ಬೆಂಗಳೂರು: ಕುವೆಂಪು ವಿರಚಿತ ನಾಡಗೀತೆಯನ್ನು ತಿರುಚಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರ ಬೇಡಿಕೆ ಕುರಿತು ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ 'ನಿರ್ಮಲಾನಂದನಾಥ ಶ್ರೀಗಳು ಕುವೆಂಪು ಅವರಿಗೆ ಸಂಬಂಧಿಸಿದಂತೆ ಗಂಭೀರವಾದ ವಿಚಾರವನ್ನು ಮುಂದಿಟ್ಟಿದ್ದಾರೆ. ಆ ಕುರಿತು ಶಿಕ್ಷಣ ಸಚಿವರ...