ಅಮೆರಿಕದ AST ಸ್ಪೇಸ್ ಮೊಬೈಲ್ ಕಂಪನಿಗೆ ಸೇರಿದ ಬ್ಲೂಬರ್ಡ್ ಬ್ಲಾಕ್–2 ಉಪಗ್ರಹವನ್ನು ಇಸ್ರೋ ತನ್ನ ಬಲಿಷ್ಠ ಬಹುಪ್ರಚಲಿತ ‘ಬಾಹುಬಲಿ’ ರಾಕೆಟ್ ಅಂತ ಪ್ರಖ್ಯಾತಿ ಪಡೆದಿರುವ LVM3–M6 ಮೂಲಕ ಬುಧವಾರ ಯಶಸ್ವಿಯಾಗಿ ಕೆಳಕಕ್ಷೆಗೆ ಸೇರಿಸಿದೆ. ಇದು ಇಸ್ರೋ ಇದುವರೆಗೆ ಭಾರತದಿಂದ ಉಡಾಯಿಸಿದ ಅತಿ ಭಾರದ ಉಪಗ್ರಹ ಎಂಬ ಹೆಗ್ಗಳಿಕೆಯನ್ನು ಪಡೆದಿದೆ.
ಬುಧವಾರ ಬೆಳಿಗ್ಗೆ 9.55ಕ್ಕೆ ಶ್ರೀಹರಿಕೋಟಾದ ಸತೀಶ್...
ದಿತ್ವಾಹ್ ಚಂಡಮಾರುತದಿಂದ ತೀವ್ರವಾಗಿ ತತ್ತರಿಸಿರುವ ಶ್ರೀಲಂಕೆಗೆ ಭಾರತ ಸರ್ಕಾರವು 450 ದಶಲಕ್ಷ ಅಮೆರಿಕನ್ ಡಾಲರ್ ಪರಿಹಾರ ಪ್ಯಾಕೇಜ್ ಘೋಷಿಸಿದೆ. ಶ್ರೀಲಂಕಾದ ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕಾರ್ಯಗಳಿಗೆ ಸಂಪೂರ್ಣ ನೆರವು ನೀಡಲು ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ರಾಯಭಾರಿಯಾಗಿ ಕೊಲಂಬೊಗೆ...
ರಾಜ್ಯದ ಹಣಕಾಸು ಸ್ಥಿತಿಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಂಡನೆಯಾದ ಮಧ್ಯವಾರ್ಷಿಕ ಪರಿಶೀಲನಾ ವರದಿ, ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಎದುರಿಸಬೇಕಾದ ಗಂಭೀರ ಆರ್ಥಿಕ ಸವಾಲುಗಳ ಸ್ಪಷ್ಟ ಚಿತ್ರಣವನ್ನು ನೀಡಿದೆ. ಕೇಂದ್ರ ಸರ್ಕಾರ ಕೈಗೊಂಡಿರುವ GST ದರಗಳ ತರ್ಕಬದ್ಧಗೊಳಿಸುವ ನಿರ್ಧಾರವು ರಾಜ್ಯದ ಆದಾಯ ಮೂಲಗಳ ಮೇಲೆ ದೊಡ್ಡ ಹೊಡೆತ ನೀಡುವ ಸಾಧ್ಯತೆ ಇದೆ ಎಂಬ ಆತಂಕವನ್ನು ಈ...
ಕರ್ನಾಟಕ ಅಪಾರ್ಟ್ಮೆಂಟ್ ವಿಧೇಯಕ–2025 ಕುರಿತು ಅಪಾರ್ಟ್ಮೆಂಟ್ ಅಸೋಸಿಯೇಷನ್ಗಳ ಪ್ರತಿನಿಧಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದ ವೇಳೆ, ಕಿರಣ್ ಹೆಬ್ಬಾರ್ ಎಂಬಾತ ತಮಗೆ ಬರೆದಿದ್ದ ಪತ್ರವನ್ನು ಡಿಕೆ.ಶಿವಕುಮಾರ್ ವೇದಿಕೆಯ ಮೇಲೆಯೇ ಓದಿ ಪ್ರತಿಕ್ರಿಯಿಸಿದರು. ಆ ಪತ್ರದಲ್ಲಿ ತಾನು ಅಪಾರ್ಟ್ಮೆಂಟ್ ಮಾಲಿಕ ಎಂದು ಹೇಳಿಕೊಂಡಿರುವ...
ರಾಜ್ಯದ ರೈತರ ನೆರವಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಇದರಡಿ, ಕರ್ನಾಟಕದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಮೂಲಕ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಅನುಮೋದನೆ ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ನಫೆಡ್ ಹಾಗೂ NCCF...
ಭಾರತದ ಬೆಳಕಿನ ಹಬ್ಬ ದೀಪಾವಳಿಗೆ ಜಾಗತಿಕ ಮನ್ನಣೆ ದೊರೆತಿದೆ. ದೀಪಾವಳಿಯನ್ನು ಯುನೆಸ್ಕೋದ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಅಧಿಕೃತವಾಗಿ ಸೇರಿಸಲಾಗಿದೆ. ಡಿಸೆಂಬರ್ 10 ರಂದು ದೆಹಲಿಯ ಕೆಂಪು ಕೋಟೆಯಲ್ಲಿನಡೆದ ಯುನೆಸ್ಕೋದ ಅಂತರರಾಷ್ಟ್ರೀಯ ಸಮಿತಿಯ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು. ಭಾರತ ಮೊದಲ ಬಾರಿಗೆ ಈ ಸಮಿತಿಯ ಸಭೆಯನ್ನು ಆಯೋಜಿಸಿದ್ದು, ದೀಪಾವಳಿಯ ಸೇರ್ಪಡೆಯು ದೇಶದ...
ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ ಸಹಿತ ವೇದ ಮಂತ್ರಗಳ ಪಠನದೊಂದಿಗೆ ಬರಮಾಡಿಕೊಳ್ಳಲಾಯಿತು.
ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿ ಪರ್ಯಾಯ ಮಠಾಧೀಶರಾದ ಪುತ್ತಿಗೆ ಮಠದ...
17 ವರ್ಷಗಳ ಬಳಿಕ ಕೃಷ್ಣನಗರಿಗೆ ಉಡುಪಿಗೆ ಪ್ರಧಾನಿ ಮೋದಿ ಅವರ ಆಗಮನವಾಗಿದೆ. 2008ರ ಮೇ 8ರಂದು ಪ್ರಧಾನಿ ಆಗುವುದಕ್ಕೂ ಮುನ್ನ ಮೊದಲ ಬಾರಿಗೆ ಆಗಮಿಸಿದ್ದರು. ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಿಂದ ಸೇನಾ ಹೇಲಿಕಾಪ್ಟರ್ನಲ್ಲಿ ಉಡುಪಿಗೆ ಬಂದಿಳಿದ ಮೋದಿ ಸುಮಾರು 2 ಕಿಮೀ ವರೆಗೆ ಅದ್ಧೂರಿ ರೋಡ್ ಶೋ ನಡೆಸಿದ್ದಾರೆ.
ಪ್ರಧಾನಿಗಳ ಆಗಮನಕ್ಕಾಗಿ ಬೆಳಗ್ಗಿನಿಂದಲೂ ಕಾದು...
ಉಡುಪಿ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಭಗವದ್ಗೀತೆ ಪಠಣ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿಯುವ ನಮೋ, ಉಡುಪಿಗೆ ಸೇನಾ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ. ಪ್ರಧಾನಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ್ ಆದೇಶಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ...
ಅಯೋಧ್ಯೆಯ ಪವಿತ್ರ ಭೂಮಿಯಲ್ಲಿ ಇಂದು ಐತಿಹಾಸಿಕ ಘಟನೆ ನಡೆದಿದೆ. ಸಾವಿರಾರು ವರ್ಷಗಳ ಸಂಸ್ಕೃತಿ, ಭಕ್ತಿ ಮತ್ತು ತ್ಯಾಗದ ಸಂಕೇತವಾದ ಧರ್ಮಧ್ವಜ ದಿವ್ಯವಾಗಿ ಅರಳಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಇದು ಕೇವಲ ಧ್ವಜವಲ್ಲ; ಕೋಟ್ಯಂತರ ರಾಮಭಕ್ತರ ಸಂಕಲ್ಪ, ಸತ್ಯ ಮತ್ತು ಧರ್ಮದ ಪ್ರತೀಕ ಎಂದು...