ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲು ತೂರಾಟ ಪ್ರಕರಣ ಇದೀಗ ರಾಜ್ಯವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ. ಮೆರವಣಿಗೆಯ ಮಾರ್ಗದ ಸಮೀಪದಲ್ಲಿದ್ದ ಮಸೀದಿಯಿಂದ ಕಲ್ಲು ತೂರಾಟ ನಡೆದಿದೆ ಎಂಬ ಆರೋಪ ಹೊರಬಿದ್ದ ಹಿನ್ನೆಲೆಯಲ್ಲಿ, ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ.
ಇದೀಗ, ಮದ್ದೂರಿನ ಚನ್ನೆಗೌಡ ಬಡಾವಣೆ ಬಳಿ ಇರುವ ಆ ಮಸೀದಿಯೇ ಅಕ್ರಮ ನಿರ್ಮಾಣ ಎಂಬ...
ಕಲ್ಲು ತೂರಾಟದಿಂದ, ಮದ್ದೂರು ಪಟ್ಟಣ ರಣಾಂಗಣವಾಗಿ ಬದಲಾಗಿತ್ತು. ಆರೋಪಿಗಳ ವಿಚಾರಣೆಯಲ್ಲಿ ಮದ್ದೂರು ಗಲಾಟೆ ಪ್ರೀ ಪ್ಲ್ಯಾನ್ ಅನ್ನೋ ಮಾಹಿತಿ ಗೊತ್ತಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರೇ ಈ ಬಗ್ಗೆ ಮಾತನಾಡಿದ್ದಾರೆ. ಲೈಟ್ ಆಫ್ ಮಾಡಿದ ಬಗ್ಗೆ ಮಾಹಿತಿ ಪಡೆದಿದ್ದೇವೆ. ಕಲ್ಲು ತೂರಾಟ ನಡೆಸಿರೋದು ರಾಜಕೀಯ ಪ್ರೇರಿತನಾ? ಅಥವಾ ಇದರ ಹಿಂದೆ ಯಾರಿದ್ದಾರೆ?...
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪ್ರತಿಭಟನಾಕಾರರ ಮೇಲೆ, ಲಾಠಿಚಾರ್ಜ್ ಮಾಡಲಾಗಿದೆ. ಸೆಪ್ಟೆಂಬರ್ 7ರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ಮಾಡಲಾಗಿತ್ತು. ಇದ್ರಿಂದ ರೊಚ್ಚಿಗೆದ್ದ ಜನರು, ಪೇಟೆ ಬೀದಿ ಮಾರ್ಗವಾಗಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ರು.
ಸೋಮವಾರ ಬೆಳಗ್ಗೆಯೇ ನೂರಾರು ಸಂಖ್ಯೆಯಲ್ಲಿ ಜನರು ಜಮಾವಣೆಗೊಂಡಿದ್ರು. ಹಿಂದೂ ಸಂಘಟನೆಗಳ...
ಮದುವೆ ನಿಶ್ಚಯವಾದ ಹುಡುಗ ಓದಿಲ್ಲವೆಂದು ತಿಳಿದ ನಂತರ ಮದುವೆ ರದ್ದಾಗಿದೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ನಡೆದಿದೆ.
ಸುಮಾರು 15 ದಿನಗಳ ಹಿಂದೆ ಹಾಸನ ಜಿಲ್ಲೆಯ ಯುವಕನ ಜೊತೆ, ಮದುವೆ ನಿಶ್ಚಯಗೊಂಡಿತ್ತು. ಮದುವೆಗೂ ಮುನ್ನ ತಾನು ಡಿಗ್ರಿ ಮಾಡಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವುದಾಗಿ ಹುಡುಗಿ...
ನಿಖಿಲ್ ಕುಮಾರಸ್ವಾಮಿ ಅವರು, ತಮ್ಮ ತಂದೆ ಮತ್ತು ಜೆಡಿಎಸ್ ಪಕ್ಷದ ಹಿರಿಯ ನಾಯಕ ಎಚ್ಡಿ ಕುಮಾರಸ್ವಾಮಿ ಅವರ ಆರೋಗ್ಯದ ಕುರಿತು ಮಾತನಾಡಿದ್ದಾರೆ. ಈ ಹಿಂದೆ ಬಂದಿದ್ದ ಹೇಳಿಕೆಗಳನ್ನು ಖಂಡಿಸಿ, ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಮಾತನಾಡಿ, ಕುಮಾರಣ್ಣ ಅವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಿತ್ತು. ಆದರೆ, ಅವರನ್ನು ನೋಡಿ...
ಜ್ಯುವೆಲರ್ಸ್ ಅಂಗಡಿಯಲ್ಲಿ ಕಳ್ಳತನ ಮಾಡಲು ಆಗಮಿಸಿದ್ದ ದರೋಡೆಕೋರರು ಚಿನ್ನಾಭರಣ ದೋಚಿ ಬಳಿಕ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಧಾರುಣ ಘಟನೆ ನಡೆದಿದೆ. ಸಕ್ಕರೆನಾಡು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ 72 ವರ್ಷದ ಮಾದಪ್ಪ ಮೃತಪಟ್ಟಿರುವ ವ್ಯಕ್ತಿಯಾಗಿದ್ದಾನೆ.
ಕಿರುಗಾವಲು ಗ್ರಾಮದ ಮಹಾಲಕ್ಷ್ಮಿ ಜ್ಯೂವೆಲರ್ಸ್ ಆಂಡ್ ಬ್ಯಾಂಕರ್ಸ್ ನಲ್ಲಿ ಶನಿವಾರ ತಡರಾತ್ರಿ ದರೋಡೆ ನಡೆಸಲು ಸಂಚು ರೂಪಿಸಿದ್ದಾರೆ....
ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿ, ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಪರಾರಿಯಾಗಿರುವ ವಿಲಕ್ಷಣ ಘಟನೆ ನಡೆದಿದೆ.
ಬುಧವಾರ ರಾತ್ರಿ ದುಷ್ಕರ್ಮಿಗಳು ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿದ್ದಾರೆ. ಈ ವೇಳೆ ಮಂಗಳಾರತಿ ತಟ್ಟೆಯಲ್ಲಿದ್ದ ಚಿಲ್ಲರೆ ಕಾಸನ್ನು ಕಳ್ಳತನ ಮಾಡಿದ್ದಾರೆ. ಬಳಿಕ ದೇವಸ್ಥಾನದ ಗೋಡೆಯ ಮೇಲೆ...
ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವುದು ಖುಷಿಯ ವಿಚಾರವಾದರೆ. ಭರ್ತಿಯಾಗಿ ಒಂದೂವರೆ ತಿಂಗಳು ಕಳೆದರೂ ಮಳವಳ್ಳಿ ಮತ್ತು ಮದ್ದೂರು ತಾಲ್ಲೂಕಿನ ಕೊನೇ ಭಾಗದ ರೈತರಿಗೆ ನೀರು ತಲುಪಿಲ್ಲ. ಕೆರೆ ಕಟ್ಟೆಗಳನ್ನು ತುಂಬಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ತಮಿಳುನಾಡಿಗೆ ಹೆಚ್ಚುವರಿಯಾಗಿ ನೀರು ಹರಿದು ಹೋಗುತ್ತಿದ್ದರೂ, ಇದನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತೀವ್ರ...
ನಾಗಮಂಗಲ ತಾಲ್ಲೂಕಿನ ಲಾಳನಕೆರೆ ಗ್ರಾಮ ಪಂಚಾಯಿತಿಯಲ್ಲಿ, ಬಹುಮತವಿದ್ದರೂ ಸದಸ್ಯರು ನಿಗದಿತ ಸಮಯಕ್ಕೆ ನಾಮಪತ್ರ ಸಲ್ಲಿಸದ ಕಾರಣ, ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದಾರೆ. ಮಂಜೇಶ್ ಚನ್ನಾಪುರ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕಳೆದ ಜುಲೈ 10ರಂದು ಚುನಾವಣೆ ನಿಗದಿಯಾಗಿತ್ತು. ಪಂಚಾಯಿತಿಯಲ್ಲಿ 13 ಸದಸ್ಯರ ಪೈಕಿ, 11 ಕಾಂಗ್ರೆಸ್ ಬೆಂಬಲಿತ ಮತ್ತು ಇಬ್ಬರು ಜೆಡಿಎಸ್...