ಶ್ರೀರಾಂಪುರದಲ್ಲಿರುವ ತಾಲ್ಲೂಕು ನಾಯಕರ ಸಂಘದ ಆವರಣದಲ್ಲಿ ವರ್ಷಗಳಿಂದ ಅಪೂರ್ಣವಾಗಿರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಕಾಮಗಾರಿಯನ್ನು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಬುಧವಾರ ಸ್ಥಳೀಯವಾಗಿ ಪರಿಶೀಲಿಸಿದರು. ಪರಿಶೀಲನೆಯ ಬಳಿಕ ಸಂಘದ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಸಚಿವರು, ಕಾಲತೀಪು ಕಂಡಿರುವ ವಾಲ್ಮೀಕಿ ಭವನದ ನಿರ್ಮಾಣವನ್ನು ಸಂಪೂರ್ಣಗೊಳಿಸಲು ₹3 ಕೋಟಿ ಹೆಚ್ಚುವರಿ ಅನುದಾನವನ್ನು...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ ಹಿನ್ನೆಲೆಯಲ್ಲಿ, ನಗರದ ನಾಲ್ಕು ದಿಕ್ಕುಗಳಲ್ಲಿ ತಲಾ ಎಂಟು ಎಕರೆ ಜಾಗವನ್ನು ಕೋರಲಾಗಿದೆ.
ಪ್ರಸ್ತುತ ಇರುವ ಹಿಂಕಾಳ್, ಕುವೆಂಪುನಗರ ಮತ್ತು ಸತ್ತಗಳ್ಳಿ ಡಿಪೋಗಳ ಜೊತೆಗೆ, ಹುಣಸೂರು, ಟಿ. ನರಸೀಪುರ, ನಂಜನಗೂಡು...
ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು.
ಪುರುಷರು...
ಮೈಸೂರು ನಗರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಘೋಷಿಸುವಂತೆ ಒತ್ತಾಯಿಸಿ ಇಂದು ಬೈಕ್ ರ್ಯಾಲಿ ಆಯೋಜಿಸಲಾಯಿತು. ಒಕ್ಕಲಿಗ ನೇತೃತ್ವದಲ್ಲಿ ನಡೆದ ಈ ಮೆರವಣಿಗೆ ಒಂಟಿಕೊಪ್ಪಲಿನ ಚಂದ್ರಮೌಳೇಶ್ವರ ದೇಗುಲದಿಂದ ಆರಂಭವಾಗಿ ಅರಮನೆ ಕೋಟೆ ಆಂಜನೇಯಸ್ವಾಮಿ ದೇಗುಲದಲ್ಲಿ ಸಮಾರೋಪಗೊಂಡಿತು.
ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಡಿ.ಕೆ. ಶಿವಕುಮಾರ್ ಅವರ...
ರಾಜ್ಯದ ವ್ಯಾಪ್ತಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ ಒಟ್ಟು ಹತ್ತು ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಅಧಿಕಾರಿಗಳ ಮನೆ–ಕಚೇರಿಗಳ ಮೇಲೆ ದಾಳಿ ನಡೆದಿದೆ. ಹಲವು ಅಧಿಕಾರಿಗಳ ವಸತಿ ಮತ್ತು ಕಚೇರಿಗಳಲ್ಲಿ ಬೃಹತ್ ಪ್ರಮಾಣದ ನಗದು, ಚಿನ್ನ–ಬೆಳ್ಳಿ ಹಾಗೂ ಆಸ್ತಿ ದಾಖಲೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಲೋಕಾಯುಕ್ತ ದಾಳಿಯ...
