Tuesday, November 11, 2025

Mysuru

ಮೈಸೂರಿನ ಅಧಿಕಾರಿಗಳಿಗೆ ಸಿಎಂ ಕಠಿಣ ಎಚ್ಚರಿಕೆ ಕೊಟ್ಟಿದ್ಯಾಕೆ ?

ಜನರನ್ನು ಕಚೇರಿಗಳಲ್ಲಿ ಅಲೆದಾಡಿಸುವುದನ್ನು ನಾನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾ ಕೇಂದ್ರದಲ್ಲೇ ಕುಳಿತುಕೊಳ್ಳದೆ ತಾಲ್ಲೂಕು ಮಟ್ಟದಲ್ಲಿ ಜನರ ಅಹವಾಲು ಕೇಳಿ ತಕ್ಷಣ ಪರಿಹರಿಸಿ. ಸೂಚನೆ ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ...

ಮೈಸೂರಿಗೆ ರಾಷ್ಟ್ರ ಪ್ರಶಸ್ತಿಯ ಗರಿ : ‘ಧ್ವನಿ ಸ್ಪಂದನ’ಗೆ ಕೇಂದ್ರದ ಗೌರವ!

ಮೈಸೂರಿನ ಗೌರವಕ್ಕೆ ಮತ್ತೊಂದು ಸಾಧನೆ ಸೇರ್ಪಡೆಯಾಗಿದೆ. ಕೆಎಸ್‌ಆರ್‌ಟಿಸಿ ಮೈಸೂರು ನಗರ ಸಾರಿಗೆ ವಿಭಾಗಕ್ಕೆ ಕೇಂದ್ರ ಸರ್ಕಾರದಿಂದ 2025ರ “ಅವಾರ್ಡ್ ಆಫ್ ಎಕ್ಸಲೆನ್ಸ್ ಇನ್ ಅರ್ಬನ್ ಟ್ರಾನ್ಸ್‌ಪೋರ್ಟ್” ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ನಗರ ಸಾರಿಗೆಯಲ್ಲಿ ಕೈಗೊಂಡ ಅತ್ಯುತ್ತಮ ಯೋಜನೆಗಳ ವರ್ಗದಲ್ಲಿ ದೊರೆತಿದ್ದು, ಮೈಸೂರು ವಿಭಾಗದ ‘ಧ್ವನಿ ಸ್ಪಂದನ’ ಯೋಜನೆ ಅದಕ್ಕೆ ಕಾರಣವಾಗಿದೆ. ಈ ಯೋಜನೆ...

ನಾಗರಹೊಳೆ-ಬಂಡೀಪುರ ಸಫಾರಿ ಬಂದ್‌ : ಆದೇಶ ಹೊರಡಿಸಿದ ಈಶ್ವರ ಖಂಡ್ರೆ

ನಾಗರಹೊಳೆ ಮತ್ತು ಬಂಡೀಪುರ ಅರಣ್ಯ ಪ್ರದೇಶಗಳಲ್ಲಿ ಮತ್ತೆ ಹುಲಿ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಗಂಭೀರ ನಿರ್ಧಾರ ಕೈಗೊಂಡಿದೆ. ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಹಾಗೂ ಚಾರಣವನ್ನು ಇಂದಿನಿಂದಲೇ ಬಂದ್‌ ಮಾಡಲು ಆದೇಶಿಸಿದ್ದಾರೆ. ಇತ್ತೀಚೆಗಷ್ಟೇ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಳೆ...

