ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ʻಚಾವುಂಡರಾಯ ಪ್ರಶಸ್ತಿʼ ಪ್ರಕಟಗೊಂಡಿದೆ. ಶ್ರವಣಬೆಳಗೊಳದ ಶ್ರೀ ಎಸ್.ಡಿ.ಜಿ.ಎಂ.ಎ ಮ್ಯಾನೇಜ್ಮೆಂಟ್ ಕಮಿಟಿಯ ವತಿಯಿಂದ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿಭಟ್ಟಾರಕ ಮಹಾಸ್ವಾಮಿಗಳು ನೀಡಿರುವ ದತ್ತಿಯ ೨೦೨೨ನೇ ಸಾಲಿನ ಚಾವುಂಡಾಯ ಪ್ರಶಸ್ತಿಗೆ ಹಿರಿಯ ಲೇಖಕ ವಿದ್ವಾಂಸ ಪ್ರೊ. ಕೆ.ಇ.ರಾಧಾಕೃಷ್ಣ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ...