ಮೈಸೂರು: ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ 'ಗೃಹ ಲಕ್ಷ್ಮಿ' ಯೋಜನೆಯ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಗುರುವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಿಂದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.
ಮಹಿಳಾ ಮತ್ತು...
ಮೈಸೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ 'ಗೃಹ ಲಕ್ಷ್ಮಿ' ಯೋಜನೆಗೆ ದಿನಗಣನೆ ಆರಂಭಗೊಂಡಿದ್ದು, ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಭರದದಿಂದ ಸಿದ್ದತಾ ಕಾರ್ಯಗಳು ಸಾಗಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ನಿಭಾಯಿಸುತ್ತಿದ್ದು, ಇಂದು ಕಾರ್ಯಕ್ರಮದ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಉಪ ಮುಖ್ಯಮಂತ್ರಿ...
ಬೆಂಗಳೂರು: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ನಡೆದ 'ನಮ್ಮೂರ ನಾಗಪಂಚಮಿ-2022' ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಚಾಮುಂಡೇಶ್ವರಿ...
ಮೈಸೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳು ಶಾಲೆಗೆ ಹೋಗಿ ಅಕ್ಷರಾಭ್ಯಾಸ ಮಾಡುವುದಕ್ಕಿಂತ ಅವ್ಯವಹಾರ ಮತ್ತು ಕೆಟ್ಟ ಚಟಗಳಿಗೆ ದಾಸರಾಗುವುದನ್ನು ಕಲಿಯುತ್ತಿದ್ದಾರೆ. ಈ ರೀತಿ ಚಟಗಳು ಅವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿರುವುದು ನಗರಗಳಲ್ಲಿರುವ ಖಾಸಗಿ ಕಾಲೇಜುಗಳಲ್ಲಿ. ಆದರೆ ಇವೆಲ್ಲವನ್ನು ಮಟ್ಟ ಹಾಕಲೆಂದೇ ಪೋಲಿಸರು ಹಲವಾರು ರೀತಿಯಲ್ಲಿ ಕ್ರಮವನ್ನು ಕೈಗೊಳ್ಳುತ್ತಿದ್ದಾರೆ. ಇದೇ ರೀತಿ ಶೋಧ ನಡೆಸುವ ವೇಳೆ ಮೈಸೂರು ರಸ್ತೆಯ...