ರಾಜ್ಯದಲ್ಲಿ ಮೊದಲ ಬಾರಿಗೆ ಟ್ರಾನ್ಸ್‌ಜೆಂಡರ್ ಸಮೀಕ್ಷೆ ಆರಂಭ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯದಾದ್ಯಂತ ಮೊದಲ ಬಾರಿಗೆ ಟ್ರಾನ್ಸ್‌ಜೆಂಡರ್ ಮೂಲಹಂತದ ಸಮೀಕ್ಷೆ ಆರಂಭವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಸಮೀಕ್ಷೆ ನಡೆಯುತ್ತಿದ್ದು, ವಿಶೇಷ ಅಂಶವೆಂದರೆ ಇದನ್ನು ಲಿಂಗ ಅಲ್ಪಸಂಖ್ಯಾತರ ಸಮುದಾಯದವರೇ ನಡೆಸುತ್ತಿದ್ದಾರೆ. ಈ ಸಮೀಕ್ಷೆಯ ಮುಖ್ಯ ಉದ್ದೇಶ ಟ್ರಾನ್ಸ್‌ಜೆಂಡರ್ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ...

ಮೈಸೂರಿಗೆ ಫ್ಲೈಓವರ್ ಬೇಡ – ಯದುವೀರ್ ಒಡೆಯರ್ ಎಚ್ಚರಿಕೆ!

ಮೈಸೂರು ನಗರದಲ್ಲಿ ನಿರ್ಮಾಣವಾಗಲಿರುವ ಎರಡು ಫ್ಲೈಓವರ್ ಯೋಜನೆಗಳ ವಿರುದ್ಧ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜೆಎಲ್‌ಬಿ ಮತ್ತು ವಿನೋಬಾ ರಸ್ತೆಗಳು ಮೈಸೂರಿನ ಪಾರಂಪರಿಕ ಸೌಂದರ್ಯದ ಸಂಕೇತವಾದ ಪ್ರಮುಖ ರಸ್ತೆಗಳು. ಇವುಗಳಲ್ಲಿ ಫ್ಲೈಓವರ್ ನಿರ್ಮಿಸುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು. ಜನಾಭಿಪ್ರಾಯವನ್ನು ಪಡೆಯದೇ ಸರ್ಕಾರ ಡಿಪಿಆರ್ ಸಿದ್ಧಪಡಿಸುತ್ತಿದೆ...

ಚಾಮರಾಜನಗರ ಮೈಸೂರು ಜಿಲ್ಲೆಯಲ್ಲಿ ಸಫಾರಿಗೆ ಬ್ರೇಕ್‌?

ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ದಿನೇದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಅವರು ಭಾನುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ — ಮಾನವ ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಸಫಾರಿ ನಿರ್ಬಂಧಕ್ಕೆ...

ಮೈಸೂರಿಗೆ ಸುದೀಪ್‌ ರಿಷಬ್ ಸೇರಿ ಸಿನಿತಾರೆಯರ ದಂಡು!

ರಾಜ್ಯ ಸರ್ಕಾರದಿಂದ 2018 ಹಾಗೂ 2019ರ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.3ರಂದು ಸಂಜೆ 5ಕ್ಕೆ ಇಲ್ಲಿನ ಹುಣಸೂರು ರಸ್ತೆಯ KSOU ಘಟಿಕೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಬರ್ಫಿ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ವರ್ಣರಂಜಿತ ವೇದಿಕೆಯನ್ನು ಸಜ್ಜುಗೊಳಿಸುವ ಕಾರ್ಯ ಕೂಡ ಈಗಾಗಲೇ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡೂ ವರ್ಷಗಳ ಪ್ರಶಸ್ತಿ ಪುರಸ್ಕೃತರಿಗೆ...

