ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ನಾಯಕತ್ವದ ಬದಲಾವಣೆಯಿಲ್ಲ. ಐದು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಖುದ್ದು ಸಿದ್ದರಾಮಯ್ಯ ಅವರೇ ಪುನರುಚ್ಚರಿಸುವ ಮೂಲಕ ಎಲ್ಲ ಚರ್ಚೆಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ನವದೆಹಲಿಯಲ್ಲಿ ಹೈಕಮಾಂಡ್ ಭೇಟಿಗೂ ಮುನ್ನ ನೀಡಿರುವ ಹೇಳಿಕೆಯು ಸಾಕಷ್ಟು ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಈ ನಡುವೆಯೇ ಸಿದ್ದು...