ನಾಡಹಬ್ಬ ಮೈಸೂರು ದಸರಾಗೆ ದಿನಗಣನೆ ಪ್ರಾರಂಭವಾಗಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆ ಗಜಪಯಣ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದ್ದು, ಆಗಸ್ಟ್ ೪ ರಂದು ೧೪ ಆನೆಗಳು ಅರಮನೆಗೆ ಎಂಟ್ರಿ ಕೊಡಲಿವೆ.
ನಾಗರಹೊಳೆ ವೀರನಹೊಸಹಳ್ಳಿ ಗ್ರಾಮದ ಬಳಿ ದಸರಾ ಗಜಪಯಣಕ್ಕೆ ಸಕಲ ಸಿದ್ಧತೆ ವೀಕ್ಷಿಸಿ ಮಾತನಾಡಿದರುವ ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭುಗೌಡ ಐ.ಬಿ. ಅವರು,...
ಜವಾಬ್ದಾರಿಯಿಂದ ಕೆಲಸ ಮಾಡದವರು ಹಾಗೂ ಸರ್ಕಾರ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ವರುಣ ಕ್ಷೇತ್ರದ ಮಾಕನಹುಂಡಿ, ಕೂಡನಹಳ್ಳಿ, ಕೋಚನಹಳ್ಳಿ, ಬಸಳ್ಳಿಹುಂಡಿ, ಸೋಮೇಶ್ವರಪುರ, ಕುಂಬ್ರಳ್ಳಿಮಠ ಗ್ರಾಮಗಳಿಗೆ ಬುಧವಾರ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಮಾಕನಹುಂಡಿ ಗ್ರಾಮದಲ್ಲಿ ರಸ್ತೆಯ...
ಮೈಸೂರು:ಮನುಷ್ಯನಿಗೆ ನೆಮ್ಮದಿ ಇಲ್ಲ ಅಂದರೆ, ಅದರಲ್ಲೂ ಕುಟುಂಬದ ವಿಚಾರದಲ್ಲಿ ಬೇಸತ್ತರೇ ಅವನೆಂತ ಗಟ್ಟಿ ಮನುಷ್ಯನಾದರೂ ಆತ್ಮಹತ್ಯೆ ದಾರಿ ಇಡಿಯುತ್ತಾನೆ. ಈಗ ಇದೇ ರೀತಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮದ...
ಮೈಸೂರಿನಲ್ಲಿ ಹೆಚ್ಚಾಗುತ್ತಿರುವ ಡ್ರಗ್ ಪ್ರಕರಣಗಳಿಗೆ ಕಡಿವಾಣ ಹಾಕಲು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ವಶೇಷ ಕಾರ್ಯಚರಣೆಗಳನ್ನು ಕೈಗೊಂಡಿದ್ದಾರೆ. ಈ ಹಿಂದೆಯೂ ನಗರದ ಬಹಳಷ್ಟು ಕಡೆ ದಾಳಿ ಮಾಡಿ ಡ್ರಗ್ ಪೆಡ್ಲರ್ಸ್‌ಗಳನ್ನು ಅರೆಸ್ಟ್ ಕೂಡ ಮಾಡಿದ್ರು. ದೊಡ್ಡ ಮೊತ್ತದ ಡ್ರಗ್ ಗಳನ್ನು ವಶಪಡಿಸಿಕೊಂಡಿದ್ದರು.
ಇದೀಗ ನಗರದಲ್ಲಿ ಮಾದಕವಸ್ತು ತಯಾರಿಕಾ ಘಟಕ ಪತ್ತೆ ಬಳಿಕ ಎಚ್ಚೆತ್ತ...
ಮೈಸೂರು: ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ 30,000 ಕ್ಯೂಸೆಕ್ ಮತ್ತು ತಾರಕ ಜಲಾಶಯದಿಂದ 9,500 ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟಿರುವುದರಿಂದ ಎಚ್.ಡಿ. ಕೋಟೆ ತಾಲ್ಲೂಕಿನ ಹಂಪಾಪುರ ಸಮೀಪದ ಮಾದಾಪುರ-ಚಕ್ಕೂರು ಸೇತುವೆ ಮುಳುಗಡೆಯ ಹಂತ ತಲುಪಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಕೇರಳ ರಾಜ್ಯದ ವಯನಾಡು ಮತ್ತು ನಾಗರಹೊಳೆ ಅಭಯಾರಣ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಜಲಾಶಯಗಳಿಗೆ ಒಳಹರಿವಿನ...
ಮೈಸೂರಿನ ಬನ್ನಿಮಂಟಪದಲ್ಲಿ ಹೊಸದಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. ಅದಕ್ಕೆ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ವಿನ್ಯಾಸವನ್ನು ಅಂತಿಮಗೊಳಿಸಲಾಗಿದೆ. ಕಟ್ಟಡದ ಮುಂಭಾಗದ ಹೊರಮೇಲ್ಮ ಅರಮನೆಯಂತೆ ಕಾಣುವಂತೆ ನಿರ್ಮಿಸುವ ಯೋಜನೆಗೆ ಅನುಮೋದನೆ ನೀಡಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಎರಡು ವರ್ಷಗಳಲ್ಲಿ ನಗರದಲ್ಲಿ ಮತ್ತೊಂದು ಬಸ್ ನಿಲ್ದಾಣ ತಲೆ ಎತ್ತಲಿದ್ದು, ಅಂಬಾವಿಲಾಸ ಅರಮನೆಯ ಪ್ರತಿರೂಪದಂತೆ ಮೈದಳೆಯಲಿದೆ. ಅಲ್ಲಿರುವ ಕೆಎಸ್‌ಆರ್‌ಟಿಸಿಗೆ...
ಇಂದು ನಾಲ್ಕನೇ ಆಷಾಡ ಶುಕ್ರವಾರ. ಚಾಮುಂಡಿ ಬೆಟ್ಟದಲ್ಲಿ ಶಕ್ತಿ ದೇವತೆಯ ದರ್ಶನಕ್ಕೆ ಮುಂಜಾನೆಯಿಂದ ಭಕ್ತ ಸಾಗರವೇ ಹರಿದು ಬರುತ್ತಿದೆ. ತಾಯಿ ಚಾಮುಂಡೇಶ್ವರಿ ಸಿಂಹವಾಯಿನಿ ವಿಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಇಂದು ಸಿಎಂ ಅವರ ಪತ್ನಿ ಹಾಗೂ ಸೊಸೆ ಕೂಡ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
ಇಂದು ಕಡೆ ಶುಕ್ರವಾರ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ...
2015, 2016ರಲ್ಲಿ ಕೇಂದ್ರ ಸರ್ಕಾರವು ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ಸತತ 2 ಬಾರಿ ಅಗ್ರಸ್ಥಾನ ಪಡೆದಿತ್ತು, ನಂತರ ರ್ಯಾಂಕಿಂಗ್‌ನಲ್ಲಿ ಕುಸಿತವನ್ನೇ ಕಂಡಿತ್ತು. ಆದರೆ ದಶಕದ ಬಳಿಕ 2024-25ನೇ ಸಾಲಿನ ಸೂಪರ್ ಸ್ವಚ್ಛ ನಗರ ಲೀಗ್ ನಲ್ಲಿ 'ಸ್ವಚ್ಛ ನಗರಿ' ಶ್ರೇಯಕ್ಕೆ ಮೈಸೂರು ಮತ್ತೆ ಪಾತ್ರವಾಗಿದೆ. ಇದು ಮೈಸೂರಿಗರಿಗೆ ಹೆಮ್ಮೆ ಮತ್ತು ಸಂತೋಷ ತಂದಿದೆ...
ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ದೇವಾಲಯದ ದಾಸೋಹ ಭವನದಲ್ಲಿ ಬುಧವಾರ 31 ಹುಂಡಿಗಳ ಎಣಿಕೆ ಕಾರ್ಯ ನಡೆಯಿತು. ಈ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಎಣಿಕೆ ಮಾಡಿದ ನಂತರ, ಸುಮಾರು 1.8 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ ಎಂದು ವರದಿಯಾಗಿದೆ.
ಇದರಲ್ಲಿ ₹1,80,67,108 ನಗದು, 74.5 ಗ್ರಾಮ್ ಚಿನ್ನ, 1.78 ಕೆ.ಜಿ ಬೆಳ್ಳಿ,...
ಒಂದು ಕಡೆ ಸಿಎಂ ಬದಲಾವಣೆ ವಿಚಾರ ಇನ್ನು ಇತ್ಯರ್ಥ ಆಗಿಲ್ಲ. ಇನ್ನೊಂದು ಕಡೆ ದೆಹಲಿಯಲ್ಲೇ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಅನ್ನೋ ಹೊಸ ದಾಳ ಉರುಳಿಸಿದ್ದಾರೆ. 2 ಎರಡೂ ಘಟನೆಯ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಅದು ಕೂಡ ಅವರ ತವರು ಜಿಲ್ಲೆ ಮೈಸೂರಿನಲ್ಲೇ. ಜುಲೈ 19ರಂದು...