ಬಿಡದಿಯಲ್ಲಿ ಟೌನ್‌ಶಿಪ್ ಯೋಜನೆಗಾಗಿ ನಡೆಯುತ್ತಿರುವ ಭೂಸ್ವಾಧೀನಕ್ಕೆ ವಿರೋಧವಾಗಿ ರೈತರು ಕಳೆದ 13 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಈಗ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸೇರಿದಂತೆ ಹಲವು ದಳಪತಿಗಳು ಬೆಂಬಲ ನೀಡಲು ಆಗಮಿಸುತ್ತಿದ್ದು, ಹೋರಾಟದ ಕಿಚ್ಚು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ಬಿಡದಿ ಹೋಬಳಿಯ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ...
ಬೆಂಗಳೂರು ರಸ್ತೆ ಗುಣಮಟ್ಟ ಮತ್ತು ಉದ್ಯಮಿಗಳು ನಗರ ಬಿಟ್ಟು ಹೋಗುವ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಮಾತಿನ ಚಕಮಕಿ ತೀವ್ರವಾಗಿದೆ. ಈಗ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡಾ ಚರ್ಚೆಗೆ ಎಂಟ್ರಿ ಕೊಟ್ಟಿದ್ದಾರೆ.
ಡಿಕೆ ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡ ನಿಖಿಲ್, ನಿಮ್ಮಲ್ಲೇ ಮೂಲಭೂತ ಸಮಸ್ಯೆ...
ಬೆಂಗಳೂರು ರಸ್ತೆ ಗುಂಡಿಗಳ ವಿಚಾರ ಇದೀಗ ತೀವ್ರ ರಾಜಕೀಯ ಹಾದಿ ಹಿಡಿದಿದೆ. ಬ್ಲಾಕ್‌ಬಕ್ ಕಂಪನಿಯ ಸಿಇಒ ಅವರ ಟ್ವೀಟ್ ನಂತರ ಈ ವಿಷಯ ಎಲ್ಲೆಡೆ ಚರ್ಚೆಯಾಗುತ್ತಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವುದಾಗಿ ಘೋಷಿಸಿದ್ದಾರೆ. ಆದರೆ, ವಿರೋಧ ಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ...
ರಾಜ್ಯ ರಾಜಕಾರಣದಲ್ಲಿ ಭಾರೀ ಚಟುವಟಿಕೆಗಳ ನಡುವೆ ಬಿಜೆಪಿಯ ಸಂಘಟಿತ ಹೋರಾಟಗಳು ಜೆಡಿಎಸ್ ಮೇಲೆ ತೀವ್ರ ಒತ್ತಡವನ್ನು ಉಂಟುಮಾಡಿವೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಗಲಾಟೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಕೇಸರಿ ಶಕ್ತಿ ಪ್ರದರ್ಶನ ನಡೆಸಿದೆ. ಈಗ ಇದು ಜೆಡಿಎಸ್‌ಗೆ ತಲೆನೋವಾಗಿ ಪರಿಣಮಿಸಿದೆ.
ಚುನಾವಣಾ ಮೈತ್ರಿಯ ಬೆನ್ನಲ್ಲೇ ಬಿಜೆಪಿ ಇದೀಗ ಸರ್ಕಾರದ ವಿರುದ್ಧ ಉಗ್ರ ಹೋರಾಟಕ್ಕೆ ಕೈ...
ರಾಮನಗರ ರಾಜಕೀಯದಲ್ಲಿ ಮತ್ತೆ ಚರ್ಚೆ ಶುರುವಾಗಿದೆ. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಇತ್ತೀಚೆಗೆ ಕಾರ್ಯಕರ್ತರ ಸಭೆಯಲ್ಲಿ ಬಿರುಸಿನ ಹೇಳಿಕೆ ನೀಡಿದ್ದಾರೆ. ದ್ವೇಷ ರಾಜಕಾರಣ ಹೆಚ್ಚಾಗಿದ್ದು, ಅದನ್ನು ಎಂದಿಗೂ ಸಹಿಸುವುದಿಲ್ಲ ಎಂದು ಗರಂ ಆಗಿದ್ದಾರೆ.
ಹಾರೋಹಳ್ಳಿಯ ಅಂಚಿಬಾರೆಯ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ನಿಖಿಲ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಶಾಸಕರಿದ್ದಾಗ ದ್ವೇಷದ ರಾಜಕಾರಣ...
ಕಾಂಗ್ರೆಸ್ ಪಕ್ಷದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಮುಂದಿನ ವಿಧಾನಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ನೆಲಮಂಗಲದಲ್ಲಿ ಜೆಡಿಎಸ್ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಸಂಘಟನಾ ಪ್ರವಾಸವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ 151...
ರಾಜ್ಯದಲ್ಲಿ ಅಧಿಕಾರಿಗಳ ಮೇಲೆ ಕಾಂಗ್ರೆಸ್ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್ ಸರ್ಕಾರ 1800 ಕೋಟಿ ರೂ. ಲೂಟಿಗೆ, ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ. ಹೀಗಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ನೆಲಮಂಗಲದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ...
ಶಿವಮೊಗ್ಗ : ಜೆಡಿಎಸ್ ಪಕ್ಷದ ಸಂಘಟನೆಯ ಛಲ ಹೊತ್ತು ರಾಜ್ಯಾದ್ಯಂತ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರವಾಸದಲ್ಲಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದತ್ತ ಯುವ ಸಮೂಹವನ್ನು ಸೆಳೆಯುವುದರೊಂದಿಗೆ ಕಾರ್ಯಕರ್ತರ ನೋವು- ನಲಿವುಗಳಿಗೆ ಧ್ವನಿಯಾಗುತ್ತಿದ್ದಾರೆ.
ಈಗಾಗಲೇ ನಿಖಿಲ್ ಉತ್ತರ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಮ್ಮ...
ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ ಇಳಿಕೆಯಾಗುತ್ತ ಬರುತ್ತಿದೆ. ಜೆಡಿಎಸ್ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರುವುದಿಲ್ಲ ಎಂದು ವ್ಯಂಗ್ಯವಾಡಿದ್ದರು.
ಆದರೆ ಇದೇ ವಿಚಾರಕ್ಕೆ ಸಿದ್ದರಾಮಯ್ಯ ಅವರಿಗೆ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೌಂಟರ್...
ಬೆಂಗಳೂರು : ರಾಜ್ಯದಲ್ಲಿ ಯುಪಿಐ ಹಾಗೂ ಡಿಜಿಟಲ್ ವಹಿವಾಟು ಆಧರಿಸಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸಣ್ಣಪುಟ್ಟ ವ್ಯಾಪಾರಿಗಳಿಗೆ ದಂಡದ ಜೊತೆ ಜಿಎಸ್ಟಿ ಪಾವತಿ ಮಾಡುವಂತೆ ನೋಟಿಸ್ ನೀಡುತ್ತಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಗಣನೀಯ ಸಂಖ್ಯೆಯಲ್ಲಿ ಸಣ್ಣ ವ್ಯಾಪಾರಸ್ಥರು ಡಿಜಿಟಲ್ ಪಾವತಿಗಳನ್ನು ಬಿಟ್ಟು ನಗದು ವಹಿವಾಟಿಗೆ ಮರಳುತ್ತಿದ್ದಾರೆ. ಅಲ್ಲದೆ ಸರ್ಕಾರದ ನೋಟಿಸ್ ವಿರುದ್ಧ...