ಮಂಡ್ಯ ಜಿಲ್ಲೆಗೆ ಮತ್ತೊಂದು ಹೆಮ್ಮೆ ತಂದುಕೊಡುವ ಸಾಧನೆ ದಾಖಲಾಗಿದೆ. ಜಲ ಶಕ್ತಿ ಅಭಿಯಾನದ ಅಂಗವಾಗಿ ಜನ ಸಂಚಯ – ಜನ ಭಾಗಿದಾರಿ ಅಭಿಯಾನದಡಿ ಜಲ ಸಂರಕ್ಷಣೆ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ಜಲಮೂಲಗಳ ಸಂರಕ್ಷಣೆ, ಅಂತರ್ಜಲ ವೃದ್ಧಿ, ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರಿನ ಲಭ್ಯತೆ ಹಾಗೂ ನೀರಿನ ಸಮಸ್ಯೆ ಪರಿಹಾರಕ್ಕಾಗಿ...
ಪಾಂಡವಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಇತ್ತೀಚಿನ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ 12 ಅಭ್ಯರ್ಥಿಗಳಲ್ಲಿ 9 ಮಂದಿ ಗೆಲುವು ಸಾಧಿಸಿದ್ದಾರೆ. ರೈತ ಸಂಘ – ಕಾಂಗ್ರೆಸ್ ಮೈತ್ರಿ ಬೆಂಬಲಿತ 12 ಅಭ್ಯರ್ಥಿಗಳಲ್ಲಿ ಕೇವಲ 3 ಮಂದಿ ಮಾತ್ರ ಆಯ್ಕೆಯಾಗಿದ್ದು, 7 ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸೋಲನ್ನು ಅನುಭವಿಸಿದ್ದಾರೆ.
ಸಾಮಾನ್ಯ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ...
ಕಳೆದ 7 ದಿನಗಳಿಂದ ಈ ಸ್ವಾಮಿಯ ಮಾತಿಲ್ಲ... ಊಟವಿಲ್ಲ..! ಎಲ್ಲದಕ್ಕೂ ಕಾರಣ 'ಲೋಕ ಶಾಂತಿ'ಯ ಸಂಕಲ್ಪ! ಸಕ್ಕರೆನಾಡು ಮಂಡ್ಯದಲ್ಲಿ ಒಂದು ಅದ್ಭುತ ದೃಶ್ಯ ನಡೆಯುತ್ತಿದೆ. ಪ್ರತಿ ನಿತ್ಯ ಒಂದಿಲ್ಲೊಂದು ಕಾರಣದಿಂದ ಈ ಲೋಕದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಆಗುತ್ತಿದೆ. ಈ ಅನಾಹುತ ತಡೆಯುವ ನಿಟ್ಟಿನಲ್ಲಿ ಲೋಕ ಕಲ್ಯಾಣಾರ್ಥವಾಗಿ ಇಲ್ಲೊಬ್ಬರು ಸ್ವಾಮೀಜಿ ತಮ್ಮ ಮಾತನ್ನೇ ನಿಲ್ಲಿಸಿದ್ದಾರೆ.
ಹೌದು...
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ, ಪೂರ್ವ ನಿಯೋಜಿತ ಎಂಬುದು ತನಿಖೆಯಲ್ಲಿ ಸಾಬೀತಾಗಿದೆ. ಘಟನೆ ಸಂಬಂಧ ಆರಂಭದಲ್ಲಿ 22 ಮಂದಿಯನ್ನು ಗುರುತಿಸಲಾಗಿತ್ತು. ಬಳಿಕ 29 ಮಂದಿಯನ್ನು ವಶಕ್ಕೆ ಪಡೆದಿದ್ರು. ಇದೀಗ ಆರೋಪಿಗಳ ಸಂಖ್ಯೆ 32ಕ್ಕೆ ಏರಿದ್ದು, ಪೊಲೀಸರಿಂದ ತನಿಖೆ ಮುಂದಿವರಿದಿದೆ.
ತನಿಖೆ ವೇಳೆ ಆರೋಪಿಗಳು ಸ್ಫೋಟಕ ವಿಷಯ ಬಾಯಿ ಬಿಟ್ಟಿದ್ದಾರೆ. ಸ್ವಾಮಿ ಎಂಬುವರ...
ಗಂಗಾರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ, ಕರ್ನಾಟಕದ ಶ್ರೀರಂಗಪಟ್ಟಣದಲ್ಲಿ ಕಾವೇರಿ ಆರತಿ ವಿಜೃಂಬಣೆಯಿಂದ ನೆರವೇರಿದೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಮುನ್ನುಡಿ ಬರೆದಿದ್ದಾರೆ.