ಸಿಎಂ ಕ್ಷೇತ್ರ ವರುಣಾದಲ್ಲಿ ಶಾಕ್: ಭಾಗ್ಯಜ್ಯೋತಿ ಫಲಾನುಭವಿಗೆ ಕಿರುಕುಳ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲೇ ಚೆಸ್ಕಾಂ ಸಿಬ್ಬಂದಿಯ ಗೂಂಡಾವರ್ತನೆ ಬೆಳಕಿಗೆ ಬಂದಿದೆ. ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ವಿದ್ಯುತ್ ಬಿಲ್ ಪಾವತಿಸಿಲ್ಲವೆಂಬ ಕಾರಣಕ್ಕೆ ಅಂಧ ವೃದ್ಧೆಯ ಮೇಲೆ ಚೆಸ್ಕಾಂ ಸಿಬ್ಬಂದಿ ದೌರ್ಜನ್ಯ ಎಸಗಿದ ಘಟನೆ ಸ್ಥಳೀಯರಲ್ಲಿ ಆಕ್ರೋಶ ಹುಟ್ಟಿಸಿದೆ. ಮಹದೇವಮ್ಮ ಎಂಬ 80 ವರ್ಷದ ಅಂಧ ವೃದ್ಧೆಯ ಮನೆಗೆ ಚೆಸ್ಕಾಂ ಅಧಿಕಾರಿಗಳು ಬಂದು...

ತಮ್ಮನ ಜೊತೆ ಗಂಡನ ಕೊಲೆಗೆ ಐನಾತಿ ಪತ್ನಿಯ ಮಾಸ್ಟರ್‌ ಪ್ಲ್ಯಾನ್‌!

ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುತ್ತಾರೆ. ಆದರೆ ಮೈಸೂರಿನ ನಂಜನಗೂಡಿನಲ್ಲಿ ಗಂಡ–ಹೆಂಡತಿ ಜಗಳ ಕೊಲೆ ಯತ್ನದ ಹಂತಕ್ಕೆ ತಲುಪಿದ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಸಂಗೀತಾ ಎಂಬ ಮಹಿಳೆ ತನ್ನ ಗಂಡ ರಾಜೇಂದ್ರನನ್ನು ಕೊಲ್ಲಲು ಪ್ಲ್ಯಾನ್ ರೂಪಿಸಿದ್ದಾಳೆ. ಆದರೆ ಆ ಪ್ಲ್ಯಾನ್ ಉಲ್ಟಾ ಹೊಡೆದು ಗಂಡ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ನಂಜನಗೂಡಿನ ನಿವಾಸಿ ರಾಜೇಂದ್ರ...

ಸಿಎಂ ಬದಲಾವಣೆಯಾದರೆ ಅಹಿಂದ ವೋಟ್‌ ಕಾಂಗ್ರೆಸ್‌ಗಿಲ್ಲ !

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹಿಂದ ಸಂಘಟನೆಗಳ ಬೆಂಬಲ ಮತ್ತಷ್ಟು ಗಟ್ಟಿಯಾಗುತ್ತಿದೆ. ಈಗ ಅಹಿಂದ ಮತ್ತು ದಲಿತ ಸಂಘಟನೆಗಳು ಸಿದ್ದರಾಮಯ್ಯ 5 ವರ್ಷಗಳ ಕಾಲ ಸಿಎಂ ಆಗಿರಬೇಕು ಎಂಬ ಬೇಡಿಕೆಯನ್ನು ಮುಂದಿರಿಸಿ ಪತ್ರ ಚಳವಳಿ ಆರಂಭಿಸಿವೆ. ಸಂಘಟನೆಗಳು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿಗೆ ಪತ್ರ ಬರೆದು, ರಾಜ್ಯದ ಪವರ್ ಶೇರಿಂಗ್ ಕುರಿತು ನಡೆಯುತ್ತಿರುವ ಗೊಂದಲಕ್ಕೆ ತಕ್ಷಣ...
- Advertisement -spot_img

Latest News

ಕೆಂಪುಕೋಟೆ ಬಳಿ ಭಾರೀ ಸ್ಫೋಟ — 10 ಸಾವು, 24ಕ್ಕೂ ಹೆಚ್ಚು ಮಂದಿಗೆ ಗಾಯ

ದೆಹಲಿ ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಎರಡು ಕಾರುಗಳು ಸ್ಫೋಟಗೊಂಡ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಮತ್ತು...
- Advertisement -spot_img