ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂತಿಮ ಆಕರ್ಷಣೆಯಾದ ಜಂಬೂಸವಾರಿಯು ವಿಜಯದಶಮಿ ದಿನವಾದ ಅಕ್ಟೋಬರ್ 2ರಂದು ಭವ್ಯವಾಗಿ ಜರುಗಲಿದೆ. ಹನ್ನೊಂದು ದಿನಗಳ ನಾಡಹಬ್ಬಕ್ಕೆ ಇದರೊಂದಿಗೆ ತೆರೆ ಬೀಳಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮಾರ್ಗವನ್ನು ಅಂದಗೊಳಿಸುವ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದು, ಭದ್ರತಾ ಸಿದ್ಧತೆಗಳನ್ನೂ ಪೊಲೀಸ್ ಇಲಾಖೆ ಕಟ್ಟುಕಥೆಯಂತೆ ಕೈಗೊಂಡಿದೆ.
ಮಧ್ಯಾಹ್ನ 1.00ರಿಂದ 1.18ರೊಳಗಿನ ಶುಭ ಲಗ್ನದಲ್ಲಿ ಸಿಎಂ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಳೆದ ವರ್ಷದಿಂದ ಅಕ್ರಮ ಸೈಟ್ ಹಂಚಿಕೆ ಪ್ರಕರಣದ ಆರೋಪಗಳಿಂದ ಸುದ್ದಿಯಲ್ಲೇ ಸಿಲುಕಿಕೊಂಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆಯನ್ನು ತೀವ್ರಗೊಳಿಸಿದ್ದು, ಮುಡಾದ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಸೆಪ್ಟೆಂಬರ್ 16 ರಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾದ ದಿನೇಶ್ ಅವರನ್ನು...
ಮೈಸೂರಲ್ಲಿ ಸ್ಟಿಂಗ್ ಆಪರೇಷನ್ ಮಾಡಿರುವುದಾಗಿ ಬೆದರಿಸಿ ಹಣ ವಸೂಲಿಗೆ ಸರ್ಕಾರಿ ವೈದ್ಯಾಧಿಕಾರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಪ್ರಕರಣ ತಿಲಕ್ ನಗರದಲ್ಲಿ ನಡೆದಿದ್ದು, ಈ ಸಂಬಂಧ RTI ನ್ಯೂಸ್ ಪೇಪರ್ ಮುಖ್ಯಸ್ಥ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ತಿಲಕ್ ನಗರದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಕಚೇರಿಯ ಅಕೌಂಟ್ಸ್ ಆಫೀಸರ್‌ಗೆ ಸ್ಟಿಂಗ್ ಆಪರೇಷನ್...
ದೇಶದಲ್ಲಿ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ಇದ್ದು ಮಾಡುವ ಕಾರ್ಯಕ್ಕೆ ಚುನಾವಣಾ ಆಯೋಗ ಈಗಾಗಲೇ ಮುಂದಾಗಿದೆ. ಈ ನಿಟ್ಟಿನಲ್ಲಿ ಆಯೋಗ ಡಾ. ಅಂಬೇಡ್ಕರ್ ಸಮಾಜವಾದಿ ಡೆಮಾಕ್ರಟಿಕ್ ಪಾರ್ಟಿಗೆ ನೋಟಿಸ್ ಜಾರಿಗೊಳಿಸಿದೆ.
ಆಯೋಗದಿಂದ ನೋಂದಾಯಿತ, ಮಾನ್ಯತೆ ಪಡೆಯದ ರಾಜಕೀಯ ಪಕ್ಷವು ಕಳೆದ 6 ವರ್ಷಗಳಿಂದ ಯಾವುದೇ ಲೋಕಸಭಾ ಚುನಾವಣೆ ಅಥವಾ ವಿಧಾನಸಭಾ ಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರುವ ಹಾಗೂ...
ಶತಮಾನಗಳಷ್ಟು ಹಳೆಯ ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಬೋಧಕ ಮತ್ತು ಬೋಧಕೇತ್ತರ ಸಿಬ್ಬಂದಿ ತಮ್ಮ ಪಿಂಚಣಿ ಪಡೆಯಲು ಹೆಣಗಾಡುತ್ತಿದ್ದಾರೆ. ಈ 1,900 ಪಿಂಚಣಿದಾರರು, ವಿಶ್ವವಿದ್ಯಾಲಯ ಸಂಪರ್ಕಿಸುವುದರ ಜೊತೆಗೆ, ಸರ್ಕಾರಕ್ಕರ ಮಧ್ಯಪ್ರವೇಶಿಸುವಂತೆ ಪತ್ರ ಬರೆದಿದ್ದಾರೆ.
ಇದುವರೆಗೂ ಪಿಂಚಣಿಗಳನ್ನು ನಿಯಮಿತವಾಗಿ ಪಾವತಿಸಲಾಗಿತ್ತು. ಏಪ್ರಿಲ್‌ನಲ್ಲಿ ಒಂದು ವಾರ ವಿಳಂಬವಾಗಿತ್ತು. ಆದರೆ ಆಗಸ್ಟ್ 15ರವರೆಗೆ ಹಣ ಪಾವತಿಸಿಲ್ಲ. ರಾಜ್ಯಾದ್ಯಂತದ ವಿಶ್ವವಿದ್ಯಾಲಯಗಳು ಪಿಂಚಣಿ ಪಾವತಿಸಲು...