ಕೆಆರ್‌ಎಸ್ ಅಣೆಕಟ್ಟೆ ಬಳಿ ದೋಣಿ ವಿಹಾರ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಕಾವೇರಿ ಮೂರ್ತಿಗೆ, ಡಿಕೆಶಿ ಆರತಿ ಬೆಳಗೆ ಚಾಲನೆ ನೀಡಿದ್ರು. ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚು...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಬೋಟಿಂಗ್ ಪಾಯಿಂಟ್ನಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ ಕಾವೇರಿ ಆರತಿಗೆ ಸೆಪ್ಟೆಂಬರ್ 26ರಂದು ಚಾಲನೆ ಸಿಗಲಿದೆ.
ವಾರಾಣಸಿಯ ಗಂಗಾ ಆರತಿಯ ಮಾದರಿಯಲ್ಲಿ 5 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮ ಸಂಜೆ 6 ಗಂಟೆಗೆ ಪ್ರಾರಂಭವಾಗಲಿದೆ. ಡಿಕೆಶಿ, ಕಾವೇರಿ ನದಿಗೆ...
ಮಂಡ್ಯದ ಕೆಆರ್‌ಎಸ್‌ನಲ್ಲಿ ಸೆಪ್ಟೆಂಬರ್ 26ರಿಂದ, 5 ದಿನಗಳ ಕಾಲ ಕಾವೇರಿ ಆರತಿ ನಡೆಯಲಿದೆ. ಈ ಹಿನ್ನೆಲೆ ಕೆಆರ್‌ಎಸ್‌ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದು, ವೇದಿಕೆ, ಕಾವೇರಿ ಆರತಿ ನಡೆಯುವ ಸ್ಥಳ ಮತ್ತು ವೀಕ್ಷಕರಿಗೆ ಆಸನ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದ್ರು.
ಯಾವುದೇ ಲೋಪವಿಲ್ಲದೆ ಕಾವೇರಿ ಆರತಿ ಕಾರ್ಯಕ್ರಮ ನಡೆಸಲು ಸೂಚನೆ ನೀಡಿದ್ದಾರೆ. ಈ ವೇಳೆ...
ಕೆ ಆರ್ ಪೇಟೆ ತಾಲೂಕಿನ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳ ಮೂಲಕ ಆಯ್ಕೆಯಾಗಬೇಕಾಗಿರುವ ಎ.ತರಗತಿಯ 6ಸ್ಥಾನಗಳಿಗೆ ಒಟ್ಟು 41 ನಾಮಪತ್ರಗಳು ಸಲ್ಲಿಕೆಯಾಗಿವೆ ಎ.ತರಗತಿಯ 6ಸ್ಥಾನಗಳಿಗೆ 13 ನಾಮಪತ್ರಗಳು, ಬಿ.ತರಗತಿಯ 8ಸ್ಥಾನಗಳಿಗೆ 27 ನಾಮಪತ್ರಗಳು ಸಲ್ಲಿಕೆಯಾಗಿವೆ. 14 ಮಂದಿ ನಿರ್ದೇಶಕರ ಆಯ್ಕೆಗೆ ಇದೇ 28ರಂದು ಚುನಾವಣೆ ನಡೆಯಲಿದೆ ಎಂದು ಟಿಎಪಿಸಿಎಂಎಸ್ ಚುನಾವಣಾಧಿಕಾರಿ ತಹಶೀಲ್ದಾರ್...
ಡೆಂಗಿ ಸಾಂಕ್ರಾಮಿಕ ರೋಗವಾಗಿದ್ದು, ನಿಯಂತ್ರಣ ಕ್ರಮಗಳಲ್ಲಿ ಸಹಕರಿಸದವರ ವಿರುದ್ಧ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಡ್ಯ ಜಿಲ್ಲಾಧಿಕಾರಿ ಕುಮಾರ ಎಚ್ಚರಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ...
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣ, ಹಿಂದೂ ಸಂಘಟನೆಗಳ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. ಇಂದು ನಡೆದ ಶೋಭಾಯಾತ್ರೆಯಲ್ಲಿ ನಿರೀಕ್ಷೆಗೂ ಮೀರಿದ ಸಾವಿರಾರು ಜನ ಜಮಾಯಿಸಿದ್ರು. ಜಿಲ್ಲೆಯ ಮೂಲೆ ಮೂಲೆಗಳಿಂದಷ್ಟೇ ಅಲ್ಲ.. ಅಕ್ಕಪಕ್ಕದ ಜಿಲ್ಲೆಗಳಿಂದ ಸಾವಿರಾರು ಜನರು ಬಂದಿದ್ರು. ಬಿಜೆಪಿ ಕಾರ್ಯಕರ್ತರೂ ಕೂಡ ಸಾಗರೋಪಾದಿಯಲ್ಲಿ ಬಂದಿದ್ರು. ಇಡೀ ಮದ್ದೂರು ಪಟ್ಟಣ ಸಂಪೂರ್ಣ ಕೇಸರಿಮಯವಾಗಿತ್ತು. ಹಿಂದೂ ಕಾರ್ಯಕರ್ತರೆಲ್ಲಾ ಕೈಯ್ಯಲ್ಲಿ...