ಮೈಸೂರು ಜಿಲ್ಲೆಯಲ್ಲಿ 2025ರ ಅಕ್ಟೋಬರ್ 31ರವರೆಗೆ 94 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು, ಇವರಲ್ಲಿ ಏಳು ಮಂದಿ ರೈತ ಮಹಿಳೆಯರು ಸೇರಿದ್ದಾರೆ. 2023ರಿಂದ ಈವರೆಗೆ ಒಟ್ಟಾರೆ 256 ರೈತರು ಸಾವನ್ನಪ್ಪಿದ್ದು, 15 ಮಹಿಳಾ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಅಂಕಿ ಅಂಶಗಳನ್ನು ಮೈಸೂರು ಜಿಲ್ಲಾಡಳಿತವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಪ್ರಗತಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳಿಂದ ಸಂಪ್‌ನಿಂದ ನೀರು ಸೇದಿಸಿ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ್ದಾರೆಯೆಂಬ ವಿಷಯ ಬೆಳಕಿಗೆ ಬಂದು ಆಕ್ಷೇಪ ಎದುರಿಸುತ್ತಿದೆ. ಘಟನೆ ಕೆಲವು ದಿನಗಳ ಹಿಂದೆ ನಡೆದಿದ್ದು, ನವೆಂಬರ್ 20ರಂದು ಗ್ರಾಮಸ್ಥ ಸಿದ್ದರಾಜು ಅವರು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ...
ರಾಜ್ಯ ರಾಜಕೀಯದಲ್ಲಿ ಸದಾ ಚರ್ಚೆಯಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರ ಶಾಸಕ ಮತ್ತು ಹಿಂದು ಹುಲಿ ಎಂದೇ ಖ್ಯಾತಿ ಪಡೆದವರು. ಬಸನಗೌಡ ಪಾಟೀಲ್ ಯತ್ನಾಳ್, ಈ ಬಾರಿ ನೇರವಾಗಿ ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲೇ ರಾಜಕೀಯ ಪೈಪೋಟಿಗೆ ಪದಾರ್ಪಣೆ ಮಾಡಲಿದ್ದಾರೆ. ಹಿಂದೂ ಜಾಗೃತಾ ವೇದಿಕೆ ಆಯೋಜಿಸಿರುವ ಈ ಮಹಾಸಭೆ ಈಗ ಮೈಸೂರು...
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲ ಬಗೆಹರಿದಿಲ್ಲ. ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ಗರಿಗೆದರಿದೆ. ಕಾಂಗ್ರೆಸ್‌ನಲ್ಲಿ ಬಣಗಳ ರಾಜಕೀಯ ತೀವ್ರಗೊಂಡಿರುವ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 20 ಮತ್ತು 21ರಂದು ಮೈಸೂರು ಜಿಲ್ಲೆಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ನವೆಂಬರ್ 20ರಂದು ಮಧ್ಯಾಹ್ನ 3.20ಕ್ಕೆ ಸಿಎಂ ಮೈಸೂರಿಗೆ ಆಗಮಿಸಲಿದ್ದು, ನಗರದಲ್ಲೇ ವಾಸ್ತವ್ಯ ಇರಲಿದ್ದಾರೆ. ನವೆಂಬರ್ 21ರಂದು ಬೆಳಗ್ಗೆ...
ಚಾಮುಂಡಿ ಬೆಟ್ಟದ ಐತಿಹಾಸಿಕ ಏಕಶಿಲಾ ನಂದಿ ವಿಗ್ರಹಕ್ಕೆ ಸೋಮವಾರ ಅದ್ದೂರಿಯಾದ ಮಹಾಭಿಷೇಕ ನೆರವೇರಿತು. ಐದು ನೂರು ವರ್ಷಗಳ ಪಾರಂಪರ್ಯ ಹೊಂದಿರುವ ಈ ಮಹಾಭಿಷೇಕವನ್ನು ನೋಡುವುದಕ್ಕಾಗಿ ಬೆಟ್ಟದ ಗ್ರಾಮಸ್ಥರು ಹಾಗೂ ನೂರಾರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ವಿವಿಧ ಬಣ್ಣಗಳಲ್ಲಿ ಕಂಗೊಳಿಸಿದ ನಂದಿಯನ್ನು ಭಕ್ತಿಭಾವದಿಂದ ಕಣ್ಣಾರೆ ಕಂಡರು.
ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ 20ನೇ ವರ್ಷದ...