ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದೇವಾಲಯದ ದರ್ಶನಕ್ಕಾಗಿ ಪಾದಯಾತ್ರೆಯಲ್ಲಿ ತೊಡಗಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದ ಪರಿಣಾಮ ಮೂರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ಮಂಗಳವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50 ರಲ್ಲಿ ನಡೆದಿದೆ. ಮೃತರನ್ನು 40 ವರ್ಷದ...