ಮೈಸೂರಿನ ಚಾಮರಾಜೇಂದ್ರ ಮೃಗಾಲಯದ 71 ವರ್ಷ 2 ತಿಂಗಳು ವಯಸ್ಸಾಗಿದ್ದ, ಹೆಣ್ಣಾನೆ ಪದ್ಮಾವತಿ ಗುರುವಾರ ಮೃತಪಟ್ಟಿದೆ. ಈ ಆನೆಯು ಕಳೆದ ಐದು ದಶಕಗಳಿಗೂ ಹೆಚ್ಚು ಕಾಲದಿಂದ ಮೃಗಾಲಯದ ಅವಿಭಾಜ್ಯ ಅಂಗವಾಗಿತ್ತು. ಪ್ರವಾಸಿಗರ ಪ್ರೀತಿಗೆ ಪಾತ್ರವಾಗಿತ್ತು.
ಅಂದಾಜು 1953-54ರಲ್ಲಿ ಜನಿಸದ್ದ ಪದ್ಮಾವತಿಯನ್ನು, 1973ರಲ್ಲಿ ಖೆಡ್ಡಾ ಕಾರ್ಯಾಚರಣೆಯ ಸಮಯದಲ್ಲಿ ರಕ್ಷಿಸಲಾಗಿತ್ತು. ಈ ಆನೆ ಮೈಸೂರು ಮೃಗಾಲಯದ ಇತಿಹಾಸದಲ್ಲಿಯೇ ಅತ್ಯಂತ...
ಉಂಡ ಮನೆಗೆ ಕನ್ನ ಹಾಕಿದ ಎಂಬ ಗಾದೆ ಮಾತಿನಂತೆ ಮೈಸೂರಿನಲ್ಲಿ ಒಂದು ಘಟನೆ ನಡೆದಿದೆ. ತಾನು ಕೆಲಸ ಮಾಡುತ್ತಿದ್ದ ಮಾಲೀಕರ ಗೋದಾಮಿಗೆ ನುಗ್ಗಿ ದರೋಡೆ ಮಾಡಿದ್ದಾರೆ. ಕಾರು ಚಾಲಕ ಹಾಗೂ ಆತನಿಗೆ ಸಹಾಯ ಮಾಡಿದ ಐವರನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ.
ಗುಜರಾತ್‌ನ ಪರೇಶ್ ಕುಮಾರ್ ಮಾಳಿ, ಕಿಶೋರ್, ದಿಲೀಪ್ ಕುಮಾರ್, ಅರವಿಂದ್ ರಜಪೂತ್, ಹರೇಶ್ ಪುರೋಹಿತ್...
ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು ಸಂಸ್ಕರಣೆಗೆ ಒಂದಿಂಚೂ ಜಾಗವಿಲ್ಲ.
ಪ್ರತಿ ಕೈಗಾರಿಕಾ ಪ್ರದೇಶದಲ್ಲಿಯೂ ಒಂದು ತ್ಯಾಜ್ಯ ವಸ್ತು ಸಂಸ್ಕರಣಾ ಘಟಕಕ್ಕೆ ಸ್ಥಳ ನೊಗದಿ ಮಾಡಬೇಕೆಂಬ ನಿಯಮವಿದ್ದರೂ ಅನುಷ್ಠಾನಗೊಳ್ಳದ ಪರಿಣಾಮ ಮೈಸೂರಿನಲ್ಲಿ ಕೈಗಾರಿಕಾ ತ್ಯಾಜ್ಯ ವಿಲೇವಾರಿ...
ಮೈಸೂರಲ್ಲಿ ಡ್ರಗ್ಸ್ ದಂಧೆ ಪ್ರಕರಣ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಈಗಾಗಲೇ ಬಹಳಷ್ಟು ಪೆಡ್ಲರ್ಸ್‌ಗಳನ್ನು ಬಂಧನ ಕೂಡ ಮಾಡಲಾಗಿದೆ. ಇನ್ನು ನಗರದಲ್ಲಿ ಮಾದಕವಸ್ತು ತಯಾರಿಕೆ ಘಟಕ ಪತ್ತೆಯಾದ ಬಳಿಕ ಮಾದಕ ವ್ಯಸನಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಗಾಂಜಾ ಸೇವಿಸಿದ್ದವರ ವಿರುದ್ಧ 23 ಪ್ರಕರಣವನ್ನು ದಾಖಲಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಪೊಲೀಸರ ತಂಡವು...
ಜವಾಬ್ದಾರಿಯಿಂದ ಕೆಲಸ ಮಾಡದವರು ಹಾಗೂ ಸರ್ಕಾರ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ವರುಣ ಕ್ಷೇತ್ರದ ಮಾಕನಹುಂಡಿ, ಕೂಡನಹಳ್ಳಿ, ಕೋಚನಹಳ್ಳಿ, ಬಸಳ್ಳಿಹುಂಡಿ, ಸೋಮೇಶ್ವರಪುರ, ಕುಂಬ್ರಳ್ಳಿಮಠ ಗ್ರಾಮಗಳಿಗೆ ಬುಧವಾರ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಮಾಕನಹುಂಡಿ ಗ್ರಾಮದಲ್ಲಿ ರಸ್ತೆಯ...