ಬೆಂಗಳೂರು: ಬಸವರಾಜ ಬೊಮ್ಮಾಯಿಯವರು ಅಭಿವೃದ್ಧಿಗೆ ಗರಿಷ್ಠ ಕೊಡುಗೆ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇಲ್ಲಿನ ಜನೋತ್ಸಾಹ, ಭಾರಿ ಕರತಾಡನ ಗಮನಿಸಿದರೆ ಬೊಮ್ಮಾಯಿಯವರ ಗೆಲುವು ನಿಶ್ಚಿತವಾಗಿದೆ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ತಿಳಿಸಿದರು.
ಶಿಗ್ಗಾವಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸೇರಿದ್ದ ಜನಸಾಗರವನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ವಿಕಾಸದ ಗಂಗಾನದಿ...
ಸಕಲೇಶಪುರ: ಕಾಂಗ್ರೆಸ್ ಪಕ್ಷದ ವತಿಯಿಂದ ಸಕಲೇಶಪುರ-ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುರುಳಿಮೋಹನ್ ನಾಮಪತ್ರ ಸಲ್ಲಿಸಿದರು.
ಬೆಳಿಗ್ಗೆ 11ಗಂಟೆಗೆ ಶುಭ ಮಹೂರ್ತವಿದ್ದ ಕಾರಣ ಮೊದಲಿಗೆ ಮುರುಳಿಮೋಹನ್ ಪಟ್ಟಣದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಅನ್ಮೋಲ್ ಜೈನ್‌ರವರಿಗೆ ನಾಮಪತ್ರ ಸಲ್ಲಿಸಿದ ನಂತರ ಶಕ್ತಿ ಪದರ್ಶನದ ರ್ಯಾಲಿಯಲ್ಲಿ ಭಾಗಿಯಾಗಿದ್ದರು.
ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಹಾಗೂ...
ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸೋಮಣ್ಣರನ್ನ ನಿಲ್ಲಿಸಿದ್ದು, ಈ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು. ಅದಕ್ಕೆ ಇಂದು ರಿಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಪ್ರಶ್ನೆ ಕೇಳುವ ಮೂಲಕ ಟಾಂಗ್ ಕೊಟ್ಟಿದ್ದಾರೆ.
ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ, ಇಲ್ಲಿನ ಮಣ್ಣಿನ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ....
ವರುಣಾ: ಇಂದು ವರುಣಾ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಮೈಸೂರಿನ ಚಾಮುಂಡೇಶ್ವರಿ ದೇವಿಯ ದರ್ಶನ ಮಾಡಿದ ಸಿದ್ದರಾಮಯ್ಯ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹುಟ್ಟೂರಾದ ಸಿದ್ದರಾಮನ ಹುಂಡಿಯ ಸಿದ್ದರಾಮೇಶ್ವರ ದೇವಾಲಯ ಹಾಗೂ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ...
ಬೆಂಗಳೂರು: ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಈ ಲೀಸ್ಟ್‌ನಲ್ಲಿ ಬಿಜೆಪಿಯಿಂದ ವಲಸೆ ಬಂದಿರುವ ಜಗದೀಶ್ ಶೆಟ್ಟರ್‌ಗೂ ಸ್ಥಾನ ಸಿಕ್ಕಿದ್ದು, ಒಟ್ಟು 40 ನಾಯಕರ ಹೆಸರಿದೆ.
ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಸಾಧು ಕೋಕಿಲಾ, ಶಶಿ ತರೂರ್, ಪಿ.ಚಿದಂಬರಂ, ಅಶೋಕ್ ಗೆಹ್ಲೋಟ್,...
ಹಾವೇರಿ: ಹಾವೇರಿಯಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿರುವ ಬೊಮ್ಮಾಯಿಗೆ ನಟ ಕಿಚ್ಚ ಸುದೀಪ್ ಸೇರಿ, ಹಲವಾರು ರಾಜಕೀಯ ನಾಯಕರು ಸಾಥ್ ನೀಡಿದ್ದಾರೆ.
ಇಂದು ಹಾವೇರಿ ಸವಣೂರಿನಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆದಿದ್ದು, ಇದರಲ್ಲಿ ಸಿಎಂ ಬೊಮ್ಮಾಯಿ, ಕಿಚ್ಚ ಸುದೀಪ್, ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಸೇರಿ...
ಹಾಸನ: ಹಾಸನದಲ್ಲಿಂದು ಜೆಡಿಎಸ್ ಸಭೆ ನಡೆದಿದ್ದು, ಈ ವೇಳೆ ಭಾಷಣ ಮಾಡಿದ ರೇವಣ್ಣ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜೆಡಿಎಸ್ ನಮ್ಮಅಭ್ಯರ್ಥಿ ಸ್ವರೂಪ್ ಗೆ ಟಿಕೆಟ್ ನೀಡಿದೆ. ಭವಾನಿಯವರೇ ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿ ಟಿಕೆಟ್ ನೀಡುವಂತೆ ಹೇಳಿದ್ದರು. ನನಗೆ ನಮ್ಮ ಮಾವ ದೇವೆಗೌಡರ ಆರೋಗ್ಯ ಮುಖ್ಯ ಎಂದು ನಿರ್ಧಾರ ಮಾಡಿದ್ದಾರೆ. ಮೇ೧೦ ರಂದು ನಡೆಯುವ...
ಹಾಸನ: ಹಾಸನದಲ್ಲಿಂದು ಜೆಡಿಎಸ್ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಪ್ರೀತಂಗೌಡ ವಿರುದ್ಧ ಹರಿಹಾಯ್ದಿದ್ದಾರೆ.
ರೇವಣ್ಣ ಫ್ಯಾಮಿಲಿ ಪ್ರಚಾರಕ್ಕೆ ಬರ್ತಾರೋ ಇಲ್ವೋ ಅಂತಾ ಅನುಮಾನ ಇತ್ತು. ಟಿಕೆಟ್ ಹಾಗೂ ಪ್ರಯತ್ನ ಮಾಡಿದ್ದು ನಿಜ. ಟಿಕೆಟ್ ಘೋಷಣೆಯಾದ ಬಳಿಕ ರೇವಣ್ಣ ಫ್ಯಾಮಿಲಿ ಜೆಡಿಎಸ್ ಪಕ್ಷಕ್ಕೆ ನಿಷ್ಠೆಯಾಗಿರುತ್ತೇವೆ. ನಾವು ಬಹಳ ಸಮಯವನ್ನು ಹಾಳುಮಾಡಿಕೊಂಡಿದ್ದೇವೆ....