ಬೆಂಗಳೂರು: ಸರಕಾರ ಸಭೆಗಳಿಗೆ ಸೀಮಿತವಾದರೆ ಪ್ರಯೋಜನ ಶೂನ್ಯ. ಅಧಿಕಾರಿಗಳು ಹಳ್ಳಿಗಳತ್ತ ನಡೆಯಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ.
ವಿಪರೀತ ಮಳೆಯಿಂದಾಗಿ ರೈತರ ಬೆಳೆಗಳು ಹಾಳಾಗಿ ಬೆಳೆಗಾರರು ಸಂಕಷ್ಟಕ್ಕೊಳಗಾಗಿರುವ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ರೈತರ ನೋವಿನ ಬಗ್ಗೆ ಬರೆದುಕೊಂಡಿರುವ ಕುಮಾರಸ್ವಾಮಿ, ಕೋವಿಡ್ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ...