ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...