋಲಾರ: ಭಾರತದ ಮಹತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ 3 ಯಶಸ್ವಿಗಾಗಿ ಇಡೀ ಭಾರತವೇ ಪ್ರಾರ್ಥಿಸುತ್ತಿದೆ. ಯಾವುದೇ ಅಡೆತಡೆಗಳಿಲ್ಲದೆ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವಂತೆ ನಗರದ ಕೋಲಾರಮ್ಮನ ದೇವಾಲಯಕ್ಕೆ ಭೇಟಿ ನೀಡಿ ಸಂಸದ ಮುನಿಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು.
ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಆಗಮಿಸಿ ಕೋಲಾರಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇಸ್ರೋ ಅಧ್ಯಕ್ಷರಿಗೆ...